ದೆಹಲಿ ಹಿಂಸಾಚಾರ; ಶಾಲಾ-ಕಾಲೇಜುಗಳಿಗೆ ರಜೆ; ಸಿಬಿಎಸ್‌ಇ ಪರೀಕ್ಷೆ ಮುಂದೂಡಿಕೆ

ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಈ ಕುರಿತು ಹೇಳಿಕೆ ನೀಡಿದ್ದಾರೆ. ಗಲಭೆ ಪೀಡಿತ ಪ್ರದೇಶದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

news18-kannada
Updated:February 26, 2020, 7:35 AM IST
ದೆಹಲಿ ಹಿಂಸಾಚಾರ; ಶಾಲಾ-ಕಾಲೇಜುಗಳಿಗೆ ರಜೆ; ಸಿಬಿಎಸ್‌ಇ ಪರೀಕ್ಷೆ ಮುಂದೂಡಿಕೆ
ಮನೀಶ್ ಸಿಸೋಡಿಯಾ ಮತ್ತು ಅರವಿಂದ್ ಕೇಜ್ರಿವಾಲ್.
  • Share this:
ನವದೆಹಲಿ: ಸಿಎಎ ಮತ್ತು ಎನ್​​ಆರ್​ಸಿ ವಿರೋಧಿಸಿ ನಡೆಸುತ್ತಿದ್ದ ಹೋರಾಟ ಹಿಂಸಾರೂಪಕ್ಕೆ ತಿರುಗಿದ ಪರಿಣಾಮ ದೆಹಲಿಯಲ್ಲಿ ಸಾವನ್ನಪಿದವರ ಸಂಖ್ಯೆಯೇರುತ್ತಲೇ ಇದೆ. ಇಲ್ಲಿಯವರೆಗೂ ಸುಮಾರು 150ಕ್ಕೂ ಮಂದಿ ಪೊಲೀಸರು ಗಾಯಗೊಂಡಿದ್ದಾರೆ. ಇಲ್ಲಿನ ಹಿಂಸಾಚಾರದಲ್ಲಿ ಒಬ್ಬ ಪೊಲೀಸ್ ಕಾನ್ಸ್​​ಟೇಬಲ್​​ ಸೇರಿದಂತೆ 13 ಮಂದಿ ಸಾವನ್ನಪ್ಪಿದ್ದಾರೆ. ಕೈಮೀರುತ್ತಿರುವ ಹಿಂಸಾಚಾರ ತಹಬದಿಗೆ ದೆಹಲಿ ಪೊಲೀಸರು ಕಂಡಲ್ಲಿ ಗುಂಡು ಆದೇಶ ಜಾರಿಗೊಳಿಸಿದ್ದಾರೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಯಾವುದೇ ಅನಾಹುತ ಸಂಭವಿಸದಂತೆ ತಡೆಯಲು ಬುಧವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜತೆಗೆ ಸಿಬಿಎಸ್‌ಇ ಫೆಬ್ರವರಿ 26ರಂದು ನಡೆಯಬೇಕಿದ್ದ 10 ಮತ್ತು 12ನೇ ತರಗತಿ ಪರೀಕ್ಷೆಗಳನ್ನು ಮುಂದೂಡಿ ಆದೇಶ ಹೊರಡಿಸಿದೆ.

ದೆಹಲಿ ಶಿಕ್ಷಣ ಇಲಾಖೆ ಪರೀಕ್ಷೆಗಳನ್ನು ಮುಂದೂಡಿ ಆದೇಶಿಸಿದೆ. ವಿದ್ಯಾರ್ಥಿಗಳ ಸುರಕ್ಷತೆ ಗಮನದಲ್ಲಿಟ್ಟುಕೊಂಡು ಈ ತೀರ್ಮಾನವನ್ನು ಕೈಗೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಈ ಕುರಿತು ಹೇಳಿಕೆ ನೀಡಿದ್ದಾರೆ. ಗಲಭೆ ಪೀಡಿತ ಪ್ರದೇಶದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಮೂರು ದಿನಗಳ ಹಿಂದೆ ದೆಹಲಿಯಲ್ಲಿ ಸಿಎಎ ಮತ್ತು ಎನ್​​ಆರ್​ಸಿ ಪರ-ವಿರೋಧಿ ಗುಂಪುಗಳ ನಡುವೆ ಶುರುವಾದ ಸಂಘರ್ಷ ಮೂರನೇ ದಿನವೂ ಮುಂದುವರಿದಿದೆ. ಇಲ್ಲಿನ ಈಶಾನ್ಯ ಭಾಗದಲ್ಲಿ ಇರುವ ಮೌಜ್​ಪುರದಲ್ಲಿ ಇಂದು ಕೂಡ ಎರಡು ಗುಂಪುಗಳು ಪರಸ್ಪರ ಕಲ್ಲು ತೂರಾಟದಲ್ಲಿ ತೊಡಗಿವೆ. ನಿನ್ನೆ ಕಲ್ಲು ತೂರಾಟದ ವೇಳೆ ಪೊಲೀಸ್ ಕಾನ್ಸ್​ಟೇಬಲ್​​​​ ಓರ್ವ ಸಾವನ್ನಪ್ಪಿದ್ದಾರೆ. ಈಗ ಪೊಲೀಸ್ ಕಾನ್ಸ್​ಟೇಬಲ್ ಬೆನ್ನಲ್ಲೇ 12 ಮಂದಿ ನಾಗರಿಕರು ಮೃತಪಟ್ಟಿದ್ದಾರೆ.ಇದನ್ನೂ ಓದಿ: ದೆಹಲಿಯಲ್ಲಿ ಮುಂದುವರಿದ ಹಿಂಸಾಚಾರ: ಸಾವಿನ ಸಂಖ್ಯೆ 13ಕ್ಕೇರಿಕೆ; ಉದ್ವಿಘ್ನ ಪರಿಸ್ಥಿತಿ

ನಿನ್ನೆ ಸೋಮವಾರ(24) ಸಿಎಎ ಬೆಂಬಲಿಗರು ಎನ್ನಲಾದ ಗುಂಪೊಂದು ವ್ಯಕ್ತಿಯೊಬ್ಬರ ಮೇಲೆ ದೊಣ್ಣೆಗಳಿಂದ ದಾಳಿ ನಡೆಸಿದ್ದರು. ಹೀಗೊಂದು ಫೋಟೊ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ಪತ್ರಕರ್ತ ದಾನಿಶ್ ಸಿದ್ದಿಕಿ ಎಂಬುವರ ಕ್ಯಾಮರಾದಲ್ಲಿ ಈ ಭಯಾನಕ ದಾಳಿಯ ದೃಶ್ಯ ಸೆರೆಯಾಗಿದೆ ಎಂದು ವರದಿಯಾಗಿದೆ. ಇದರಿಂದ ದೆಹಲಿಯ ಈಶಾನ್ಯ ಭಾಗದಲ್ಲಿ ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ತಿರುಗಿದ್ದು, 144 ಸೆಕ್ಷನ್​​ ಜಾರಿಗೊಳಿಸಲಾಗಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಸಿಎಎ ಪರ-ವಿರೋಧಿ ಗುಂಪುಗಳ ನಡುವಿನ ಘರ್ಷಣೆ ತಡೆಯಲು ಪೊಲೀಸರು ಹರಸಾಹಸ ಮಾಡುತ್ತಿದ್ಧಾರೆ.

ಇತ್ತೀಚೆಗೆ ಭಾನುವಾರ(ನಿನ್ನೆ) ದೆಹಲಿಯ ಈಶಾನ್ಯ ಭಾಗದಲ್ಲಿರುವ ಜಫ್ರಾಬಾದ್​ನಲ್ಲಿ ಎರಡು ಗುಂಪುಗಳ ನಡುವೆ ಸಂಘರ್ಷ ನಡೆದಿತ್ತು. ಪರಸ್ಪರ ಕಲ್ಲುತೂರಾಟದಲ್ಲಿ ತೊಡಗಿದ್ದ ಎರಡು ಗುಂಪುಗಳನ್ನು ಚದುರಿಸಲು ಪೊಲೀಸರು ಟಿಯರ್ ಗ್ಯಾಸ್ ಬಳಕೆ ಮಾಡಿದ್ದರು. ಕೆಲ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಪ್ರಹಾರವೂ ಕೂಡ ನಡೆಸಲಾಗಿತ್ತು. ಈ ಬೆನ್ನಲ್ಲೇ ಸೋಮವಾರ ಕೂಡ ಇದೀ ಪರಿಸ್ಥಿತಿ ನಿರ್ಮಾಣವಾಗಿದೆ.
First published: February 25, 2020, 10:30 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading