Pegasus| ಪೆಗಾಸಸ್​ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ವಿಚಾರವಾಗಿದ್ದು, ಬಹಿರಂಗಪಡಿಸುವ ಅಗತ್ಯವಿಲ್ಲ; ಸುಪ್ರೀಂ ಕೋರ್ಟ್

ಪೆಗಾಸಸ್‌ ಗೂಢಚಾರ ಪ್ರಕರಣದ ಬಗ್ಗೆ ಅರ್ಜಿದಾರರು ಕೇಳಿದಂತೆ ಅಫಿಡವಿಟ್‌ನಲ್ಲಿ ಮಾಹಿತಿಯನ್ನು ಬಹಿರಂಗಪಡಿಸುವುದು ರಾಷ್ಟ್ರೀಯ ಭದ್ರತೆಯ ಅಂಶಗಳನ್ನು ಒಳಗೊಂಡಿರುತ್ತದೆ ಎಂದು ತುಷಾರ್‌‌ ಮೆಹ್ತಾ ವಾದಿಸಿದ್ದರು.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
    ನವ ದೆಹಲಿ (ಆಗಸ್ಟ್​ 17); ಪೆಗಾಸಸ್‌ ಗೂಢಚಾರ ಪ್ರಕರಣದ ಬಗ್ಗೆ ಸ್ವತಂತ್ರ ತನಿಖೆ ನಡೆಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ಕುರಿತು ಸುಪ್ರೀಂಕೋರ್ಟ್ ಮಂಗಳವಾರದಂದು ಒಕ್ಕೂಟ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಆದರೆ ರಾಷ್ಟ್ರೀಯ ಭದ್ರತೆಗೆ ಧಕ್ಕೆಯಾಗುವಂತಹ ಯಾವುದೇ ವಿಷಯವನ್ನು ಸರ್ಕಾರ ಬಹಿರಂಗಪಡಿಸುವ ಅಗತ್ಯವಿಲ್ಲ ಎಂದು ಅದು ಸ್ಪಷ್ಟಪಡಿಸಿದೆ. ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ನ್ಯಾಯಪೀಠವು ಮನವಿಗಳ ಕುರಿತು ಒಕ್ಕೂಟ ಸರ್ಕಾರದ ಪ್ರತಿಕ್ರಿಯೆಯನ್ನು ಕೋರಿತು. ಜೊತೆಗೆ 10 ದಿನಗಳ ನಂತರ ಈ ವಿಷಯವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

    ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಅನಿರುದ್ಧ ಬೋಸ್ ಅವರನ್ನೊಳಗೊಂಡ ನ್ಯಾಯಪೀಠವು, ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುವಂತಹ ಯಾವುದಾದರು ವಿಷಯವನ್ನು ಸರ್ಕಾರ ಬಹಿರಂಗಪಡಿಸಬೇಕು ಎಂದು ಸುಪ್ರೀಂ ಕೋರ್ಟ್ ಬಯಸುವುದಿಲ್ಲ ಎಂದು ಒಕ್ಕೂಟ ಸರ್ಕಾರವನ್ನು ಪ್ರತಿನಿಧಿಸುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಹೇಳಿದೆ.

    ಪೆಗಾಸಸ್‌ ಗೂಢಚಾರ ಪ್ರಕರಣದ ಬಗ್ಗೆ ಅರ್ಜಿದಾರರು ಕೇಳಿದಂತೆ ಅಫಿಡವಿಟ್‌ನಲ್ಲಿ ಮಾಹಿತಿಯನ್ನು ಬಹಿರಂಗಪಡಿಸುವುದು ರಾಷ್ಟ್ರೀಯ ಭದ್ರತೆಯ ಅಂಶಗಳನ್ನು ಒಳಗೊಂಡಿರುತ್ತದೆ ಎಂದು ತುಷಾರ್‌‌ ಮೆಹ್ತಾ ವಾದಿಸಿದ್ದು, ಇದರ ನಂತರ ಸುಪ್ರೀಂಕೋರ್ಟ್ ಮೇಲಿನಂತೆ ಅಭಿಪ್ರಾಯಪಟ್ಟಿದೆ.

    ಪೆಗಾಸಸ್‌‌ ಗೂಢಚಾರ ಕುರಿತು ಸ್ವತಂತ್ರ ತನಿಖೆ ನಡೆಸುವಂತೆ ಕೋರಿ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಸಲ್ಲಿಸಿದ್ದ ಅರ್ಜಿ ಸೇರಿದಂತೆ ನ್ಯಾಯಾಲಯವು ಒಂದು ಬ್ಯಾಚ್‌‌‌ನ ವಿಚಾರಣೆ ನಡೆಸುತ್ತಿದೆ.

    ಇದನ್ನೂ ಓದಿ: West Bengal| ಬಂಗಾಳದಲ್ಲಿ ಬಿಜೆಪಿ ಯುವ ಸಂಕಲ್ಪ ಯಾತ್ರೆ; ಶಾಸಕ ಸೇರಿ 30 ಕಾರ್ಯಕರ್ತರ ಬಂಧನ!

    ಇಸ್ರೇಲ್ ಮೂಲದ NSO ಸಂಸ್ಥೆಯ ಗೂಢಚಾರ ತಂತ್ರಾಂಶವಾದ ಪೆಗಾಸಸ್ ಅನ್ನು ಬಳಸಿಕೊಂಡು ಭಾರತದ ಗಣ್ಯ ವ್ಯಕ್ತಿಗಳು, ರಾಜಕಾರಣಿಗಳು ಮತ್ತು ಪತ್ರಕರ್ತರ ಮೇಲೆ ಗೂಢಚಾರ ಮಾಡಿದ ಬಗ್ಗೆ ಕಳೆದ ತಿಂಗಳು ವಿವಾದವೆದ್ದಿತ್ತು.

    ಇದನ್ನೂ ಓದಿ: Afghanistan: ದೇಶ ಕಬಳಿಸಿ ಒಂದು ದಿನವೂ ಆಗಿಲ್ಲ, ಆಗಲೇ ತಾಲಿಬಾನಿಗಳ ಮೋಜು ಮಸ್ತಿ ಜೋರು!

    ಪೆಗಾಸಸ್ ಬಳಸಿ ಕಣ್ಗಾವಲು ಮಾಡುವ ಸಂಭಾವ್ಯ ಗುರಿಗಳ ಪಟ್ಟಿಯಲ್ಲಿ 300 ಕ್ಕೂ ಹೆಚ್ಚು ಭಾರತೀಯ ಮೊಬೈಲ್ ಫೋನ್ ಸಂಖ್ಯೆಗಳಿವೆ ಎಂದು ಅಂತರಾಷ್ಟ್ರೀಯ ಮಾಧ್ಯಮ ಒಕ್ಕೂಟ ತನ್ನ ವರದಿಯಲ್ಲಿ ಹೇಳಿತ್ತು.

    ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣ ವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊ ಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾ ಜಿಕ ಅಂತರ ಕಾಯ್ದು ಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧ ದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿ ನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿ ಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತ ರರಿಗೆ ಸೋಂಕು ಹಬ್ಬ ದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
    Published by:MAshok Kumar
    First published: