Rajasthan Accident: ಬಸ್-ಟ್ಯಾಂಕರ್​ ನಡುವೆ ಭೀಕರ ಅಪಘಾತ; 12 ಮಂದಿ ಸಜೀವ ದಹನ: ಮೋದಿ ಸಂತಾಪ

ಬಸ್​ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕೆಲ ಪ್ರಯಾಣಿಕರು ಕಿಟಕಿ ಒಡೆದು ಹೊರಗೆ ಬಂದಿದ್ದಾರೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ 10 ಜನರನ್ನು ರಕ್ಷಿಸಿದ್ದಾರೆ.

ಬಸ್-ಟ್ಯಾಂಕರ್​ ನಡುವೆ ಭೀಕರ ಅಪಘಾತ

ಬಸ್-ಟ್ಯಾಂಕರ್​ ನಡುವೆ ಭೀಕರ ಅಪಘಾತ

  • Share this:
    ರಾಜಸ್ಥಾನದ ಬಾರ್ಮರ್-ಜೋಧ್‌ಪುರ ಹೆದ್ದಾರಿಯಲ್ಲಿ (Barmer-Jodhpur Highway ) ಖಾಸಗಿ ಬಸ್ ಮತ್ತು ಟ್ಯಾಂಕರ್(Bus-Tanker Collision) ನಡುವೆ ಭಾರೀ ಡಿಕ್ಕಿ ಸಂಭವಿಸಿದ್ದು, ಅಪಘಾತದಲ್ಲಿ ಬಸ್​ ಹೊತ್ತಿ ಉರಿದಿದೆ. ಡಿಕ್ಕಿಯ ರಭಸಕ್ಕೆ ಟ್ಯಾಂಕರ್ ಮತ್ತು ಬಸ್‌ಗೆ ಬೆಂಕಿ ಹೊತ್ತಿಕೊಂಡಿದ್ದು, 12 ಮಂದಿ ಸಜೀವ ದಹನವಾಗಿದ್ದಾರೆ. ಇನ್ನು ಈ ಅಪಘಾತದಲ್ಲಿ ಹಲವರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗುತ್ತಿದೆ. ಖಾಸಗಿ ಬಸ್ ಬೆಳಿಗ್ಗೆ 9:55 ಕ್ಕೆ ಬಲೋತ್ರಾದಿಂದ ಜೋಧ್​ಪುರ್​ಗೆ ಹೊರಟಿತು, ಈ ವೇಳೆ ರಸ್ತೆಯ ತಪ್ಪು ಮಾರ್ಗದಲ್ಲಿ ಬಂದ ಟ್ಯಾಂಕರ್ ಬಸ್‌ಗೆ ಡಿಕ್ಕಿ ಹೊಡೆದಿದೆ. ಈ ಡಿಕ್ಕಿಯ ರಭಸಕ್ಕೆ ಬಸ್ ಹೊತ್ತಿ ಉರಿದಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

    ಘಟನೆ ವರದಿಯಾಗುತ್ತಿದ್ದಂತೆ ಕ್ಷಣಕ್ಕೆ ಜಿಲ್ಲಾಡಳಿತ ಮತ್ತು ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಪಚ್ಪದ್ರಾ ಶಾಸಕ ಮದನ್ ಪ್ರಜಾಪತ್ ಮತ್ತು ರಾಜ್ಯ ಪರಿಸರ ಮತ್ತು ಅರಣ್ಯ ಸಚಿವ ಸುಖರಾಮ್ ಬಿಷ್ಣೋಯ್ ಅವರು ಕೂಡ ಘಟನಾ ಸ್ಥಳಕ್ಕೆ ದೌಡಾಯಿಸಿದರು.



    ಬಸ್​ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕೆಲ ಪ್ರಯಾಣಿಕರು ಕಿಟಕಿ ಒಡೆದು ಹೊರಗೆ ಬಂದಿದ್ದಾರೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ 10 ಜನರನ್ನು ರಕ್ಷಿಸಿದ್ದಾರೆ. ಮಾಹಿತಿ ಪ್ರಕಾರ, ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.



    ಘಟನೆಯಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಭೀಕರ ಅಪಘಾತದಲ್ಲಿ ಸಜೀವ ದಹನವಾದ ಕುಟುಂಬಗಳಿಗೆ ತಲಾ 2 ಲಕ್ಷ ಮತ್ತು ಗಾಯಾಳುಗಳಿಗೆ 50 ಸಾವಿರ ಪರಿಹಾರ ಹಣ ನೀಡುವುದಾಗಿ ಘೋಷಿಸಿದ್ದಾರೆ.
    Published by:Seema R
    First published: