ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ದೆಹಲಿಯಲ್ಲಿ ಎತ್ತಿನ‌ ಗಾಡಿ ಏರಿದ ಬಿ.ವಿ. ಶ್ರೀನಿವಾಸ್

ಜನರು ಕಷ್ಟದಲ್ಲಿದ್ದಾಗಲೂ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸುತ್ತಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಜನರಿಗೆ ಬೇಕಿರುವ ಇತರೆ ಅಗತ್ಯ ವಸ್ತುಗಳ ಬೆಲೆಗಳು‌ ಕೂಡ ಏರಿಕೆಯಾಗುತ್ತಿವೆ ಎಂದು ಆಲ್ ಇಂಡಿಯಾ ಯೂತ್ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಎತ್ತಿನ ಗಾಡಿಯಲ್ಲಿ ಪ್ರತಿಭಟಿಸುತ್ತಿರುವ ಯೂತ್‌ ಕಾಂಗ್ರೆಸ್‌ ಮುಖಂಡ ಬಿ.ವಿ. ಶ್ರೀನಿವಾಸ್‌.

ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಎತ್ತಿನ ಗಾಡಿಯಲ್ಲಿ ಪ್ರತಿಭಟಿಸುತ್ತಿರುವ ಯೂತ್‌ ಕಾಂಗ್ರೆಸ್‌ ಮುಖಂಡ ಬಿ.ವಿ. ಶ್ರೀನಿವಾಸ್‌.

  • Share this:
ನವದೆಹಲಿ: ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕೊರೋನಾ ಕಾರಣದಿಂದಾಗಿ ಕಚ್ಚಾತೈಲದ ಬೆಲೆ ಪಾತಾಳಕ್ಕೆ ಕುಸಿದಿದೆ. ಆದರೂ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ 23 ದಿನಗಳಿಂದ ನಿರಂತರವಾಗಿ ಪೆಟ್ರೋಲ್‌-ಡೀಸೆಲ್‌ ಬೆಲೆಯನ್ನು ಏರಿಸುತ್ತಲೇ ಇದೆ. ಇದನ್ನು ವಿರೋಧಿಸಿ ಆಲ್ ಇಂಡಿಯಾ ಯೂತ್ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ರಾಷ್ಟ್ರ ರಾಜಧಾನಿ ದೆಹಲಿ ರಸ್ತೆಗಳಲ್ಲಿ ಎತ್ತಿನಗಾಡಿ ಓಡಿಸುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ.

ಇದೇ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಕರ್ನಾಟಕ ಮೂಲದವರಾದ ಬಿ.ವಿ. ಶ್ರೀನಿವಾಸ್, "ಅಂತರಾಷ್ಟ್ರೀಯ ಮಟ್ಟದಲ್ಲಿ ಈಗ ಕಚ್ಚಾತೈಲದ ಬೆಲೆ ವ್ಯಾಪಕವಾಗಿ ಕುಸಿದಿದೆ. ಒಂದು ಬ್ಯಾರಲ್ ಗೆ ಕೇವಲ 130 ಡಾಲರ್ ಇದೆ. ಆದರೂ ಕೇಂದ್ರ ಸರ್ಕಾರ ಕಳೆದ 23 ದಿನಗಳಿಂದ ಪ್ರತಿನಿತ್ಯವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಸುತ್ತಲೇ ಇದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ಹೆಚ್ಚಳವಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಿಸುವುದು, ಹಾಗೆಯೇ ದರ ಕಡಿಮೆಯಾದಾಗ ದೇಶಿಯ ಮಾರುಕಟ್ಟೆಯಲ್ಲೂ ತೈಲದ ಬೆಲೆ ಇಳಿಸುವುದು ಸಾಮಾನ್ಯವಾದ ಸಂಗತಿ.

ಆದರೆ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲ ಕುಸಿದಿದ್ದರೂ ಪ್ರತಿದಿನವೂ ಪೆಟ್ರೋಲ್ - ಡೀಸೆಲ್ ಬೆಲೆ ಹೆಚ್ಚಿಸುತ್ತಿದೆ. ಈ ಮೂಲಕ ಲಾಕ್‌ಡೌನ್ ಮತ್ತು ಕೊರೋನಾ ಕಷ್ಟದಲ್ಲಿರುವ ಜನ ಸಾಮಾನ್ಯರಿಂದ ಹಣವನ್ನು ಲೂಟಿ ಮಾಡುತ್ತಿದೆ ಎಂದು ಬಿ.ವಿ. ಶ್ರೀನಿವಾಸ್ ಕಿಡಿಕಾರಿದ್ದಾರೆ.

ಜನರು ಕಷ್ಟದಲ್ಲಿದ್ದಾಗಲೂ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸುತ್ತಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಜನರಿಗೆ ಬೇಕಿರುವ ಇತರೆ ಅಗತ್ಯ ವಸ್ತುಗಳ ಬೆಲೆಗಳು‌ ಕೂಡ ಏರಿಕೆಯಾಗುತ್ತಿವೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಅವಿಭಕ್ತ ಕುಟುಂದ ವ್ಯಕ್ತಿಗೆ ಕೊರೋನಾ ಸೋಂಕು; ಬರೋಬ್ಬರಿ 80 ಜನ ಹೋಮ್ ಕ್ವಾರಂಟೈನ್

ಆಲ್ ಇಂಡಿಯಾ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹರೀಶ್ ಪವಾರ್, ಕಾರ್ಯದರ್ಶಿಗಳಾದ ಖುಸ್ಬೂ ಶರ್ಮಾ, ಮುಖೇಶ್ ಕುಮಾರ್, ಮೋಹಿತ್ ಚೌಧರಿ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
First published: