ನಿರ್ಭಯ ಕೇಸ್​​: ಕ್ಷಮೆ ಕೋರಿ ಅತ್ಯಾಚಾರಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸುವಂತೆ ರಾಷ್ಟ್ರಪತಿಗೆ ಕೇಂದ್ರ ಗೃಹ ಇಲಾಖೆ ಶಿಫಾರಸು

ಇನ್ನು 2017ರ ವರ್ಷದ ಮೇ 5ರಂದು ಸುಪ್ರೀಂಕೋರ್ಟ್ ಕೂಡ ಈ ಆದೇಶವನ್ನು ಎತ್ತಿಹಿಡಿದಿತ್ತು. ಆದರೆ ಮೂವರು ಅಪರಾಧಿಗಳು ತಮಗೆ ವಿಧಿಸಿರುವ ಗಲ್ಲುಶಿಕ್ಷೆಯ ತೀರ್ಪನ್ನು ಮರುಪರಿಶೀಲಿಸುವಂತೆ ಅರ್ಜಿ ಸಲ್ಲಿದ್ದರು. ಇಂದು ಮರುಪರಿಶೀಲನಾ ಅರ್ಜಿಯ ತೀರ್ಪು ಪ್ರಕಟಿಸಿದ ಸುಪ್ರೀಂ, ಗಲ್ಲು ಶಿಕ್ಷೆಯನ್ನು ಖಾಯಂಗೊಳಿಸಿದೆ.

ನಿರ್ಭಯಾ ಕೇಸ್​​

ನಿರ್ಭಯಾ ಕೇಸ್​​

  • Share this:
    ಬೆಂಗಳೂರು(ಡಿ.06): ಇಡೀ ಪ್ರಪಂಚದ ಗಮನ ಸೆಳೆದಿದ್ದ ನಿರ್ಭಯಾ ಪ್ರಕರಣದ ಪ್ರಮುಖ ಅತ್ಯಾಚಾರಿ ಕ್ಷಮಾದಾನ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸುವಂತೆ ಭಾರತದ ರಾಷ್ಟ್ರಪತಿ ರಮನಾಥ್​​ ಕೋವಿಂದ್​​ರಿಗೆ ಕೇಂದ್ರ ಗೃಹ ಇಲಾಖೆ ಶಿಫಾರಸು ಮಾಡಿದೆ. ತೆಲಂಗಾಣ ಮೂಲದ ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ಪೊಲೀಸರು ನಾಲ್ಕೂ ಅತ್ಯಾಚಾರಿಗಳನ್ನು ಎನ್​​ಕೌಂಟರ್​ನಲ್ಲಿ ಹತ್ಯೆಗೈದ ಬೆನ್ನಲ್ಲೇ ನಿರ್ಭಯಾ ಕೇಸ್​​ ಪ್ರಕರಣದ ಅಪರಾದಿ ನಮಗೇ ಕರುಣೆ ತೋರಿ ಎಂದು ರಾಷ್ಟ್ರಪತಿಗೆ ಅರ್ಜಿ ಸಲ್ಲಿಸಿದ್ಧಾರೆ. ಆದರೀಗ ಕೇಂದ್ರ ಗೃಹ ಇಲಾಖೆಯೂ ಈ ಅರ್ಜಿ ತಿರಸ್ಕರಿಸುವಂತೆ ರಮನಾಥ್​​ ಕೋವಿಂದ್​​ರಿಗೆ ಶಿಫಾರಸು ಮಾಡಿದೆ.

    ಏನಿದು ಪ್ರಕರಣ: 2012ರ ಡಿಸೆಂಬರ್ 16ರಂದು ರಾತ್ರಿ ವೇಳೆ ತನ್ನ ಸ್ನೇಹಿತನೊಂದಿಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 23 ವರ್ಷದ ಯುವತಿಯ ಮೇಲೆ ಅಪ್ರಾಪ್ತ ವಯಸ್ಸಿನ ಬಾಲಕ ಸೇರಿದಂತೆ ಒಟ್ಟು ಆರು ಮಂದಿ ಅತ್ಯಂತ ಕ್ರೂರ ಹಾಗೂ ಅಮಾನುಷವಾಗಿ ಅತ್ಯಾಚಾರವೆಸಗಿದ್ದರು. ಇದನ್ನು ತಡೆಯಲು ಬಂದ ಸ್ನೇಹಿತನ ಮೇಲೂ ಹಲ್ಲೆ ನಡೆಸಿದ್ದರು. ಮೃಗೀಯವಾಗಿ ಅತ್ಯಾಚಾವೆಗಿದ್ದ ಅಪರಾಧಿಗಳು ಯುವತಿಯನ್ನು ಚಲಿಸುತ್ತಿದ್ದ ಬಸ್‌ನಿಂದಲೇ ಹೊರಗೆಸೆದಿದ್ದರು. ಈ ಘೋರ ಕೃತ್ಯದಿಂದ ಸಾವು-ಬದುಕಿನ ಹೋರಾಟ ನಡೆಸುತ್ತಿದ್ದ ನಿರ್ಭಯಾ ಚಿಕಿತ್ಸೆ ಫಲಕಾರಿಯಾಗದೆ ಡಿ. 29ರಂದು ಸಿಂಗಾಪುರದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಳು.

    ಈ ಆರು ಮಂದಿ ಅಪರಾಧಿಗಳಲ್ಲಿ ರಾಮ್ ಸಿಂಗ್ ಎಂಬಾತ 2013ರಲ್ಲಿ ಕೇಸ್​ ವಿಚಾರಣೆ ನಡೆಯುತ್ತಿದ್ದ ಸಂದರ್ಭದಲ್ಲೇ ತಿಹಾರ್ ಜೈಲಿನಲ್ಲಿ ನೇಣು ಹಾಕಿ ಆತ್ಮಹತ್ಯೆಗೆ ಶರಣಾಗಿದ್ದ. ಇನ್ನು ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ಬಾಲಾಪರಾಧಿಯಾಗಿದ್ದರಿಂದ 3 ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ಇನ್ನುಳಿದ ನಾಲ್ವರು ಅಪರಾಧಿಗಳಿಗೆ ತ್ವರಿತ ನ್ಯಾಯಾಲಯ ಗಲ್ಲುಶಿಕ್ಷೆ ವಿಧಿಸಿತ್ತು. ಅಲ್ಲದೇ ಆದೇಶವನ್ನು ದೆಹಲಿಯ ಹೈಕೋರ್ಟ್ ಕೂಡಾ ಎತ್ತಿಹಿಡಿದಿತ್ತು.

    ಇದನ್ನೂ ಓದಿ: ನನ್ನ ಮಗಳ ಬಲಿತೆಗೆದುಕೊಂಡವರನ್ನೂ ಬೇಗ ನೇಣಿಗೇರಿಸಿ: ನಿರ್ಭಯ ತಾಯಿ ಒತ್ತಾಯ

    ಇನ್ನು 2017ರ ವರ್ಷದ ಮೇ 5ರಂದು ಸುಪ್ರೀಂಕೋರ್ಟ್ ಕೂಡ ಈ ಆದೇಶವನ್ನು ಎತ್ತಿಹಿಡಿದಿತ್ತು. ಆದರೆ ಮೂವರು ಅಪರಾಧಿಗಳು ತಮಗೆ ವಿಧಿಸಿರುವ ಗಲ್ಲುಶಿಕ್ಷೆಯ ತೀರ್ಪನ್ನು ಮರುಪರಿಶೀಲಿಸುವಂತೆ ಅರ್ಜಿ ಸಲ್ಲಿದ್ದರು. ಇಂದು ಮರುಪರಿಶೀಲನಾ ಅರ್ಜಿಯ ತೀರ್ಪು ಪ್ರಕಟಿಸಿದ ಸುಪ್ರೀಂ, ಗಲ್ಲು ಶಿಕ್ಷೆಯನ್ನು ಖಾಯಂಗೊಳಿಸಿದೆ.
    First published: