HOME » NEWS » National-international » CENTRAL AGENCIES BEING MISUSED TO TARGET POLITICAL RIVALS SHIV SENA MAK

ರಾಜಕೀಯ ದ್ವೇಷ ಮತ್ತು ವಿರೋಧ ಪಕ್ಷಗಳನ್ನು ಹಣಿಯಲು ಕೇಂದ್ರದ ಏಜೆನ್ಸಿಗಳ ದುರುಪಯೋಗ; ಶಿವಸೇನೆ

ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರು ಎನ್‌ಸಿಪಿ ನಾಯಕ ಅನಿಲ್ ದೇಶ್ಮುಖ್ ವಿರುದ್ಧದ ಭ್ರಷ್ಟಾಚಾರದ ಆರೋಪದ ಬಗ್ಗೆ 15 ದಿನಗಳೊಳಗೆ ಪ್ರಾಥಮಿಕ ತನಿಖೆ ನಡೆಸುವಂತೆ ಹೈಕೋರ್ಟ್ ಸೋಮವಾರ ಸಿಬಿಐಗೆ ನಿರ್ದೇಶನ ನೀಡಿದೆ.

news18-kannada
Updated:April 7, 2021, 8:52 PM IST
ರಾಜಕೀಯ ದ್ವೇಷ ಮತ್ತು ವಿರೋಧ ಪಕ್ಷಗಳನ್ನು ಹಣಿಯಲು ಕೇಂದ್ರದ ಏಜೆನ್ಸಿಗಳ ದುರುಪಯೋಗ; ಶಿವಸೇನೆ
ಉದ್ದವ್ ಠಾಕ್ರೆ.
  • Share this:
ಮುಂಬೈ (ಏಪ್ರಿಲ್ 07); ರಾಜಕೀಯ ಪ್ರತಿಸ್ಪರ್ಧಿಗಳ ವಿರುದ್ಧ ಸೇಡು ತೀರಿಸಿಕೊಳ್ಳಲು ಮತ್ತು ವಿರೋಧ ಪಕ್ಷಗಳನ್ನು ಹಣಿಯುವ ಸಲುವಾಗಿ ಕೇಂದ್ರ ಸರ್ಕಾರ ಸಿಬಿಐ, ಜಾರಿ ನಿರ್ದೇಶನಾಲಯ ಸೇರಿದಂತೆ ಎಲ್ಲಾ ರೀತಿಯ ಕಾನೂನು ಮತ್ತು ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಬುಧವಾರ ಶಿವಸೇನೆ ಆರೋಪಿಸಿದೆ. ಹಿರಿಯ ಪೊಲೀಸ್ ಅಧಿಕಾರಿ ಪರಮ್ ಬೀರ್ ಸಿಂಗ್, ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ ವಿರುದ್ಧ ಮಾಡಿದ್ದ ಭ್ರಷ್ಟಾಚಾರದ ಆರೋಪದಲ್ಲಿ ಬಾಂಬೆ ಹೈಕೋರ್ಟ್ ಸಿಐಡಿ ತನಿಖೆಗೆ ಸೂಚಿಸಿದೆ. ಆದರೆ, ವಕೀಲೆ ಜೈಶ್ರೀ ಪಾಟೀಲ್ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಯಲ್ಲಿ ಆರೋಪಗಳನ್ನು ಹುಡುಕಿದೆ ಎಂದು ಶಿವಸೇನೆಯ ಮುಖವಾಣಿ 'ಸಾಮ್ನಾ' ದ ಸಂಪಾದಕೀಯದಲ್ಲಿ ತಿಳಿಸಲಾಗಿದೆ.

"ಕಾನೂನಿಗಿಂತ ಯಾರು ಮೇಲಲ್ಲ. ಆದರೆ, ರಾಜಕೀಯ ಪ್ರತಿಸ್ಪರ್ಧಿಗಳನ್ನು ಮೂಲೆಗುಂಪಾಗಿಸಲು ಕಾನೂನು ಮತ್ತು ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ ಎಂಬುದು ಈಗ ಸ್ಪಷ್ಟವಾಗಿದೆ. ಮಹಾರಾಷ್ಟ್ರ ಸರ್ಕಾರವನ್ನು ಹೀಗೆ ದುರ್ಬಲಗೊಳಿಸುವಲ್ಲಿ ಸಾಂವಿಧಾನಿಕ ಅಧಿಕಾರಿಗಳು ಕೂಡ ಭಾಗಿಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ" ಎಂದು ಮಹಾರಾಷ್ಟ್ರದ ಜನಪ್ರಿಯ ಮರಾಠಿ ಪತ್ರಿಕೆಯೂ ಆಗಿರುವ ಸಾಮ್ನಾ ಅಭಿಪ್ರಾಯಪಟ್ಟಿದೆ.

ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರು ಎನ್‌ಸಿಪಿ ನಾಯಕ ಅನಿಲ್ ದೇಶ್ಮುಖ್ ವಿರುದ್ಧದ ಭ್ರಷ್ಟಾಚಾರದ ಆರೋಪದ ಬಗ್ಗೆ 15 ದಿನಗಳೊಳಗೆ ಪ್ರಾಥಮಿಕ ತನಿಖೆ ನಡೆಸುವಂತೆ ಹೈಕೋರ್ಟ್ ಸೋಮವಾರ ಸಿಬಿಐಗೆ ನಿರ್ದೇಶನ ನೀಡಿದೆ. ತೀರ್ಪಿನ ನಂತರ ಅನಿಲ್ ದೇಶ್ಮುಖ್ ರಾಜ್ಯ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಇದನ್ನೂ ಓದಿ: Rahul Gandhi: ಅಗತ್ಯವಿರುವವರಿಗೆ ಮಾತ್ರ ಕೊರೋನಾ ಲಸಿಕೆ ನೀಡಿದರೆ ಉಳಿದವರ ಕಥೆ ಏನು?; ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಕಿಡಿ

"ಅನಿಲ್ ದೇಶ್ಮುಖ್ ವಿರುದ್ಧದ ಆರೋಪಗಳ ಬಗ್ಗೆ ತನಿಖೆ ನಡೆಸುವಂತೆ ಬಾಂಬೆ ಹೈಕೋರ್ಟ್ ಆದೇಶ ಹೊರಡಿಸಿದೆ, ಆದರೆ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ 10 ವರ್ಷಗಳ ಹಳೆಯ ಭ್ರಷ್ಟಾಚಾರ ಪ್ರಕರಣದಲ್ಲಿ ಅವರ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳನ್ನು ಸುಪ್ರೀಂ ಕೋರ್ಟ್‌ ತಡೆಹಿಡಿದಿದೆ. ಅನಿಲ್ ದೇಶ್ಮುಖ್ ಮತ್ತು ಕರ್ನಾಟಕ ಮುಖ್ಯಮಂತ್ರಿ ಇಬ್ಬರ ವಿಚಾರದಲ್ಲಿ ಏಕೆ ವಿಭಿನ್ನ ನಿರ್ಧಾರಗಳು? ನೈತಿಕತೆಯು ಶಿವಸೇನೆ ಮತ್ತು ಎನ್‌ಸಿಪಿಗೆ ಮಾತ್ರವೇ?” ಎಂದು ಶಿವಸೇನೆ ಪ್ರಶ್ನಿಸಿದೆ.

ಅಕ್ರಮ ಡಿನೋಟಿಫಿಕೇಶನ್‌ ಭ್ರಷ್ಟಾಚಾರದ ಪ್ರಕರಣದಲ್ಲಿ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧದ ತನಿಖೆಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ಕರ್ನಾಟಕದ ಪ್ರಸ್ತುತ ಮುಖ್ಯಮಂತ್ರಿಯಾಗಿರುವ ಬಿ.ಎಸ್.ಯಡಿಯುರಪ್ಪ 2006 ರಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿದ್ದರು. ಈ ಅಧಿಕಾರಾವಧಿಯಲ್ಲಿ ಅಕ್ರಮವಾಗಿ ಭೂಮಿಯ ಡಿ-ನೋಟಿಫೈ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
Published by: MAshok Kumar
First published: April 7, 2021, 8:52 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories