ನವ ದೆಹಲಿ (ಫೆಬ್ರವರಿ 02); ಕೇಂದ್ರ ಸರ್ಕಾರದ ಮೂರು ನೂತನ ಕೃಷಿ ಕಾಯ್ದೆಯ ವಿರುದ್ಧ ದೇಶದ ರೈತರ ಕಳೆದ ಎರಡು ತಿಂಗಳಿನಿಂದ ಸತತ ಹೋರಾಟ ನಡೆಸುತ್ತಿದ್ದಾರೆ. ಇನ್ನೂ ಪಂಜಾಬ್ ಮತ್ತು ಹರಿಯಾಣ ರೈತರು ದೆಹಲಿಯ ಹೊರವಲಯದಲ್ಲಿರುವ ಸಿಂಘು ಗಡಿಯಲ್ಲಿ ಹೋರಾಟ ನಿರತರಾಗಿದ್ದಾರೆ. ಜನವರಿ 26 ರಂದು ದೆಹಲಿಯಲ್ಲಿ ಟ್ರ್ಯಾಕ್ಟರ್ ರ‍್ಯಾಲಿ ನಡೆಸುವ ಮೂಲಕ ಶಕ್ತಿ ಪ್ರದರ್ಶ ಮಾಡಿದ್ದ ರೈತರು ಜನವರಿ.30 ರಂದು ಉಪವಾಸ ಸತ್ಯಾಗ್ರಹವನ್ನು ಆಚರಿಸಿದ್ದರು. ಇದಲ್ಲದೆ ಗಣರಾಜ್ಯೋತ್ಸವದ ಗಲಭೆ ಬೆನ್ನಿಗೆ ಪಂಜಾಬ್, ಹರಿಯಾಣ ಮತ್ತು ಉತ್ತರಪ್ರದೇಶದಿಂದ ದೆಹಲಿಗೆ ಆಗಮಿಸುತ್ತಿರುವ ರೈತರ ಸಂಖ್ಯೆ ದಿನಿದಿಂದ ದಿನಕ್ಕೆ ಅಧಿಕವಾಗುತ್ತಲೇ ಇದೆ. ಹೀಗಾಗಿ ಹೆಚ್ಚಿನ ರೈತರು ಪ್ರತಿಭಟನೆಗೆ ಬಂದು ಸೇರದಂತೆ ತಡೆಯಲು ಕೇಂದ್ರ ಸರ್ಕಾರ ರಸ್ತೆಗಳನ್ನು ಅಗೆದು, ಚೂಪಾದ ಮೊಳೆಗಳನ್ನು ನೆಟ್ಟಿ, ದೊಡ್ಡ ದೊಡ್ಡ ಗೋಡೆಗಳು, ಮುಳ್ಳುತಂತಿಗಳು, ಬ್ಯಾರಿಕೇಡ್‌ಗಳನ್ನು ಹಾಕುವ ಕೆಲಸಕ್ಕೆ ಮುಂದಾಗಿದೆ. ಆದರೆ, ಕೇಂದ್ರದ ಈ ನಡೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೀವ್ರವಾಗಿ ವಿರೋಧಿಸಿದ್ದಾರೆ.
GOI,
Build bridges, not walls! pic.twitter.com/C7gXKsUJAi
— Rahul Gandhi (@RahulGandhi) February 2, 2021
ದೆಹಲಿಯ ಗಡಿಗಳಲ್ಲಿ ರೈತರು ಪ್ರತಿಭಟಿಸುತ್ತಿರುವ ಸ್ಥಳಗಳ ಸುತ್ತ ಮತ್ತು ಹತ್ತಿರದ ರಸ್ತೆಗಳಲ್ಲಿ ಬ್ಯಾರಿಕೇಡ್, ಕಾಂಕ್ರಿಟ್ ಗೋಡೆ ಮತ್ತು ಕಬ್ಬಿಣ ತಂತಿ-ಕಬ್ಬಿಣ ಮುಳ್ಳುಗಳನ್ನು ಅಳವಡಿಸಿರುವ ಸರ್ಕಾರದ ಕ್ರಮವನ್ನು ರಾಹುಲ್ ಗಾಂಧಿ ವ್ಯಂಗ್ಯದ ಮೂಲಕ ಟೀಕೆ ಮಾಡಿದ್ದು ಕೇವಲ ನಾಲ್ಕು ಪದಗಳ ಟ್ವೀಟ್ ಮಾಡಿದ್ದಾರೆ.
You can't stop us with your barriers or nails! We were peaceful, are peaceful, will be peaceful. Don't provoke us with your planted goons. #FencingLikeChinaPak
— Kisan Ekta Morcha (@Kisanektamorcha) February 2, 2021
ಈ ಕುರಿತು ಪ್ರಿಯಾಂಕಾ ಗಾಂಧಿ ಕೂಡ ಹಿಂದಿಯಲ್ಲಿ ಟ್ವೀಟ್ ಮಾಡಿದ್ದು, ‘ಪ್ರಧಾನ್‌ಮಂತ್ರಿ ಜಿ, ಅಪನೆ ಕಿಸಾನೊ ಸೆ ಹಿಂ ಯುದ್ಧ್?’ (ಪ್ರಧಾನಮಂತ್ರಿಯವರೇ, ನಮ್ಮ ರೈತರೊಂದಿಗೇ ಯುದ್ಧವಾ?) ಎಂದು ಕುಟುಕಿದ್ದಾರೆ. ಅವರು ಗೋಡೆ, ಕಬ್ಬಿಣ ತಂತಿ ಅಳವಡಿಸುವ ವಿಡಿಯೋ ಶೇರ್ ಮಾಡಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ