ಹೈದ್ರಾಬಾದ್ (ಫೆ. 12): ಆಂಧ್ರ ಪ್ರದೇಶದ ವಿಶಾಖಪಟ್ಟಣ ಜಿಲ್ಲೆಯ ಅರುಕು ಸ್ಥಳದಲ್ಲಿನ 100 ಅಡಿ ಆಳದ ಕಣಿವೆಯಲ್ಲಿ ಬಸ್ ಉರುಳಿದ ಪರಿಣಾಮ ಏಂಟು ಜನರು ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅರಕು ನಿಂದ ಹೈದ್ರಾಬಾದ್ಗೆ ಮರಳುವಾಗ ಈ ಬಸ್ ಅಪಘಾತ ನಡೆದಿದೆ. ಖಾಸಗಿ ಬಸ್ನಲ್ಲಿ ಸುಮಾರು 20 ಜನರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಸಂಜೆ 7.30ರ ಸುಮಾರಿಗೆ ಬಸ್ ಕಂದಕಕ್ಕೆ ಉರುಳಿದೆ ಎಂದು ತಿಳಿದುಬಂದಿದೆ. ಪ್ರಯಾಣಿಕರ ರಕ್ಷಣಾ ಕಾರ್ಯ ನಡೆಯುತ್ತಿದ್ದು, ಅವರನ್ನು ಪತ್ತೆಗಾಗಿ ಕಾರ್ಯ ನಡೆದಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ವಿಶಾಖ ಪಟ್ಟಣ- ಅರಕು ಘಾಟ್ ಮಾರ್ಗದಲ್ಲಿ ಈ ಅಪಘಾತ ನಡೆದಿದೆ. ಘಾಟಿನ ನಂ. 5ನೇ ತಿರುವಿನಲ್ಲಿ ಬಸ್ ಕಂದಕಕ್ಕೆ ಉರುಳಿದೆ. ಬಸ್ನಲ್ಲಿ ಹಲವರ ದೇಹ ಸಿಕ್ಕಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ದೇಹವನ್ನು ಹೊರ ತೆಗೆಯುವ ಯತ್ನ ನಡೆಸಲಾಗಿದೆ. ಈ ಅಪಘಾತದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ ಹೆಚ್ಚಾಗಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಕುರಿತು ಸಚಿವ ಅವತಿ ಶ್ರೀನಿವಾಸ್ ವಿಷಾದ ವ್ಯಕ್ತಪಡಿಸಿದ್ದಾರೆ. ಪೊಲೀಸರೊಂದಿಗೆ ಬುಡಕಟ್ಟು ಜನರು ಕೂಡ ರಕ್ಷಣಾ ಕಾರ್ಯಕ್ಕೆ ಕೈ ಜೋಡಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ