ಕೆನರಾ ಬ್ಯಾಂಕ್​ನಲ್ಲಿ ಉದ್ಯೋಗವಕಾಶ; 220 ವಿಶೇಷ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

Canara Bank recruitment 2020: ಲಿಖಿತ ಪರೀಕ್ಷೆ, ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಡಲಾಗುತ್ತದೆ.

news18-kannada
Updated:November 21, 2020, 8:34 PM IST
ಕೆನರಾ ಬ್ಯಾಂಕ್​ನಲ್ಲಿ ಉದ್ಯೋಗವಕಾಶ; 220 ವಿಶೇಷ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕೆನರಾ ಬ್ಯಾಂಕ್ - Canara Bank
  • Share this:
ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ ವಿಶೇಷ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. 220 ವಿಶೇಷ ಅಧಿಕಾರಿ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಆನ್​ಲೈನ್​ ಮೂಲಕ ಅರ್ಜಿ ಸಲ್ಲಸಿಬಹುದಾಗಿ ತಿಳಿಸಿದೆ.

ವಿದ್ಯಾರ್ಹತೆ: ಬಿ.ಇ, ಬಿ.ಟೆಕ್, ಎಂ.ಇ, ಎಂ.ಟೆಕ್, ಎಂಸಿಎ ವಿದ್ಯಾರ್ಹತೆಯನ್ನುಪಡೆದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ವಯೋಮಿತಿ: ವಿಶೇಷ ಅಧಿಕಾರಿ ಹುದ್ದೆಗಳಿಗೆ ಅಕ್ಟೋಬರ್ 1, 2020ರ ಅನ್ವಯ ಕನಿಷ್ಟ 22 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

-ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ-ಪ.ಪಂಗಡ ಅಭ್ಯರ್ಥಿಗಳಿಗೆ 5 ವರ್ಷ.

-ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ: ತಿಂಗಳಿಗೆ 23,700/- ರಿಂದ 51,490/-ರೂ ವೇತನವನ್ನು ಸಿಗಲಿದೆ.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದೆ. ಸಾಮಾನ್ಯ/ ಓಬಿಸಿ ಅಭ್ಯರ್ಥಿಗಳು 600ರೂ ಮತ್ತು ಪ.ಜಾ/ಪ.ಪಂ/ಅಂಗವಿಕಲ ಅಭ್ಯರ್ಥಿಗಳು 100 ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕುಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?:

ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.canarabank.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 15,2020೦ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Published by: Harshith AS
First published: November 21, 2020, 8:33 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading