ಕಾಂಗ್ರೆಸ್​ನಲ್ಲಿ ಗಾಂಧಿ ಕುಟುಂಬದ ಯುಗಾಂತ್ಯ; ಕಾರ್ಯಕಾರಿ ಸಮಿತಿ ಸಭೆಯ ಮಧ್ಯದಲ್ಲೇ ನಿರ್ಗಮಿಸಿದ ರಾಹುಲ್, ಸೋನಿಯಾ!

ಕೊನೆಯ ಕ್ಷಣದಲ್ಲಿ ಮತ್ತೆ ರಾಹುಲ್ ಗಾಂಧಿಯವರೇ ಅಧ್ಯಕ್ಷ ಗಾದಿಗೆ ಏರಲಿದ್ದಾರೆ ಎಂಬ ಊಹಾಪೋಹಗಳಿಗೆ ತೆರೆಬಿದ್ದಿದ್ದು, 20 ವರ್ಷಗಳ ನಂತರ ಗಾಂಧಿ ಕುಟುಂಬಕ್ಕೆ ಸೇರದ ಹೊರಗಿನ ವ್ಯಕ್ತಿಯ ಕೈಗೆ ಭಾರತದ ಐತಿಹಾಸಿಕ ಪಕ್ಷದ ಚುಕ್ಕಾಣಿ ಸಿಗುವುದು ಖಚಿತವಾದಂತಾಗಿದೆ. ಈ ಮೂಲಕ ಕಾಂಗ್ರೆಸ್ ಪಕ್ಷದಲ್ಲಿ ಕೊನೆಗೂ ಗಾಂಧಿ ಕುಟುಂಬದ ಯುಗಾಂತ್ಯವಾಗಿದೆ.

MAshok Kumar | news18
Updated:August 10, 2019, 4:03 PM IST
ಕಾಂಗ್ರೆಸ್​ನಲ್ಲಿ ಗಾಂಧಿ ಕುಟುಂಬದ ಯುಗಾಂತ್ಯ; ಕಾರ್ಯಕಾರಿ ಸಮಿತಿ ಸಭೆಯ ಮಧ್ಯದಲ್ಲೇ ನಿರ್ಗಮಿಸಿದ ರಾಹುಲ್, ಸೋನಿಯಾ!
ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡಿರುವ ಸೋನಿಯಾ ಗಾಂಧಿ, ರಾಹುಲ್ ಗಾಂಧಿ.
MAshok Kumar | news18
Updated: August 10, 2019, 4:03 PM IST
ನವ ದೆಹಲಿ (ಆಗಸ್ಟ್.10); ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷ ಹುದ್ದೆಗೆ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡುವುದು ಪ್ರಸ್ತುತ ಕಾಂಗ್ರೆಸ್ ನಾಯಕರ ಮುಂದಿರುವ ದೊಡ್ಡ ಸವಾಲಾಗಿದೆ. ಇದೇ ಕಾರಣಕ್ಕೆ ಇಂದು ದೆಹಲಿಯ ಕೇಂದ್ರ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕಾರಣಿ ಸಭೆಯನ್ನು ಆಯೋಜಿಸಲಾಗಿತ್ತು. ಆದರೆ, ಸಭೆ ಶುರುವಾದ ಕೇವಲ 2 ಗಂಟೆಯಲ್ಲೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಕಚೇರಿಯಿಂದ ನಿರ್ಗಮಿಸಿದ್ದಾರೆ. ಆ ಮೂಲಕ ಕೊನೆಗೂ ಕಾಂಗ್ರೆಸ್ ಪಕ್ಷದಲ್ಲಿ ಗಾಂಧಿ ಕುಟುಂಬದ ಯುಗಾಂತ್ಯವಾದಂತಾಗಿದೆ.

ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿ ಎರಡು ತಿಂಗಳೇ ಕಳೆದಿದೆ. ಆದರೆ, ಈವರೆಗೆ ಆ ಸ್ಥಾನಕ್ಕೆ ಮತ್ತೊಬ್ಬ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡುವುದು ಸಾಧ್ಯವಾಗಿಲ್ಲ. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕರು ಮತ್ತೆ ರಾಹುಲ್ ಗಾಂಧಿಯವರೇ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಲಿ ಎಂದು ಒತ್ತಾಯಿಸುತ್ತಿದ್ದಾರೆ. ಇಂದು ಆರಂಭವಾದ ಕಾಂಗ್ರೆಸ್ ಕಾರ್ಯಕಾರಣಿ ಸಭೆಯಲ್ಲೂ ಪಕ್ಷದ ಹಿರಿಯ ನಾಯಕರು ರಾಹುಲ್ ಅವರೇ ಅಧ್ಯಕ್ಷರಾಗಿ ಮುಂದುವರೆಯಲಿ ಎಂದು ಒತ್ತಾಯಿಸಿದ್ದಾರೆ.

ಆದರೆ, ಈ ಹಿಂದೆಯೇ ಗಾಂಧಿ ಕುಟುಂಬದ ಹೊರತಾದ ಹಾಗೂ ಹಿಂದುಳಿದ ಸಮಾಜಕ್ಕೆ ಸೇರಿದ ವ್ಯಕ್ತಿಯನ್ನು ಈ ಸ್ಥಾನಕ್ಕೆ ನೇಮಿಸುವಂತೆ ರಾಹುಲ್ ಗಾಂಧಿ ಪಕ್ಷದ ಹಿರಿಯರಿಗೆ ಸೂಚನೆ ನೀಡಿದ್ದರು. ಆದರೆ, ಇಂದಿನ ಸಭೆಯಲ್ಲೂ ಅವರ ಹೆಸರೇ ಪ್ರಸ್ತಾಪವಾದ ಕಾರಣ ಈ ಮಜುಗರದಿಂದ ತಪ್ಪಿಸಿಕೊಳ್ಳಲು ಅವರು ಸಭೆಯ ನಡುವೆಯೇ ಪಕ್ಷದ ಕಚೇರಿಯಿಂದ ಹೊರನಡೆದಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಮೂಲಕ ಕೊನೆಯ ಕ್ಷಣದಲ್ಲಿ ಮತ್ತೆ ರಾಹುಲ್ ಗಾಂಧಿಯವರೇ ಅಧ್ಯಕ್ಷ ಗಾದಿಗೆ ಏರಲಿದ್ದಾರೆ ಎಂಬ ಊಹಾಪೋಹಗಳಿಗೆ ತೆರೆಬಿದ್ದಿದ್ದು, 20 ವರ್ಷಗಳ ನಂತರ ಗಾಂಧಿ ಕುಟುಂಬಕ್ಕೆ ಸೇರದ ಹೊರಗಿನ ವ್ಯಕ್ತಿಯ ಕೈಗೆ ಭಾರತದ ಐತಿಹಾಸಿಕ ಪಕ್ಷದ ಚುಕ್ಕಾಣಿ ಸಿಗುವುದು ಖಚಿತವಾದಂತಾಗಿದೆ. ಈ ಮೂಲಕ ಕಾಂಗ್ರೆಸ್ ಪಕ್ಷದಲ್ಲಿ ಕೊನೆಗೂ ಗಾಂಧಿ ಕುಟುಂಬದ ಯುಗಾಂತ್ಯವಾಗಿದೆ.

ಇದೀಗ ಕಾಂಗ್ರೆಸ್ ಪಕ್ಷದ ಮುಂದಿನ ಅಧ್ಯಕ್ಷರ ಆಯ್ಕೆ ಕಾರ್ಯಕಾರಿ ಸಮಿತಿಯ ಜವಾಬ್ದಾರಿಯಾಗಿದ್ದು, ಶನಿವಾರ ತಡರಾತ್ರಿಯ ಒಳಗಾಗಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಮುಗಿಯಲಿದೆ ಎನ್ನಲಾಗುತ್ತಿದೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಮುಕುಲ್ ವಾಸ್ನಿಕ್ ಹಾಗೂ ಮಲ್ಲಿಕಾರ್ಜುನ ಖರ್ಗೆ, ಸಚಿನ್ ಪೈಲಟ್, ಜ್ಯೋತಿರಾದಿತ್ಯ ಸಿಂದ್ಯ, ಹಾಗೂ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಹೆಸರುಗಳು ಅಧ್ಯಕ್ಷ ಹುದ್ದೆಗೆ ಕೇಳಿಬರುತ್ತಿವೆ.

ಇದನ್ನೂ ಓದಿ : ಭಾನುವಾರ ಪ್ರವಾಹಪೀಡಿತ ವಯನಾಡ್​ ಜಿಲ್ಲೆಗೆ ತೆರಳಲಿರುವ ಸಂಸದ ರಾಹುಲ್ ಗಾಂಧಿ; ನೆರೆ ಪರಿಹಾರದ ಮೇಲುಸ್ತುವಾರಿ!

First published:August 10, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...