ನವದೆಹಲಿ (ಜ. 29): ಇಂದಿನಿಂದ ಸಂಸತ್ನ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬಜೆಟ್ ಅಧಿವೇಶನದ ಮೊದಲ ದಿನವಾದ ಇಂದು ಜಂಟಿ ಸದನವನ್ನು ಉದ್ದೇಶಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣ ಮಾಡಲಿದ್ದಾರೆ. ಆದರೆ, ಕಾಂಗ್ರೆಸ್, ಎನ್ಸಿಪಿ, ಆಮ್ ಆದ್ಮಿ ಪಕ್ಷ ಸೇರಿದಂತೆ 16 ವಿರೋಧ ಪಕ್ಷಗಳು ರಾಷ್ಟ್ರಪತಿ ಭಾಷಣವನ್ನು ಬಹಿಷ್ಕರಿಸಲಿವೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ವಿಪಕ್ಷಗಳು ರಾಷ್ಟ್ರಪತಿಗಳ ಭಾಷಣವನ್ನು ಬಹಿಷ್ಕರಿಸಲು ನಿರ್ಧರಿಸಿವೆ. ಇಂದಿನಿಂದ ಫೆ. 15ರವರೆಗೆ ಮೊದಲ ಹಂತದ ಸಂಸತ್ ಬಜೆಟ್ ಅಧಿವೇಶನ ನಡೆಯಲಿದೆ. ಮಾ. 8 ರಿಂದ ಏ. 8ರವರೆಗೆ ಎರಡನೇ ಹಂತದ ಅಧಿವೇಶನ ನಡೆಯಲಿದೆ. ಫೆಬ್ರವರಿ 1ಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಲಿದ್ದಾರೆ.
ಸಂಸತ್ ಅಧಿವೇಶನದಲ್ಲಿ ಪಾಲ್ಗೊಳ್ಳುವ ಸಂಸದರು RT-PCR ಟೆಸ್ಟ್ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ. ಕೊರೋನಾ ಕಾರಣಕ್ಕೆ ನಿಯಮಾವಳಿಗಳಲ್ಲಿ ಬದಲಾವಣೆ ಮಾಡಲಾಗಿದ್ದು, ಶಿಫ್ಟ್ನಲ್ಲಿ ಅಧಿವೇಶನ ನಡೆಸಲು ನಿರ್ಧಾರ ಮಾಡಲಾಗಿದೆ. ಇಂದು ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ರಾಜ್ಯಸಭೆ ಕಲಾಪ ನಡೆಯಲಿದ್ದು, ಸಂಜೆ 4ರಿಂದ ರಾತ್ರಿ 9 ಗಂಟೆವರೆಗೆ ಲೋಕಸಭೆ ಕಲಾಪ ನಡೆಯಲಿದೆ. ಮಧ್ಯೆ 2 ಗಂಟೆಗಳ ಬಿಡುವಿನಲ್ಲಿ ಕಟ್ಟಡಕ್ಕೆ ಸ್ಯಾನಿಟೈಸ್ ಮಾಡಲಾಗುವುದು.
Budget session of Parliament to begin today with President Ram Nath Kovind's Address; Union Budget to be tabled on 1st February. pic.twitter.com/wDAgGxLHFk
— ANI (@ANI) January 29, 2021
ಇದನ್ನೂ ಓದಿ: Union Budget 2021: ಜನವರಿ 29 ರಿಂದ ಸಂಸತ್ ಅಧಿವೇಶನ : ಫೆಬ್ರವರಿ 1ಕ್ಕೆ ಬಜೆಟ್ ಮಂಡನೆ
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಮೂರು ಕೃಷಿ ಕಾಯ್ದೆಯ ವಿರುದ್ಧ ಬಹುತೇಕ ಎಲ್ಲಾ ವಿರೋಧ ಪಕ್ಷಗಳು ಆರಂಭದಿಂದಲೂ ಅಸಮಾಧಾನ ವ್ಯಕ್ತಪಡಿಸುತ್ತಲೇ ಇದ್ದವು. ಆದರೆ, ಕೊರೋನಾ ಲಾಕ್ಡೌನ್ ಸಂದರ್ಭವನ್ನು ಬಳಸಿಕೊಂಡಿದ್ದ ಕೇಂದ್ರ ಬಿಜೆಪಿ ಸರ್ಕಾರ ಲಾಕ್ಡೌನ್ ಸಂದರ್ಭದಲ್ಲಿ ಕೃಷಿ ಕಾಯ್ದೆಗಳ ಬಗ್ಗೆ ಸಂಸತ್ನಲ್ಲಿ ಚರ್ಚೆ ನಡೆಸದೆ ಸುಗ್ರೀವಾಜ್ಞೆ ಮೂಲಕ ಈ ವಿವಾದಾತ್ಮಕ ಕಾಯ್ದೆಯನ್ನು ಜಾರಿಗೆ ತಂದಿತ್ತು. ಹೀಗಾಗಿ, ಆ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಸಂಸತ್ನಲ್ಲಿ ವಿಪಕ್ಷಗಳು ಒತ್ತಾಯಿಸುವ ಸಾಧ್ಯತೆಯಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ