ಕ್ಯಾಬಿನೆಟ್ ಕಾರ್ಯದರ್ಶಿ ರಾಜೀವ್ ಗೌಬಾ; ಒಂದು ವರ್ಷ ಅವಧಿ ವಿಸ್ತರಣೆ ಮಾಡಿದ ಕೇಂದ್ರ ಸರ್ಕಾರ

ಜಮ್ಮು ಮತ್ತು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದ ಜಮ್ಮು ಮತ್ತು ಕಾಶ್ಮೀರ ಮರುಸಂಘಟನಾ ಕಾಯಿದೆಯ ಪ್ರಮುಖ ವಾಸ್ತುಶಿಲ್ಪಿ  ಎಂದು ಗೌಬಾ ಅವರನ್ನು ಕರೆಯಲಾಗಿದೆ. ಆದ ಕಾರಣ ಇವರನ್ನು ಕೇಂದ್ರ ಸರ್ಕಾರ ಇನ್ನೂ ಸೇವೆಯಲ್ಲಿ ಮುಂದುವರೆಸಿಕೊಳ್ಳಲು ಇಚ್ಚಿಸಿದೆ ಎಂದು ಹೇಳಬಹುದು.

ರಾಜೀವ್​ ಗೌಬಾ

ರಾಜೀವ್​ ಗೌಬಾ

 • Share this:
  ಕ್ಯಾಬಿನೆಟ್ ಕಾರ್ಯದರ್ಶಿ ರಾಜೀವ್ ಗೌಬಾ ಅವರಿಗೆ ಸರ್ಕಾರವು ಒಂದು ವರ್ಷದ ವಿಸ್ತರಣೆಯನ್ನು ನೀಡಿದೆ ಎಂದು ಸಿಬ್ಬಂದಿ ಸಚಿವಾಲಯದ ಆದೇಶದಲ್ಲಿ ತಿಳಿಸಲಾಗಿದೆ. ಮಾಜಿ ಕೇಂದ್ರ ಗೃಹ ಕಾರ್ಯದರ್ಶಿ ಗೌಬಾ 2019 ರಲ್ಲಿ ಎರಡು ವರ್ಷಗಳ ಕಾಲ ದೇಶದ ಉನ್ನತ ಅಧಿಕಾರಿ ಹುದ್ದೆಗೆ ನೇಮಕಗೊಂಡಿದ್ದರು.

  ಜಾರ್ಖಂಡ್ ಕೇಡರ್‌ನ 1982 ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾದ ಗೌಬಾ ಅವರ ಸೇವೆಯನ್ನು ವಿಸ್ತರಿಸಲು ಕ್ಯಾಬಿನೆಟ್‌ನ ನೇಮಕಾತಿ ಸಮಿತಿಯು ಅನುಮೋದನೆ ನೀಡಿದೆ, ಆಗಸ್ಟ್ 30 ರ ನಂತರ ಒಂದು ವರ್ಷದ ಅವಧಿಗೆ ಕ್ಯಾಬಿನೆಟ್ ಕಾರ್ಯದರ್ಶಿಯಾಗಿ ಇವರು ಮುಂದುವರೆಯಲಿದ್ದಾರೆ. ಸಂವಿಧಾನದ 370 ನೇ ವಿಧಿಯ ಅಡಿಯಲ್ಲಿ ಜಮ್ಮು- ಕಾಶ್ಮೀರ ರಾಜ್ಯಕ್ಕೆ ನೀಡಲಾದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಜಮ್ಮು ಮತ್ತು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದ ಜಮ್ಮು ಮತ್ತು ಕಾಶ್ಮೀರ ಮರುಸಂಘಟನಾ ಕಾಯಿದೆಯ ಪ್ರಮುಖ ವಾಸ್ತುಶಿಲ್ಪಿ  ಎಂದು ಗೌಬಾ ಅವರನ್ನು ಕರೆಯಲಾಗಿದೆ. ಆದ ಕಾರಣ ಇವರನ್ನು ಕೇಂದ್ರ ಸರ್ಕಾರ ಇನ್ನೂ ಸೇವೆಯಲ್ಲಿ ಮುಂದುವರೆಸಿಕೊಳ್ಳಲು ಇಚ್ಚಿಸಿದೆ ಎಂದು ಹೇಳಬಹುದು. ಇತ್ತೀಚಿನ ದಿನಗಳಲ್ಲಿ ಸರ್ಕಾರ ತೆಗೆದುಕೊಂಡ ಸಾಕಷ್ಟು ನಿರ್ಧಾರಗಳ ಹಿಂದೆ ಗೌಬಾ ಅವರ ಚಾಣಾಕ್ಷತನವಿದೆ.

  ಗೌಬಾ ಅವರು ಕೇಂದ್ರ ನಗರಾಭಿವೃದ್ಧಿ ಸಚಿವಾಲಯದಲ್ಲಿ ಕಾರ್ಯದರ್ಶಿಯಾಗಿ, ಗೃಹ ಸಚಿವಾಲಯದಲ್ಲಿ ಹೆಚ್ಚುವರಿ ಕಾರ್ಯದರ್ಶಿಯಾಗಿದ್ದರು, ಗೃಹ ಸಚಿವಾಲಯ ವಿಭಾಗದಲ್ಲಿ ನಿರ್ಣಾಯಕ ಎಡಪಂಥೀಯ ವಿಚಾರಧಾರೆ ಹೊಂದಿದ್ದ ನಕ್ಸಲ್​ ಚಟುವಟಿಕೆಯ ವಿರುದ್ದದ ವಿಭಾಗವನ್ನು ನೋಡಿಕೊಳ್ಳುತ್ತಿದ್ದರು. ಪಂಜಾಬ್‌ನಲ್ಲಿ ಜನಿಸಿದ ಗೌಬಾ ಪಾಟ್ನಾ ವಿಶ್ವವಿದ್ಯಾಲಯದಿಂದ ಭೌತಶಾಸ್ತ್ರದಲ್ಲಿ ಪದವಿ ಪಡೆದಿದ್ದರು. ಅವರು 2016 ರಲ್ಲಿ ಕೇಂದ್ರ ಸರ್ಕಾರದಲ್ಲಿ ಸೇವೆ ಸಲ್ಲಿಸಲು ಹಿಂದಿರುಗುವ ಮೊದಲು ಜಾರ್ಖಂಡ್‌ನಲ್ಲಿ 15 ತಿಂಗಳು ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.

  ಅವರು ನಾಲ್ಕು ವರ್ಷಗಳ ಕಾಲ ಅಂತಾರಾಷ್ಟ್ರೀಯ ಹಣಕಾಸು ನಿಧಿಯ (ಐಎಂಎಫ್​) ಮಂಡಳಿಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು.

  ಇದನ್ನೂ ಓದಿ: ಕೊರೋನಾ ನೆಗೆಟಿವ್ ಇದ್ದರೂ ವೀಕೆಂಡ್​​ ಕರ್ಫ್ಯೂನಲ್ಲಿ ಕೇರಳ, ತಮಿಳುನಾಡಿನಿಂದ ರಾಜ್ಯಕ್ಕೆ ನೋ ಎಂಟ್ರಿ..!

  ಭೌತಶಾಸ್ತ್ರದಲ್ಲಿ ಚಿನ್ನದ ಪದಕ ಪಡೆದಿದ್ದ ಅವರು, ಕೇಂದ್ರ ಪರಿಸರ, ರಕ್ಷಣೆ, ಸಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು.

  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.
  Published by:HR Ramesh
  First published: