Mayawati| ಜಾತಿ ಜನಗಣತಿಗೆ ಕೇಂದ್ರ ನಕಾರ; ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಮಾಯಾವತಿ ಕಿಡಿ!

ಎಸ್‌ಸಿ ಮತ್ತು ಎಸ್‌ಟಿಯಂತೆ, ಒಬಿಸಿ ವರ್ಗದ ಜಾತಿ ಗಣತಿಯನ್ನು ನಡೆಸುವ ಬೇಡಿಕೆಯು ಇಡೀ ದೇಶದಲ್ಲಿ ಸಾಕಷ್ಟು ಮಹತ್ವವನ್ನು ಪಡೆದುಕೊಂಡಿದೆ. ಆದರೆ ಕೇಂದ್ರದ ಸ್ಪಷ್ಟ ನಿರಾಕರಣೆಯು ಇಡೀ ಸಮುದಾಯವನ್ನು ಘಾಸಿಗೊಳಿಸಿದೆ ಎಂದು ಮಾಯಾವತಿ ಕಿಡಿಕಾರಿದ್ದಾರೆ.

ಬಿಎಸ್​ಪಿ ನಾಯಕಿ ಮಾಯಾವತಿ.

ಬಿಎಸ್​ಪಿ ನಾಯಕಿ ಮಾಯಾವತಿ.

 • Share this:
  ನವ ದೆಹಲಿ (ಸೆಪ್ಟೆಂಬರ್​ 24); ಕರ್ನಾಟದಲ್ಲಿ ಸಿದ್ದರಾಮಯ್ಯ (Siddaramaiah) ನೇತೃತ್ವದ ಸರ್ಕಾರ ಹಲವಾರು ವಿರೋಧಗಳ ನಡುವೆಯೂ 2014ರಲ್ಲಿ ಜಾತಿ ಆಧಾರಿತ ಜನಗಣತಿ (Caste Census) ನಡೆಸಿತ್ತು. ಆ ಜನಗಣತಿ () ದಾಖಲೆ ಈವರೆಗೆ ಹೊರಬಿದ್ದಿಲ್ಲ. ಆದರೆ, ದೇಶದಾದ್ಯಂತ ಜಾತಿ ಜನಗಣತಿ ನಡೆಸಬೇಕು, ಈ ಗಣತಿ ಆಧಾರದಲ್ಲಿ ಹಿಂದುಳಿದವರಿಗೆ ಮೀಸಲಾತಿ (Reservation) ನೀಡಿ ಸಾಮಾಜಿಕ ನ್ಯಾಯ ಕಲ್ಪಿಸಬೇಕು ಎಂಬ ಕೂಗು ಕೇಳಿಬರುತ್ತಲೇ ಇದೆ. ಆದರೆ, ಕೇಂದ್ರ ಸರ್ಕಾರ (Central Government) ಮಾತ್ರ ಜಾತಿ ಜನಗಣತಿ ನಡೆಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ಬಿಎಸ್​ಪಿ ಪಕ್ಷದ ನಾಯಕಿ ಮಾಯಾವತಿ (Mayawati), "ಹಿಂದುಳಿದ ವರ್ಗಗಳ ಜಾತಿ ಗಣತಿಗಾಗಿ ಕೇಂದ್ರ ಸರ್ಕಾರ ನಿರಾಕರಣೆ ವ್ಯಕ್ತಪಡಿಸುತ್ತಿದ್ದು, ಇದು ಬಿಜೆಪಿ ತನ್ನ ಚುನಾವಣಾ ಹಿತಾಸಕ್ತಿಗಾಗಿ ಮಾತ್ರ ಸಮುದಾಯವನ್ನು ಬಳಸುತ್ತಿರುವುದನ್ನು ಬಹಿರಂಗಪಡಿಸಿದೆ" ಎಂದು ವಾಗ್ದಾಳಿ ನಡೆಸಿದ್ದಾರೆ.

  ಹಿಂದುಳಿದ ವರ್ಗಗಳ ಜಾತಿ ಗಣತಿಯು "ಆಡಳಿತಾತ್ಮಕವಾಗಿ ಕಷ್ಟಕರ ಮತ್ತು ತೊಡಕಿನದ್ದಾಗಿದೆ” ಮತ್ತು ಅಂತಹ ಮಾಹಿತಿಯನ್ನು ಜನಗಣತಿಯ ವ್ಯಾಪ್ತಿಯಿಂದ ಹೊರಗಿಡುವುದು ಪ್ರಜ್ಞಾಪೂರ್ವಕ ನೀತಿ ನಿರ್ಧಾರ" ಎಂದು ಒಕ್ಕೂಟ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿತ್ತು.  ಈ ಬಗ್ಗೆ ಹಿಂದಿಯಲ್ಲಿ ಟ್ವೀಟ್ ಮಾಡಿರುವ ಬಿಎಸ್‌ಪಿ ಅಧ್ಯಕ್ಷೆ ಮಾಯಾವತಿ, "ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಅಫಿಡವಿಟ್ ಸಲ್ಲಿಸುವ ಮೂಲಕ ಹಿಂದುಳಿದ ವರ್ಗಗಳ ಜಾತಿ ಗಣತಿಯನ್ನು ನಡೆಸಲು ನಿರ್ದಿಷ್ಟವಾಗಿ ನಿರಾಕರಿಸಿರುವುದು ತೀವ್ರ ಕಳವಳಕಾರಿ ವಿಷಯವಾಗಿದೆ. ಇದು ಒಬಿಸಿ ರಾಜಕೀಯದಲ್ಲಿ ಬಿಜೆಪಿಯ ಚುನಾವಣಾ ಹಿತಾಸಕ್ತಿಗಳು ಮತ್ತು ಅವರ ಮಾತುಗಳಲ್ಲಿನ ವ್ಯತ್ಯಾಸವನ್ನು ತಿಳಿಸುತ್ತವೆ. ಹೀಗಾಗಿ ಹಿಂದುಳಿದ ಜನ ಜಾಗರೂಕರಾಗಿರಿ" ಎಂದು ಎಚ್ಚರಿಸಿದ್ದಾರೆ.

  "ಎಸ್‌ಸಿ ಮತ್ತು ಎಸ್‌ಟಿಯಂತೆ, ಒಬಿಸಿ ವರ್ಗದ ಜಾತಿ ಗಣತಿಯನ್ನು ನಡೆಸುವ ಬೇಡಿಕೆಯು ಇಡೀ ದೇಶದಲ್ಲಿ ಸಾಕಷ್ಟು ಮಹತ್ವವನ್ನು ಪಡೆದುಕೊಂಡಿದೆ. ಆದರೆ ಕೇಂದ್ರದ ಸ್ಪಷ್ಟ ನಿರಾಕರಣೆಯು ಇಡೀ ಸಮುದಾಯವನ್ನು ಘಾಸಿಗೊಳಿಸಿದೆ. ಹೇಗೆ ಇವರ ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡದೆ ಅವರನ್ನು ನಿರಂತರವಾಗಿ ಘಾಸಿಗೊಳಿಸುತ್ತಿದ್ದಾರೋ ಅದೇ ರೀತಿ ಅವರ ಭವಿಷ್ಯಕ್ಕೆ ಹಾನಿಯನ್ನುಂಟುಮಾಡುತ್ತಾರೆ" ಎಂದಿದ್ದಾರೆ.

  ದೇಶದಲ್ಲಿ ಜಾತಿ ಆಧಾರಿತ ಜನಗಣತಿಯು ಸಮಾಜದ ವಿವಿಧ ವರ್ಗಗಳ ಜನರಿಗೆ ಕಲ್ಯಾಣ ಯೋಜನೆಗಳನ್ನು ತಯಾರಿಸಲು ಸಹಾಯ ಮಾಡುತ್ತದೆ ಎಂದು ಬಿಹಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಹೇಳಿದ್ದಾರೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್‌ ನೇತೃತ್ವದಲ್ಲಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಲಾಗಿದೆ.

  ಇದನ್ನೂ ಓದಿ: Firing in Delhi's Rohini Court: ದೆಹಲಿಯ ಸಿನಿಮೀಯ ರೀತಿ ಗುಂಡಿನ ಚಕಮಕಿ; ಗ್ಯಾಂಗ್​ಸ್ಟರ್​ ಸೇರಿ ನಾಲ್ವರ ಹತ್ಯೆ

  ಜಾತಿ ಆಧಾರಿತ ಜನಗಣತಿಯ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ 10 ಪಕ್ಷಗಳ ನಿಯೋಗದ ನಡುವೆ ದೆಹಲಿಯಲ್ಲಿ ಸಭೆ ನಡೆದಿತ್ತು. ಈ ಸಭೆಯಲ್ಲಿ ಜಾತಿ ಜನಗಣತಿ ನಡೆಸದಂತೆ ತೀರ್ಮಾನ ತೆಗೆದುಕೊಳ್ಳಲಾಗಿತ್ತು.

  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸು ವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊ ಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
  Published by:MAshok Kumar
  First published: