ಮುಂದುವರಿದ ದೆಹಲಿ ಹಿಂಸಾಚಾರ: ಇಂದೂ ಶಾಲಾ ಕಾಲೇಜು ರಜೆ; ಬೋರ್ಡ್​ ಪರೀಕ್ಷೆ ಮುಂದೂಡಿಕೆ

ದೆಹಲಿ ಶಿಕ್ಷಣ ಇಲಾಖೆ ಪರೀಕ್ಷೆಗಳನ್ನು ಮುಂದೂಡಿ ಆದೇಶಿಸಿದೆ. ವಿದ್ಯಾರ್ಥಿಗಳ ಸುರಕ್ಷತೆ ಗಮನದಲ್ಲಿಟ್ಟುಕೊಂಡು ಈ ತೀರ್ಮಾನವನ್ನು ಕೈಗೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಮನೀಶ್ ಸಿಸೋಡಿಯಾ ಮತ್ತು ಅರವಿಂದ್ ಕೇಜ್ರಿವಾಲ್.

ಮನೀಶ್ ಸಿಸೋಡಿಯಾ ಮತ್ತು ಅರವಿಂದ್ ಕೇಜ್ರಿವಾಲ್.

  • Share this:
    ನವದೆಹಲಿ(ಫೆ.27): ಸಿಎಎ ಮತ್ತು ಎನ್​​ಆರ್​ಸಿ ವಿರೋಧಿಸಿ ನಡೆಸುತ್ತಿದ್ದ ಹೋರಾಟ ಹಿಂಸಾರೂಪಕ್ಕೆ ತಿರುಗಿದ ಪರಿಣಾಮ ದೆಹಲಿಯಲ್ಲಿ ಸಾವನ್ನಪಿದವರ ಸಂಖ್ಯೆಯೇರುತ್ತಲೇ ಇದೆ. ಇಲ್ಲಿಯವರೆಗೂ ಸುಮಾರು 190ಕ್ಕೂ ಮಂದಿ ಪೊಲೀಸರು ಗಾಯಗೊಂಡಿದ್ದಾರೆ. ಇಲ್ಲಿನ ಹಿಂಸಾಚಾರದಲ್ಲಿ ಒಬ್ಬ ಪೊಲೀಸ್ ಕಾನ್ಸ್​​ಟೇಬಲ್​​ ಸೇರಿದಂತೆ 27 ಮಂದಿ ಸಾವನ್ನಪ್ಪಿದ್ದಾರೆ. ಕೈಮೀರುತ್ತಿರುವ ಹಿಂಸಾಚಾರ ತಹಬದಿಗೆ ದೆಹಲಿ ಪೊಲೀಸರು ಕಂಡಲ್ಲಿ ಗುಂಡು ಆದೇಶ ಜಾರಿಗೊಳಿಸಿದ್ದಾರೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಯಾವುದೇ ಅನಾಹುತ ಸಂಭವಿಸದಂತೆ ತಡೆಯಲು ಗುರುವಾರವೂ ಶಾಲಾ-ಕಾಲೇಜುಗಳಿಗೆ ರಜೆ ಮುಂದುವರಿದಿದೆ. ಫೆಬ್ರವರಿ 26ರಂದು ನಡೆಯಬೇಕಿದ್ದ 10 ಮತ್ತು 12ನೇ ತರಗತಿಯ ಬೋರ್ಡ್​ ಪರೀಕ್ಷೆಗಳನ್ನು ಮುಂದೂಡಲಾಗಿದೆ.

    ದೆಹಲಿ ಶಿಕ್ಷಣ ಇಲಾಖೆ ಪರೀಕ್ಷೆಗಳನ್ನು ಮುಂದೂಡಿ ಆದೇಶಿಸಿದೆ. ವಿದ್ಯಾರ್ಥಿಗಳ ಸುರಕ್ಷತೆ ಗಮನದಲ್ಲಿಟ್ಟುಕೊಂಡು ಈ ತೀರ್ಮಾನವನ್ನು ಕೈಗೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಈ ಕುರಿತು ಹೇಳಿಕೆ ನೀಡಿದ್ದಾರೆ. ಗಲಭೆ ಪೀಡಿತ ಪ್ರದೇಶದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.



    ರಾಷ್ಟ್ರೀಯ ನಾಗರಿಕ ನೋಂದಣಿ ಮತ್ತು ಪೌರತ್ವ ಕಾಯ್ದೆ ಪರ-ವಿರೋಧಿ ಗುಂಪುಗಳ ನಡುವಿನ ಘರ್ಷಣೆಯಿಂದ ದೆಹಲಿಯಲ್ಲಿ ಹಿಂಸಾಚಾರ ಹೆಚ್ಚುತ್ತಲ್ಲೇ ಇದೆ. ಈ ಬೆನ್ನಲ್ಲೇ ಎಚ್ಚೆತ್ತ ದೆಹಲಿ ಪೊಲೀಸರು ಕಂಡಲ್ಲಿ ಗುಂಡಿಕ್ಕಲು ಆದೇಶ ಹೊರಡಿಸಿದ್ದಾರೆ. ಈ ಆದೇಶ ಈಶಾನ್ಯ ದೆಹಲಿಯ ಹಲವೆಡೆ ಜಾರಿಯಲ್ಲಿದ್ದು, ಹಿಂಸಾಚಾರ ತಡೆಗಟ್ಟಲು ಕಠಿಣ ಆದೇಶ ಹೊರಡಿಸಲಾಗಿದೆ. ಈ ಮಧ್ಯೆ ಸಿಎಎ ಬಗ್ಗೆ ಪ್ರಚೋದನಕಾರಿ ಹೇಳಿಕೆ ನೀಡುವವರನ್ನು ವಿರುದ್ಧ ಕಠಿಣ ಕ್ರಮಕೈಗೊಳ್ಳಿ ಎಂದು ಸುಪ್ರೀಂಕೋರ್ಟ್ ಪೊಲೀಸರಿಗೆ ನಿರ್ದೇಶನ ನೀಡಿದೆ.

    ಇದನ್ನೂ ಓದಿ: ದೆಹಲಿ ಹಿಂಸಾಚಾರ: ಮೃತ ಕಾನ್ಸ್​​ಟೇಬಲ್​​ ರತನ್ ಲಾಲ್ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ

    ದೆಹಲಿಯ ನಾಲ್ಕು ಭಾಗಗಳಲ್ಲಿ ನಿಷೇಧಾಜ್ಞೆ ಜಾರಿಗೆ ತರಲಾಗಿದೆ. ಇದೇ ವೇಳೆ ಹಿಂಸಾಚಾರ ತಡೆಗಟ್ಟಲು 12 ಪ್ಯಾರ ಮಿಲಿಟರಿ ಪಡೆ ನಿಯೋಜನೆ ಮಾಡಲಾಗುತ್ತಿದೆ. ಇನ್ನು ಈಶಾನ್ಯ ದೆಹಲಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿದ್ದ ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ.

    ಈ ಮಧ್ಯೆಯೇ ದೆಹಲಿ ಹಿಂಸಾಚಾರದಲ್ಲಿ ಮೃತಪಟ್ಟ ಮುಖ್ಯ ಪೊಲೀಸ್​​ ಕಾನ್ಸ್​ಟೇಬಲ್​​ ರತನ್​ ಲಾಲ್ ಕುಟುಂಬಕ್ಕೆ ಒಂದು ಕೋಟಿ ರೂ. ನೀಡುವುದಾಗಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ ಮಾಡಿದ್ದಾರೆ. ನಿನ್ನೆ ವಿಧಾನಸಭಾ ಕಲಾಪದಲ್ಲಿ ಮಾತನಾಡಿದ ಸಿಎಂ ಕೇಜ್ರಿವಾಲ್, ಮೃತ ರತನ್​ ಲಾಲ್ ಕುಟುಂಬದ ರಕ್ಷಣೆಯ ಜವಾಬ್ದಾರಿ ಸರ್ಕಾರದ್ದು. ಮೃತರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ನೀಡುತ್ತೇವೆ. ಜತೆಗೆ ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ನೌಕರಿ ನೀಡಲಾಗುವುದು ಎಂದಿದ್ದಾರೆ.
    First published: