ಕೆಂಪು ಕೋಟೆ ಸ್ವಾತಂತ್ರ್ಯ ದಿನಾಚರಣೆ: ಭಾಗವಹಿಸದಿದ್ದರೆ ಕಠಿಣ ಕ್ರಮ, ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಕ್ಯಾಬಿನೆಟ್ ಕಾರ್ಯದರ್ಶಿ

"ಕೆಲವು ಬಾರಿ ಈ ಮಹತ್ವದ ಕಾರ್ಯಕ್ರಮಕ್ಕೆ  ಅಧಿಕಾರಿಗಳನ್ನು ಆಹ್ವಾನಿಸಿದ್ದರು ಸಹ ಸಮಾರಂಭಕ್ಕೆ ಹಾಜರಾಗಲು ವಿಫಲರಾಗಿದ್ದಾರೆ ಎನ್ನುವ ವಿಚಾರ ಗಮನಕ್ಕೆ ಬಂದಿದೆ. ಈ  ರಾಷ್ಟ್ರೀಯ ಪ್ರಾಮುಖ್ಯತೆಯನ್ನು ಹೊಂದಿರುವ ಹಬ್ಬವನ್ನು ಹೀಗೆ ಕಡೆಗಣಿಸಲು ಸಾಧ್ಯವಿಲ್ಲ, ಎಂಬುದನ್ನು ಪರಿಗಣಿಸಿ ಈ ಎಚ್ಚರಿಕೆಯನ್ನು ನೀಡಲಾಗಿದೆ.

ಕೆಂಪು ಕೋಟೆ

ಕೆಂಪು ಕೋಟೆ

 • Share this:
  ಕ್ಯಾಬಿನೆಟ್ ಕಾರ್ಯದರ್ಶಿ ರಾಜೀವ್ ಗೌಬಾ ಅವರು ಕೆಂಪು ಕೋಟೆಯಲ್ಲಿ ನಡೆಯುವ  ಸ್ವಾತಂತ್ರ್ಯ ದಿನಾಚರಣೆಗೆ ಅಧಿಕಾರಿಗಳಿಗೆ ಪತ್ರದ ಮೂಲಕ ಆಹ್ವಾನ ನೀಡಿದ್ದು ಜೊತೆಗೆ ಎಚ್ಚರಿಕೆಯನ್ನು ಸಹ ನೀಡಿದ್ದಾರೆ. ಈ ಕಾರ್ಯಕ್ರಮಕ್ಕೆ ಹಾಜರಾಗಲು ವಿಫಲವಾದರೆ "ಗಂಭೀರ ಪರಿಣಾಮ" ತೆಗೆದುಕೊಳ್ಳಲಾಗುವುದು, ಹಾಗೂ ಅದನ್ನು ಎದುರಿಸಲು ಸಿದ್ದರಾಗಿ ಎಂದು ಎಚ್ಚರಿಕೆ ನೀಡಿದ್ದಾರೆ.

  ಎಲ್ಲಾ ಕೇಂದ್ರ ಸಚಿವಾಲಯಗಳು ಮತ್ತು ಇಲಾಖೆಗಳ ಕಾರ್ಯದರ್ಶಿಗಳಿಗೆ ಖುದ್ದಾಗಿ ಬರೆದಿರುವ ಪತ್ರದಲ್ಲಿ ಈ ರೀತಿಯ ಎಚ್ಚರಿಕೆ ನೀಡಿದ್ದಾರೆ. ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಸಮಾರಂಭ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ, ಈ ಕಾರ್ಯಕ್ರಮ ತನ್ನದೇ ಆದ ಮಹತ್ವವನ್ನು ಹೊಂದಿದೆ ಮತ್ತು ಸಮಾರಂಭಕ್ಕೆ ಆಹ್ವಾನಿಸಿದ ಅತಿಥಿಗಳು ಹಾಜರಾಗುವ ನಿರೀಕ್ಷೆಯಿದೆ ಎಂದು ಗೌಬಾ ಅವರು ಹೇಳಿದ್ದಾರೆ.

  "ಕೆಲವು ಬಾರಿ ಈ ಮಹತ್ವದ ಕಾರ್ಯಕ್ರಮಕ್ಕೆ  ಅಧಿಕಾರಿಗಳನ್ನು ಆಹ್ವಾನಿಸಿದ್ದರು ಸಹ ಸಮಾರಂಭಕ್ಕೆ ಹಾಜರಾಗಲು ವಿಫಲರಾಗಿದ್ದಾರೆ ಎನ್ನುವ ವಿಚಾರ ಗಮನಕ್ಕೆ ಬಂದಿದೆ. ಈ  ರಾಷ್ಟ್ರೀಯ ಪ್ರಾಮುಖ್ಯತೆಯನ್ನು ಹೊಂದಿರುವ ಹಬ್ಬವನ್ನು ಹೀಗೆ ಕಡೆಗಣಿಸಲು ಸಾಧ್ಯವಿಲ್ಲ, ಎಂಬುದನ್ನು ಪರಿಗಣಿಸಿ ಈ ಎಚ್ಚರಿಕೆಯನ್ನು ನೀಡಲಾಗಿದೆ. ಸ್ವಾತಂತ್ರ್ಯ ದಿನಾಚರಣೆಗೆ ಹಾಜರಾಗುವುದು ತಮ್ಮ ಕರ್ತವ್ಯ ಎಂಬುದನ್ನು ಅಧಿಕಾರಿಗಳಿಗೆ ಸ್ಪಷ್ಟವಾಗಿ ನೆನಪಿಸುವ ಅವಶ್ಯಕತೆಯಿದೆ. , "ಅವರು ಹೇಳಿದರು.

  ಇದನ್ನೂ ಓದಿ: ದೆಹಲಿಯಲ್ಲಿ ಕೊರೋನಾ ನಿಯಮ ಉಲ್ಲಂಘನೆ ದಂಡ: ಜೂನ್‌ನಲ್ಲಿ 25 ಕೋಟಿ, ಜುಲೈನಲ್ಲಿ 36 ಕೋಟಿ ಸಂಗ್ರಹ

  ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಸಾಮಾಜಿಕ ಅಂತರ ಹಾಗೂ ಸುರಕ್ಷತೆಯ ಅಗತ್ಯತೆಗಳ ದೃಷ್ಟಿಯಿಂದ, ಈ ವರ್ಷ ಸ್ವಾತಂತ್ರ್ಯ ದಿನದ ಸಮಾರಂಭಕ್ಕೆ ಜಂಟಿ ಕಾರ್ಯದರ್ಶಿ ಮಟ್ಟದ ಮತ್ತು ಅದಕ್ಕಿಂತ ಹೆಚ್ಚಿನ ಅಧಿಕಾರಿಗಳನ್ನು ಮಾತ್ರ ಆಹ್ವಾನಿಸಲಾಗಿದೆ ಎಂದು ಗೌಬಾ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ. "ನಿಮ್ಮ ಸಚಿವಾಲಯ/ಇಲಾಖೆಯ ಎಲ್ಲಾ ಅಧಿಕಾರಿಗಳಿಗೆ, ಸ್ವಾತಂತ್ರ್ಯ ದಿನಾಚರಣೆಯ ಸಮಾರಂಭದಲ್ಲಿ ಭಾಗವಹಿಸಲು ನೀವು ಸೂಕ್ತವಾಗಿ ಸಲಹೆ ನೀಡಬಹುದು. ಈ ಸಂದರ್ಭದಲ್ಲಿ ಅವರ ಅನುಪಸ್ಥಿತಿಯ ಬಗ್ಗೆ ಗಂಭೀರ ದೃಷ್ಟಿಕೋನವನ್ನು ತೆಗೆದುಕೊಳ್ಳಬಹುದು ಎಂದು ನೀವು ಅವರಿಗೆ ಎಚ್ಚರಿಕೆ ನೀಡಲು ಬಯಸಬಹುದು," ಗೌಬಾ ಅವರು ಕಾರ್ಯದರ್ಶಿಗಳಿಗೆ ತಾವು ಬರೆದ ಪತ್ರದ ಮೂಲಕ ಎಚ್ಚರಿಕೆ ನೀಡಿದ್ದಾರೆ.

  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.
  Published by:HR Ramesh
  First published: