HOME » NEWS » National-international » CCL RECRUITMENT 2021 FOR APPRENTICE POSTS APPLY ONLINE FOR 482 APPRENTICE POSTS HG

CCL Recruitment 2021: 482 ಅಪ್ರೆಂಟಿಸ್​ ಹುದ್ದೆಗಳು ಖಾಲಿ; SSLC ವಿದ್ಯಾರ್ಹತೆ ಪಡೆದವರಿಗೆ ಅವಕಾಶ!

ಎಸ್​ಎಸ್​ಎಲ್​ಸಿ ಮತ್ತು ಪಿಯುಸಿ ವಿದ್ಯಾರ್ಹತೆಯನ್ನು ಪಡೆದ  ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

news18-kannada
Updated:February 2, 2021, 1:36 PM IST
CCL Recruitment 2021: 482 ಅಪ್ರೆಂಟಿಸ್​ ಹುದ್ದೆಗಳು ಖಾಲಿ; SSLC ವಿದ್ಯಾರ್ಹತೆ ಪಡೆದವರಿಗೆ ಅವಕಾಶ!
ಸಾಂದರ್ಭಿಕ ಚಿತ್ರ
  • Share this:
ಸೆಂಟ್ರಲ್ ಕೋಲ್​ಫೀಲ್ಡ್ಸ್ ಲಿಮಿಟೆಡ್​ನಲ್ಲಿ ಖಾಲಿ ಇರುವ  482 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದಾಗಿ ತಿಳಿಸಿದೆ

ವಿದ್ಯಾರ್ಹತೆ:

ಎಸ್​ಎಸ್​ಎಲ್​ಸಿ ಮತ್ತು ಪಿಯುಸಿ ವಿದ್ಯಾರ್ಹತೆಯನ್ನು ಪಡೆದ  ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ವಯೋಮಿತಿ:
ಜನವರಿ 1, 2021ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 21 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

-ಓಬಿಸಿ, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ,ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಸ್ಟೈಫಂಡ್:ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 6 ಸಾವಿರ-ರೂ ಸ್ಟೈಫಂಡ್ ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ: ಆರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ?:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್  ಮೂಲಕ ಅಧಿಕೃತ ವೆಬ್‌ಸೈಟ್ https://apprenticeshipindia.org/ ಗೆ ಭೇಟಿ ನೀಡಬೇಕು. ನಂತರ ಅಲ್ಲಿಸ ನೀಡಲಾಗಿರುವ ಮಾಹಿತಿಯನ್ನು ಓದಿ, ಭರ್ತಿ ಮಾಡಬೇಕು. ಫೆಬ್ರವರಿ 21,2021ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.
Published by: Harshith AS
First published: February 2, 2021, 1:34 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories