ಸಿಬಿಎಸ್​ಇ ಪರೀಕ್ಷೆ ನಡೆಯುತ್ತಾ? ಇಲ್ಲವಾ?; ಕೇಂದ್ರ ಸರ್ಕಾರದಿಂದ ಇಂದು ಮಹತ್ವದ ನಿರ್ಧಾರ

CBSE Exam: ಎಸ್​ಎಸ್​ಎಲ್​ಸಿ ಮತ್ತು ಪಿಯುಸಿಯ ಕೇಂದ್ರೀಯ ಪಠ್ಯಕ್ರಮದ (ಸಿಬಿಎಸ್​ಇ) ಪರೀಕ್ಷೆಗಳನ್ನು ನಡೆಸುವ ಬಗ್ಗೆ ಹಾಗೂ ದಿನಾಂಕದ ಬಗ್ಗೆ ಇಂದು ಘೋಷಣೆಯಾಗುವ ಸಾಧ್ಯತೆ ಹೆಚ್ಚಾಗಿದೆ.

Sushma Chakre | news18-kannada
Updated:June 22, 2020, 3:16 PM IST
ಸಿಬಿಎಸ್​ಇ ಪರೀಕ್ಷೆ ನಡೆಯುತ್ತಾ? ಇಲ್ಲವಾ?; ಕೇಂದ್ರ ಸರ್ಕಾರದಿಂದ ಇಂದು ಮಹತ್ವದ ನಿರ್ಧಾರ
ಸಾಂದರ್ಭಿಕ ಚಿತ್ರ.
  • Share this:
ನವದೆಹಲಿ (ಜೂ. 22): ಭಾರತದಲ್ಲಿ ಕೊರೋನಾ ಅಟ್ಟಹಾಸ ಶುರುವಾದ ಕಾರಣ ಎಲ್ಲ ಶಾಲಾ-ಕಾಲೇಜು ಪರೀಕ್ಷೆಗಳನ್ನೂ ಮುಂದೂಡಲಾಗಿತ್ತು. ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಲಾಕ್​ಡೌನ್ ನಡುವೆಯೇ ಎಸ್​ಎಸ್​ಎಲ್​ಸಿ ಮತ್ತು ಪಿಯುಸಿ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಆದರೆ, ಸಿಬಿಎಸ್​ಇ ಪರೀಕ್ಷೆ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರವನ್ನೂ ಪ್ರಕಟಿಸಿರಲಿಲ್ಲ. ಇಂದು ಈ ಬಗ್ಗೆ ಖಚಿತವಾದ ಮಾಹಿತಿ ಸಿಗುವ ಸಾಧ್ಯತೆಯಿದೆ.

ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಸಚಿವರಾದ ರಮೇಶ್ ಪೊಕ್ರಿಯಾಲ್ ಈ ಬಗ್ಗೆ ಇಂದು ಅಧಿಕಾರಿಗಳ ಜೊತೆ ಸಭೆ ನಡೆಸುತ್ತಿದ್ದಾರೆ. ಎಸ್​ಎಸ್​ಎಲ್ಸಿಇ ಮತ್ತು ಪಿಯುಸಿಯ ಕೇಂದ್ರೀಯ ಪಠ್ಯಕ್ರಮದ (ಸಿಬಿಎಸ್​ಇ) ಪರೀಕ್ಷೆಗಳನ್ನು ನಡೆಸುವ ಬಗ್ಗೆ ಹಾಗೂ ದಿನಾಂಕದ ಬಗ್ಗೆ ಇಂದು ಘೋಷಣೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಸೇರಿದಂತೆ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಲಾಗುತ್ತಿದೆ. ಇದಾದ ಕೂಡಲೇ ಪರೀಕ್ಷೆಯ ದಿನಾಂಕ ಘೋಷಣೆಯಾಗಲಿದೆ.


ಇದರ ಜೊತೆಗೆ ಎನ್​ಇಇಟಿ ಯುಜಿ (ನೀಟ್), ಜೆಇಇ ಮೇನ್ ಪರೀಕ್ಷೆಗಳ ಬಗ್ಗೆಯೂ ಸಚಿವರು ಮಾಹಿತಿ ನೀಡುವ ಸಾಧ್ಯತೆಯಿದೆ. ಇಂದು ಸಂಜೆಯೊಳಗೆ ಈ ಬಗ್ಗೆ ನಿಖರವಾದ ಮಾಹಿತಿ ಸಿಗಲಿದೆ.
First published: June 22, 2020, 2:48 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading