ನವದೆಹಲಿ(ಡಿಸೆಂಬರ್. 16): ನೂತನ ಕೃಷಿ ಕಾಯ್ದೆ ವಿರೋಧಿಸಿ ರೈತರು ನವದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೆ ಕೇಂದ್ರ ಸರ್ಕಾರ ಅನ್ನದಾತರ ಪರವಾಗಿ ಹೆಜ್ಜೆ ಇಟ್ಟಿದ್ದು ಇದೀಗ ಕಬ್ಬು ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ. ಕಬ್ಬು ಬೆಳಗಾರರಿಗೆ 3,500 ಕೋಟಿ ರೂಪಾಯಿ ಮೊತ್ತದ ಸಬ್ಸಿಡಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಕೇಂದ್ರ ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, ಕಬ್ಬು ಬೆಳೆಗಾರರಿಗೆ ರೂಪಾಯಿ 3,500 ಕೋಟಿ ರೂಪಾಯಿ ಸಬ್ಸಿಡಿ ನೀಡಲು ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಅನುಮೋದನೆ ನೀಡಿದೆ. ಸಚಿವ ಸಂಪುಟದ ನಿರ್ಧಾರದಿಂದ 5 ಕೋಟಿ ಕಬ್ಬು ಬೆಳೆಗಾರರಿಗೆ ಲಾಭವಾಗಲಿದೆ. ಸಬ್ಸಿಡಿ ಮೊತ್ತ ನೇರವಾಗಿ ರೈತರ ಖಾತೆಗೆ ಸೇರಲಿದೆ ಎಂದು ಸಚಿವರು ಹೇಳಿದರು.
ಹಾಗೆಯೇ ಈ ವರ್ಷ 310 ಲಕ್ಷ ಟನ್ ಸಕ್ಕರೆ ಉತ್ಪಾದನೆ ಮಾಡಲಾಗಿದೆ. 60 ಲಕ್ಷ ಟನ್ ಸಕ್ಕರೆ ರಫ್ತು ಮಾಡಲಾಗುವುದು. ಇನ್ನು ಕಬ್ಬುಬೆಳೆಗಾರರಿಗೆ ಸಬ್ಸಿಡಿ ಘೋಷಣೆಯಿಂದ ಸಕ್ಕರೆ ಉತ್ಪಾದನೆಗೆ ಅನುಕೂಲವಾಗಲಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದರು.
ಇದನ್ನೂ ಓದಿ : Money Matter - ಸುಲಭವಾಗಿ ಹಣ ಕಳೆದುಕೊಳ್ಳುವ ಮಾರ್ಗಗಳು
ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯ ಕಬ್ಬು ಬೆಳೆಗರಾರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್, ಇದು ರೈತರಿಗೆ ಸಿಹಿ ಸುದ್ದಿ ಅಲ್ಲ, ಸಕ್ಕರೆ ಕಾರ್ಖಾನೆಯ ಮಾಲೀಕರಿಗೆ ಸಿಹಿ ಸುದ್ದಿಯಾಗಿದೆ. ಇದರಿಂದ ಕಬ್ಬು ಬೆಳೆಗಾರರಿಗೆ ದೊಡ್ಡ ಮಟ್ಟದ ಲಾಭ ಏನು ಇಲ್ಲ. ಕೇಂದ್ರ ಸರ್ಕಾರ 60 ಲಕ್ಷ ಮೆಟ್ರಿಕ್ ಟನ್ ಸಕ್ಕರೆ ವಿದೇಶಕ್ಕೆ ರಫ್ತು ಮಾಡುವುದಕ್ಕೆ ಈ ಅನುದಾನ ಬಿಡುಗಡೆ ಮಾಡಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ