HOME » NEWS » National-international » CENTRAL GOVERNMENT ISSUES NEW GUIDELINES FOR SOCIAL MEDIA MAK

ಸಾಮಾಜಿಕ ಮಾಧ್ಯಮಗಳ ನಿಯಂತ್ರಣಕ್ಕೆ ಕೇಂದ್ರ ಸರ್ಕಾರದ ಹೊಸ ಮಾರ್ಗಸೂಚಿ; ಇಲ್ಲಿದೆ ಮಾಹಿತಿ!

ಹೊಸ ಮಾರ್ಗಸೂಚಿಯ ಕರಡಿನ ಪ್ರಕಾರ, ಮೇಲ್ವಿಚಾರಣಾ ಕಾರ್ಯವಿಧಾನವು ರಕ್ಷಣಾ, ವಿದೇಶಾಂಗ ವ್ಯವಹಾರಗಳು, ಗೃಹ, ಮಾಹಿತಿ ಮತ್ತು ಪ್ರಸಾರ, ಕಾನೂನು, ಐಟಿ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯಗಳ ಪ್ರತಿನಿಧಿಗಳ ಸಮಿತಿಯನ್ನು ಒಳಗೊಂಡಿರುತ್ತದೆ.

news18-kannada
Updated:February 25, 2021, 4:36 PM IST
ಸಾಮಾಜಿಕ ಮಾಧ್ಯಮಗಳ ನಿಯಂತ್ರಣಕ್ಕೆ ಕೇಂದ್ರ ಸರ್ಕಾರದ ಹೊಸ ಮಾರ್ಗಸೂಚಿ; ಇಲ್ಲಿದೆ ಮಾಹಿತಿ!
ಕೇಂದ್ರ ಐಟಿ ಸಚಿವ ರವಿಶಂಕರ್​ ಪ್ರಸಾದ್.
  • Share this:
ನವ ದೆಹಲಿ (ಫೆಬ್ರವರಿ25); ಸಾಮಾಜಿಕ ಮಾಧ್ಯಮಗಳ ದುರುಪಯೋಗವನ್ನು ತಡೆಯುವ ಸಲುವಾಗಿ ಕೇಂದ್ರ ಸರ್ಕಾರ ಗುರುವಾರ ಹೊಸ ನಿಯಮಗಳನ್ನು ಪ್ರಕಟಿಸಿದೆ. ಇತ್ತೀಚಿನ ದಿನಗಳಲ್ಲಿ ಹಲವರು ಸಾಮಾಜಿಕ ಮಾಧ್ಯಮಗಳನ್ನು ತಪ್ಪಾಗಿ ಬಳಸಿಕೊಳ್ಳುತ್ತಿದ್ದಾರೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕುವ ಸಲುವಾಗಿ ಎಲ್ಲಾ ಸಾಮಾಜಿಕ ಮಾಧ್ಯಮ ಸಂಸ್ಥೆಗಳು ಕಡ್ಡಾಯವಾಗಿ ಕುಂದುಕೊರತೆ ಅಧಿಕಾರಿಯನ್ನು ನೇಮಿಸಬೇಕು. ತಪ್ಪು ಮಾಹಿತಿಗಳನ್ನು ಹರಡುವವರ ವಿವರವನ್ನು ಬಹಿರಂಗಪಡಿಸಬೇಕು ಮತ್ತು ಹೆಣ್ಣು ಮಕ್ಕಳ-ಮಹಿಳೆಯರ ಮಾರ್ಪಿಂಗ್​ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಡದಂತೆ ಎಚ್ಚರಿಕೆ ವಹಿಸಬೇಕು ಎಂದು ಕೇಂದ್ರ ಸರ್ಕಾರ ತಾಕೀತು ಮಾಡಲಾಗಿದೆ.

ಸಾಮಾಜಿಕ ಜಾಲತಾಣಗಳ ವೇದಿಕೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಮತ್ತು ನಕಲಿ ಸುದ್ದಿಗಳ ಹರಡುವಿಕೆಯ ಬಗ್ಗೆ ಕೇಂದ್ರ ಐಟಿ ಸಚಿವ ರವಿಶಂಕರ್​ ಪ್ರಸಾದ್​ ಕಳವಳ ವ್ಯಕ್ತಪಡಿಸಿದ್ದಾರೆ. ಇದೇ ಕಾರಣಕ್ಕೆ ಸಾಮಾಜಿಕ ಮಾಧ್ಯಮಗಳ ನಿಯಂತ್ರಣಕ್ಕೆ ಅವರು ಇಂದು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದಾರೆ.

ಹೊಸ ನಿಯಮಗಳ ಪ್ರಕಾರ, ಸಾಮಾಜಿಕ ಮಾಧ್ಯಮ ಮಧ್ಯವರ್ತಿಗಳು ಕುಂದುಕೊರತೆ ಅಧಿಕಾರಿಯನ್ನು ನೇಮಿಸಬೇಕಾಗುತ್ತದೆ, ಅವರು 24 ಗಂಟೆಗಳಲ್ಲಿ ದೂರುಗಳನ್ನು ದಾಖಲಿಸಿಕೊಳ್ಳಬೇಕು. ಅಲ್ಲದೆ, ದಾಖಲಿಸಿಕೊಂಡ ದೂರುಗಳನ್ನು ಶೀಘ್ರದಲ್ಲಿ ಬಗೆಹರಿಸಿ ಅದರ ಮಾಸಿಕ ವರದಿಯನ್ನು ಕೇಂದ್ರ ಸರ್ಕಾರಕ್ಕೆ ನೀಡಬೇಕು ಎಂದು ಹೊಸ ಮಾರ್ಗಸೂಚಿಯಲ್ಲಿ ನಾನಾ ವಿಚಾರಗಳನ್ನು ಉಲ್ಲೇಖಿಸಲಾಗಿದೆ.

ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಮತ್ತು ಮಾಹಿತಿ ಹಾಗೂ ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್ ಬಿಡುಗಡೆ ಮಾಡಲಿರುವ ಕರಡು ನಿಯಮಗಳ ಪ್ರತಿ ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಹೊಸ ಮಾರ್ಗಸೂಚಿಯ ಕರಡಿನ ಪ್ರಕಾರ, ಮೇಲ್ವಿಚಾರಣಾ ಕಾರ್ಯವಿಧಾನವು ರಕ್ಷಣಾ, ವಿದೇಶಾಂಗ ವ್ಯವಹಾರಗಳು, ಗೃಹ, ಮಾಹಿತಿ ಮತ್ತು ಪ್ರಸಾರ, ಕಾನೂನು, ಐಟಿ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯಗಳ ಪ್ರತಿನಿಧಿಗಳ ಸಮಿತಿಯನ್ನು ಒಳಗೊಂಡಿರುತ್ತದೆ.

ಈ ಸಮಿತಿಯು ಬಯಸಿದಲ್ಲಿ ನೀತಿ ಸಂಹಿತೆಯ ಉಲ್ಲಂಘನೆಯ ದೂರುಗಳ ಮೇಲೆ ವಿಚಾರಣೆ ಮಾಡಲು ಸು-ಮೋಟು ಅಧಿಕಾರಗಳನ್ನು ಹೊಂದಿರುತ್ತದೆ. ಸಮಿತಿಯು ನೀತಿಸಂಹಿತೆ ಉಲ್ಲಂಘಿಸುವವರಿಗೆ ಎಚ್ಚರಿಕೆ ನೀಡಬಹುದು, ಖಂಡಿಸಬಹುದು ಇತ್ಯಾದಿ ಕ್ರಮಗಳಲ್ಲದೆ ಕ್ಷಮೆಯಾಚಿಸಲು ಸೂಚಿಸಬಹುದು.

ಇದನ್ನೂ ಓದಿ: ಉದ್ಯಮಗಳನ್ನು ನಡೆಸುವುದು ಸರ್ಕಾರದ ಕೆಲಸವಲ್ಲ, ಇನ್ನೂ 100 ಸರ್ಕಾರಿ ಉದ್ಯಮಗಳು ಖಾಸಗೀಕರಣವಾಗಲಿದೆ; ಮೋದಿಜಂಟಿ ಕಾರ್ಯದರ್ಶಿ ಅಥವಾ ಅದಕ್ಕಿಂತ ಹೆಚ್ಚಿನ ಶ್ರೇಣಿಯ ಅಧಿಕಾರಿಯನ್ನು ಸರ್ಕಾರವು 'ಅಧಿಕೃತ ಅಧಿಕಾರಿ' ಎಂದು ನೇಮಿಸುತ್ತದೆ, ಅವರು ವಿಷಯವನ್ನು ( ಕಂಟೆಂಟ್ ಅನ್ನು) ನೇರವಾಗಿ ನಿಬಂಧಿಸಬಹುದು.

ಹೊಸ ಮಾರ್ಗಸೂಚಿಯ ಪ್ರಮುಖ ಅಂಶಗಳು ಇಲ್ಲಿವೆ:

  • ಅವಮಾನಕರ, ಅಶ್ಲೀಲ, ಮಾನಹಾನಿಕರ, ವರ್ಣಭೇದ ನೀತಿಯ, ಅಪ್ರಾಪ್ತ ವಯಸ್ಕರಿಗೆ ಹಾನಿಕಾರಕವಾದ ವಿಷಯ ಮತ್ತು ಭಾರತದ ಏಕತೆ, ಸಮಗ್ರತೆ, ರಕ್ಷಣೆ, ಭದ್ರತೆ ಅಥವಾ ಸಾರ್ವಭೌಮತ್ವ ಮತ್ತು ಇತರ ದೇಶಗಳೊಂದಿಗಿನ ಸಂಬಂಧಕ್ಕೆ ಧಕ್ಕೆ ತರುವ ಕಂಟೆಂಟ್ ನಿಷೇಧಿಸುವುದು.

  • ಅಂತಹ ಯಾವುದೇ ವಿಷಯವು ಪ್ರಸಾರವಾದರೆ, ಸೂಚನೆ ನೀಡಿದ 36 ಗಂಟೆಗಳ ಒಳಗೆ ಅಥವಾ ನ್ಯಾಯಾಲಯದ ಆದೇಶದೊಳಗೆ ಅದನ್ನು ಸಾಧ್ಯವಾದಷ್ಟು ಬೇಗ ತೆಗೆದುಹಾಕಬೇಕು ಅಥವಾ ನಿಷ್ಕ್ರಿಯಗೊಳಿಸಬೇಕು.

  • ಸೋಶಿಯಲ್ ಮೀಡಿಯಾ ಮೆಸೇಜಿಂಗ್ ಸೈಟ್‌ಗಳು ಮಾಹಿತಿಯನ್ನು ಮೊದಲು ಹುಟ್ಟು ಹಾಕಿದವರ ಟ್ರ್ಯಾಕಿಂಗ್ ಅನ್ನು ಸಕ್ರಿಯಗೊಳಿಸಬೇಕು.

  • ಕಾನೂನು ಉಲ್ಲಂಘನೆಯ ಬಗ್ಗೆ ತನಿಖೆ ನಡೆಸಲು ಅಧಿಕಾರ ಹೊಂದಿರುವ ಸರ್ಕಾರಿ ಸಂಸ್ಥೆಗೆ ಮಧ್ಯವರ್ತಿ/ ಮಧ್ಯ ಭಾಗಿದಾರ ಸೈಬರ್ ಭದ್ರತಾ ಲೋಪದ ವಿವರಗಳನ್ನು 72 ಗಂಟೆಗಳ ಒಳಗೆ ಒದಗಿಸಬೇಕು.

  • ದೂರುಗಳನ್ನು ಸ್ವೀಕರಿಸಲು, ಅಂಗೀಕರಿಸಲು ಮತ್ತು ಒಂದು ತಿಂಗಳೊಳಗೆ ಪರಿಹರಿಸಲು ಕಂಪನಿಗಳು ಕುಂದುಕೊರತೆ ಅಧಿಕಾರಿಯನ್ನು ನೇಮಿಸಬೇಕಾಗುತ್ತದೆ.

  • ಮಧ್ಯ ಭಾಗಿದಾರನು ದೂರಿನ 24 ಗಂಟೆಗಳ ಒಳಗೆ, ಕಾನೂನುಬಾಹಿರ ಅಥವಾ ಆಕ್ರಮಣಕಾರಿ ವಿಷಯವನ್ನು ತೆಗೆದುಹಾಕಬೇಕು ಅಥವಾ ನಿಷ್ಕ್ರಿಯಗೊಳಿಸಬೇಕು.

  • ನೀತಿ ಸಂಹಿತೆಯನ್ನು ಜಾರಿಗೊಳಿಸಲು ಮೂರು ಹಂತದ ಕಾರ್ಯವಿಧಾನ: ಸ್ವಯಂ ನಿಯಂತ್ರಣ; ಸ್ವಯಂ-ನಿಯಂತ್ರಿಸುವ ಸಂಸ್ಥೆಗಳಿಂದ ಸ್ವಯಂ ನಿಯಂತ್ರಣ; ಸರ್ಕಾರದ ಮೇಲ್ವಿಚಾರಣಾ ಕಾರ್ಯವಿಧಾನ.

Published by: MAshok Kumar
First published: February 25, 2021, 4:36 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories