ದೆಹಲಿ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ; ರಕ್ಷಣಾ ಕಾರ್ಯಾಚರಣೆ ವೇಳೆ ಕುಸಿದ ಕಟ್ಟಡ, 14 ಮಂದಿಗೆ ಗಾಯ

ಪ್ರಾಥಮಿಕ ಮೂಲಗಳ ಪ್ರಕಾರ, ಪೀರಗರ್ಹಿಯ ಫ್ಯಾಕ್ಟರಿಯೊಂದಲ್ಲಿ ಇಂದು ಮುಂಜಾನೆ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿತ್ತು. ಕೂಡಲೇ ಸ್ಥಳಕ್ಕೆ 7 ಅಗ್ನಿಶಾಮಕ ವಾಹನಗಳು ಧಾವಿಸಿದ್ದವು.

Latha CG | news18-kannada
Updated:January 2, 2020, 1:29 PM IST
ದೆಹಲಿ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ; ರಕ್ಷಣಾ ಕಾರ್ಯಾಚರಣೆ ವೇಳೆ ಕುಸಿದ ಕಟ್ಟಡ, 14 ಮಂದಿಗೆ ಗಾಯ
ಕಟ್ಟಡ ಕುಸಿತದ ದೃಶ್ಯ
  • Share this:
ನವದೆಹಲಿ(ಜ.02): ಬೆಂಕಿ ಅವಘಡ ಸಂಭವಿಸಿದ್ದ ಪೀರಗರ್ಹಿಯ ಫ್ಯಾಕ್ಟರಿಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಕಟ್ಟಡ ಕುಸಿದು ಬಿದ್ದಿದೆ. ಪರಿಣಾಮ 14 ಮಂದಿ ಗಾಯಗೊಂಡಿದ್ದಾರೆ. ಅವರಲ್ಲಿ 13 ಜನ ಅಗ್ನಿಶಾಮಕ ಸಿಬ್ಬಂದಿ ಎಂದು ಪೊಲೀಸರು ತಿಳಿಸಿದ್ದಾರೆ.

ಇಂದು ಮುಂಜಾನೆ 4 ಗಂಟೆಯಲ್ಲಿ ಈ ದುರಂತ ಸಂಭವಿಸಿದೆ. ಪ್ರಾಥಮಿಕ ಮೂಲಗಳ ಪ್ರಕಾರ, ಪೀರಗರ್ಹಿಯ ಫ್ಯಾಕ್ಟರಿಯೊಂದಲ್ಲಿ ಇಂದು ಮುಂಜಾನೆ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿತ್ತು. ಕೂಡಲೇ ಸ್ಥಳಕ್ಕೆ 7 ಅಗ್ನಿಶಾಮಕ ವಾಹನಗಳು ಧಾವಿಸಿದ್ದವು.

ಉತ್ತರ ಭಾರತದಲ್ಲಿ ಆವರಿಸಿದ ದಟ್ಟ ಮಂಜು; 20 ರೈಲು ಸಂಚಾರ ವಿಳಂಬ, ಜ.5ರವರೆಗೆ ಶಾಲೆಗಳಿಗೆ ರಜೆ

ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾಗ ಇದ್ದಕ್ಕಿದ್ದಂತೆ ಕಟ್ಟಡ ಕುಸಿದು ಬಿದ್ದಿದೆ. ಪರಿಣಾಮ ಹಲವು ಅಗ್ನಿಶಾಮಕ ಸಿಬ್ಬಂದಿ ಕಟ್ಟಡದಡಿ ಸಿಲುಕಿದ್ದಾರೆ ಎಂದು ತಿಳಿದು ಬಂದಿದೆ.

ಸದ್ಯ ಸ್ಥಳದಲ್ಲಿ 35 ಅಗ್ನಿಶಾಮಕ ವಾಹನಗಳಿದ್ದು, ಎನ್​ಡಿಆರ್​ಎಫ್​ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ದೆಹಲಿ ಪೊಲೀಸರು ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

CET Exam Time Table: ಸಿಇಟಿ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಿದ ಕೆಇಎ; ದಿನಾಂಕ ತಿಳಿಯಲು ಇಲ್ಲಿ ಕ್ಲಿಕ್​ ಮಾಡಿ

ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ ಘಟನೆ ಕುರಿತು ಟ್ವೀಟ್​ ಮಾಡಿದ್ದಾರೆ.  ಬಹಳ ದುರಂತದ ಘಟನೆ ನಡೆದಿದೆ. ಈ ಬಗ್ಗೆ ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಅಗ್ನಿಶಾಮಕ ಸಿಬ್ಬಂದಿ ಬಹಳ ಶ್ರಮಪಟ್ಟು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕಟ್ಟಡಗಳಡಿ ಸಿಲುಕಿರುವವರು ಸುರಕ್ಷಿತವಾಗಿ ಹೊರಬರಲೆಂದು ಪ್ರಾರ್ಥಿಸುತ್ತೇನೆ," ಎಂದು ಟ್ವೀಟ್​ನಲ್ಲಿ ಹೇಳಿದ್ದಾರೆ. 

 

 

 
First published: January 2, 2020, 10:29 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading