ಕೊರೋನಾ ಲಸಿಕೆ ಬಗ್ಗೆ ಸುಳ್ಳುಸುದ್ದಿ ಹಬ್ಬಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಕೇಂದ್ರ ಸೂಚನೆ

ಜನವರಿ 16ರಿಂದ ದೇಶಾದ್ಯಂತ ಕೊರೋನಾ ಲಸಿಕೆ ಹಂಚಿಕೆ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಅದರಂತೆ ಹಂತಹಂತವಾಗಿ ದೇಶದ ಕೊರೋನಾ ಲಸಿಕೆ ನೀಡಲಾಗುತ್ತಿದೆ. ಮೊದಲಿಗೆ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಯಿತು. ಆನಂತರದಲ್ಲಿ ನೋಂದಾಯಿಸಿಕೊಂಡ ಸಾರ್ವಜನಿಕರಿಗೆ ಕೊರೋನಾ ಲಸಿಕೆ ನೀಡಲಾಗುತ್ತದೆ.

ಸಾಂದರ್ಭಿಕ ಚಿತ್ರ,

ಸಾಂದರ್ಭಿಕ ಚಿತ್ರ,

 • Share this:
  ನವದೆಹಲಿ; ಇಡೀ ವಿಶ್ವವನ್ನೇ ನಡುಗಿಸಿದ ಕೊರೋನಾ ವೈರಸ್​ಗೆ ಕೊನೆಗೆ ಲಸಿಕೆ ಕಂಡುಹಿಡಿಯಲಾಗಿದೆ. ದೇಶೀಯವಾಗಿ ಅಭಿವೃದ್ಧಿಪಡಿಸಲಾದ ಎರಡು ಲಸಿಕೆಗಳನ್ನು ನೀಡಲಾಗುತ್ತಿದೆ. ಆದರೆ, ಈ ಲಸಿಕೆ ಬಗ್ಗೆ ಅಪಪ್ರಚಾರ, ಸುಳ್ಳು ಸುದ್ದಿ ಹಬ್ಬಿಸುತ್ತಿರುವುದು ಹೊಸ ಸಮಸ್ಯೆ ತಂದೊಡ್ಡಿದೆ. ಸುಳ್ಳುಸುದ್ದಿಯಿಂದಾಗಿ ಜನರು ಕೊರೋನಾ ಲಸಿಕೆ ಪಡೆದುಕೊಳ್ಳಲು ಹೆದರುತ್ತಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರ ಹೊಸ ನಿಯಮವನ್ನು ಜಾರಿಗೆ ತಂದಿದೆ. ಕೊರೋನಾ ಲಸಿಕೆ ಕುರಿತಾಗಿ ಸುಳ್ಳುಸುದ್ದಿ ಹಬ್ಬಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲು ಮುಂದಾಗಿದೆ.

  ಕೋವಿಡ್-19 ಲಸಿಕೆ ಸಂಬಂಧ ಯಾರೇ ಸುಳ್ಳು ಸುದ್ದಿ, ತಪ್ಪು ಮಾಹಿತಿ ಹಬ್ಬಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಕೇಂದ್ರ ಸರ್ಕಾರ ಎಲ್ಲ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ. ಈ ಸಂಬಂಧ ಎಲ್ಲ ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿ ಅವರಿಗೆ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಳ್ಳಾ ಸೂಚನೆ ನೀಡಿದ್ದಾರೆ.

  ಸೆರಂ ಇನ್ಸ್​ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಕೋವಿಶೀಲ್ಡ್ ಹಾಗೂ ಭಾರತ್ ಬಯೋಟೆಕ್ ಲಿಮಿಟೆಡ್​ನಿಂದ ಕೋವ್ಯಾಕ್ಸಿನ್ ಅಭಿವೃದ್ಧಿಪಡಿಸಲಾಗಿದೆ. ಕೊರೋನಾ ವಿರುದ್ಧ ಅಭಿವೃದ್ಧಿಪಡಿಸಲಾದ ಈ ಎರಡು ಲಸಿಕೆಗಳು ಸಂಪೂರ್ಣ ಸುರಕ್ಷಿತವಾಗಿವೆ ಎಂದು ಪ್ರಮಾಣೀಕರಿಸಲಾಗಿದೆ.

  ಇದನ್ನು ಓದಿ: 6ನೇ ಹೆಂಡತಿ ಸೆಕ್ಸ್ ಮಾಡಲು ನಿರಾಕರಿಸಿದ ಕಾರಣ ಏಳನೇ ಮದುವೆಯಾಗಲು ಮುಂದಾದ 63 ವರ್ಷದ ವೃದ್ಧ!

  ಜನವರಿ 16ರಿಂದ ದೇಶಾದ್ಯಂತ ಕೊರೋನಾ ಲಸಿಕೆ ಹಂಚಿಕೆ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಅದರಂತೆ ಹಂತಹಂತವಾಗಿ ದೇಶದ ಕೊರೋನಾ ಲಸಿಕೆ ನೀಡಲಾಗುತ್ತಿದೆ. ಮೊದಲಿಗೆ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಯಿತು. ಆನಂತರದಲ್ಲಿ ನೋಂದಾಯಿಸಿಕೊಂಡ ಸಾರ್ವಜನಿಕರಿಗೆ ಕೊರೋನಾ ಲಸಿಕೆ ನೀಡಲಾಗುತ್ತದೆ.

  ಕರ್ನಾಟಕ ರಾಜ್ಯಕ್ಕೆ 7,94,500 ಡೋಸ್ ಕೋವಿಶೀಲ್ಡ್ ಲಸಿಕೆ ಬಂದಿದೆ. ಕೋವ್ಯಾಕ್ಸಿಕ್ ಲಸಿಕೆ ಮೊದಲಿಗೆ 20,000 ಡೋಸ್ ಬಂದಿತ್ತು. ನಂತರ ಮತ್ತೆ 1,46,240 ಡೋಸ್ ಬಂದಿದೆ. ಒಟ್ಟು 1,87,211 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಇದು ಅತಿ ಹೆಚ್ಚು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ.
  Published by:HR Ramesh
  First published: