Captain Amarinder Singh: ಬಿಜೆಪಿ ಜೊತೆ ಪಂಜಾಬ್ ಲೋಕ ಕಾಂಗ್ರೆಸ್ ವಿಲೀನ; ಕುಟುಂಬ ಸಮೇತ ಕಮಲ ಸೇರಲಿದ್ದಾರೆ ಕ್ಯಾಪ್ಟನ್

ಕ್ಯಾಪ್ಟನ್ ಅಮರಿಂದರ್ ಸಿಂಗ್ ಮಗಳು ಜೈ ಇಂದರ್ ಕೌರ್, ಮಗ ರಣಿಂದರ್ ಸಿಂಗ್ ಮತ್ತು ಮೊಮ್ಮಗ ನಿರ್ವಾನ್ ಸಿಂಗ್ ಕೂಡ ಬಿಜೆಪಿ ಸೇರಬಹುದು ಎಂದು ಹೇಳಲಾಗುತ್ತಿದೆ.

ಕ್ಯಾಪ್ಟನ್ ಅಮರಿಂದರ್ ಸಿಂಗ್ ಮತ್ತು ಬಿಜೆಪಿ

ಕ್ಯಾಪ್ಟನ್ ಅಮರಿಂದರ್ ಸಿಂಗ್ ಮತ್ತು ಬಿಜೆಪಿ

  • Share this:
ಚಂಡೀಗಢ: ಪಂಜಾಬ್ ಮಾಜಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ (Captain Amarinder Singh) ತಮ್ಮ ಪಕ್ಷವಾದ ಪಂಜಾಬ್ ಲೋಕ ಕಾಂಗ್ರೆಸ್ (ಪಿಎಲ್‌ಸಿ)  ಅನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಲು ಸಿದ್ಧತೆ ನಡೆಸಿದ್ದಾರೆ. ಸೆಪ್ಟೆಂಬರ್ 19 ರಂದು ದೆಹಲಿಯ ಬಿಜೆಪಿ ಕಚೇರಿಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಪಂಜಾಬ್ ಲೋಕ ಕಾಂಗ್ರೆಸ್ ಪಕ್ಷವನ್ನು (Punjab Lok Congress) ಬಿಜೆಪಿಯೊಂದಿಗೆ ವಿಲೀನಗೊಳಿಸುವ ಬಗ್ಗೆ ಘೋಷಿಸಲಿದ್ದಾರೆ. ಕ್ಯಾಪ್ಟನ್ ಅಮರಿಂದರ್ ಸಿಂಗ್ ಅಂದು ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಪಡೆಯಲಿದ್ದಾರೆ. ಕ್ಯಾಪ್ಟನ್ ಅಮರಿಂದರ್ ಸಿಂಗ್ ಮಗಳು ಜೈ ಇಂದರ್ ಕೌರ್, ಮಗ ರಣಿಂದರ್ ಸಿಂಗ್ ಮತ್ತು ಮೊಮ್ಮಗ ನಿರ್ವಾನ್ ಸಿಂಗ್ ಕೂಡ ಬಿಜೆಪಿ ಸೇರಬಹುದು ಎಂದು ಹೇಳಲಾಗುತ್ತಿದೆ.

ಸೆಪ್ಟೆಂಬರ್ 19 ರಂದು ಬಿಜೆಪಿ ಜೊತೆ ಪಂಜಾಬ್ ಲೋಕ ಕಾಂಗ್ರೆಸ್ ವಿಲೀನದ ನಂತರ ಪಟಿಯಾಲದಲ್ಲಿ ನಡೆಯುವ ಸಮಾರಂಭದಲ್ಲಿ ಪಿಎಲ್‌ಸಿ ಕಾರ್ಯಕರ್ತರನ್ನು ಬಿಜೆಪಿಗೆ ಸೇರ್ಪಡೆಗೊಳಿಸುವುದಾಗಿ ಅಮರಿಂದರ್ ಸಿಂಗ್ ಅವರ ಆಪ್ತ ಸಹಾಯಕ, ಇಂಪ್ರೂವ್‌ಮೆಂಟ್ ಟ್ರಸ್ಟ್‌ನ ಮಾಜಿ ಅಧ್ಯಕ್ಷ ಕೆಕೆ ಶರ್ಮಾ ಹೇಳಿದ್ದಾರೆ.

ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಕ್ಯಾಪ್ಟನ್
ಪಂಜಾಬ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪಿಎಲ್‌ಸಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿತ್ತು. ಅಂದಿನಿಂದ, ಕ್ಯಾಪ್ಟನ್ ಅಮರಿಂದರ್ ಅವರು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರೊಂದಿಗೆ ನಿಕಟ ಸಂಬಂಧವನ್ನು ಹೆಚ್ಚಿಸಿದ್ದರು.

ಬಿಜೆಪಿ ನಾಯಕರ ಜೊತೆ ದೋಸ್ತಿ
ಪಂಜಾಬ್ ರಾಜ್ಯದ ಅನೇಕ ವಿಷಯಗಳ ಬಗ್ಗೆ ಹಿರಿಯ ಬಿಜೆಪಿ ನಾಯಕರನ್ನು ಕ್ಯಾಪ್ಟನ್ ಅಮರಿಂದರ್ ಸಿಂಗ್ ಭೇಟಿಯಾಗುತ್ತಿದ್ದಾರೆ. ಇತ್ತೀಚೆಗೆ, ಪಟಿಯಾಲಾದ ಮೋತಿ ಬಾಗ್ ಪ್ಯಾಲೇಸ್‌ನಲ್ಲಿ ನಡೆದ ಪಿಎಲ್‌ಸಿ ಕಾರ್ಯಕರ್ತರ ಸಭೆಯಲ್ಲಿ, ಅವರ ಪುತ್ರಿ ಜೈ ಇಂದರ್ ಕೌರ್ ಅವರು ಸೆಪ್ಟೆಂಬರ್ 19 ರಂದು ಬಿಜೆಪಿ ಜೊತೆ ಪಂಜಾಬ್ ಲೋಕ ಕಾಂಗ್ರೆಸ್ ವಿಲೀನದ ಬಗ್ಗೆ ಸುಳಿವು ನೀಡಿದ್ದರು.

ಕಾಂಗ್ರೆಸ್ ಹೈಕಮಾಂಡ್ vs ಕ್ಯಾಪ್ಟನ್ ಅಮರಿಂದರ್ ಸಿಂಗ್
ಕಳೆದ ವರ್ಷ ಆಗಿನ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅವರೊಂದಿಗಿನ ಭಿನ್ನಾಭಿಪ್ರಾಯಗಳು ಪರಾಕಾಷ್ಠೆಗೆ ತಲುಪಿದಾಗ ಕ್ಯಾಪ್ಟನ್ ಅಮರಿಂದರ್ ಸಿಂಗ್​ರನ್ನು ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸಿತ್ತು. ಇದಾದ ನಂತರ ಅಮರಿಂದರ್ ಸಿಂಗ್ ಪಂಜಾಬ್ ಲೋಕ ಕಾಂಗ್ರೆಸ್ ಎಂಬ ಪ್ರತ್ಯೇಕ ಪಕ್ಷವನ್ನು ಸ್ಥಾಪಿಸಿದ್ದರು. ಅವರ ಪತ್ನಿ ಇನ್ನೂ ಕಾಂಗ್ರೆಸ್ ಸಂಸದೆಯಾಗಿದ್ದು, ಪಕ್ಷಕ್ಕೆ ರಾಜೀನಾಮೆ ನೀಡಿಲ್ಲ. ಅವರ ನಡೆ ಕುತೂಹಲ ಹುಟ್ಟಿಸಿದೆ.

ಇದನ್ನೂ ಓದಿ: PM Narendra Modi Birthday: ಮೋದಿ ಹುಟ್ಟುಹಬ್ಬಕ್ಕೆ ದೇಶಕ್ಕೆ ಚಿರತೆಗಳ ಉಡುಗೊರೆ!

 ಕಾಂಗ್ರೆಸ್​ನಿಂದ ವಜಾ ಆಗ್ತಾರಾ  ಕ್ಯಾಪ್ಟನ್ ಅಮರಿಂದರ್ ಸಿಂಗ್ ಪತ್ನಿ?
ಆದರೆ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ರಾಜಾ ವಡಿಂಗ್ ಕ್ಯಾಪ್ಟನ್ ಅಮರಿಂದರ್ ಸಿಂಗ್ ಪತ್ನಿ ಪ್ರಣೀತ್ ಕೌರ್ ಇನ್ನು ಮುಂದೆ ಕಾಂಗ್ರೆಸ್‌ನ ಭಾಗವಾಗಿಲ್ಲ ಎಂದು ಸಾರ್ವಜನಿಕವಾಗಿ ಹೇಳಿದ್ದಾರೆ. ಸಂಸದೆ ಪ್ರಣೀತ್ ಕೌರ್ ವಿಧಾನಸಭಾ ಚುನಾವಣೆಯಲ್ಲಿ ಗಂಡ ಕ್ಯಾಪ್ಟನ್ ಅಮರಿಂದರ್ ಸಿಂಗ್​ಗಾಗಿ ಪಕ್ಷದಿಂದ ಬಹಿರಂಗವಾಗಿ ಬಂಡಾಯವೆದ್ದಿದ್ದರು.

ಇದನ್ನೂ ಓದಿ: Mass Grave: 440 ಮೃತದೇಹ ಒಂದೇ ಕಡೆ ಪತ್ತೆ! ರಷ್ಯಾದ ಕ್ರೌರ್ಯಕ್ಕೆ ಇದೇ ಸಾಕ್ಷಿ ಎಂದ ಉಕ್ರೇನ್

ಪ್ರಣೀತ್ ಕೌರ್ ಪಟಿಯಾಲದಲ್ಲಿ ಬಿಜೆಪಿ ಆಯೋಜಿಸಿದ್ದ ಸಭೆಯಲ್ಲಿ ಪಾಲ್ಗೊಂಡು ತಮ್ಮ ಪತಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ಪರವಾಗಿ ಮತ ಯಾಚಿಸಿದ್ದರು. ಹೀಗಾಗಿ ಪ್ರಣೀತ್ ಕೌರ್​​ರನ್ನು ಕಾಂಗ್ರೆಸ್​ನಿಂದ ಉಚ್ಛಾಟಿಸುವಂತೆ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ರಾಜಾ ವಡಿಂಗ್ ಆಗ್ರಹಿಸಿದ್ದರು.
Published by:ಗುರುಗಣೇಶ ಡಬ್ಗುಳಿ
First published: