Chandigarh University Viral Video: 60 ಯುವತಿಯರು ಸ್ನಾನ ಮಾಡುವ ವಿಡಿಯೋ ಲೀಕ್

ಪೊಲೀಸರು ಸ್ಥಳಕ್ಕೆ ಧಾವಿಸಿ ಯುವತಿಯರ ಸ್ನಾನದ ವಿಡಿಯೋಗಳನ್ನು ಮಾಡಿ ಶಿಮ್ಲಾದ ಹುಡುಗನಿಗೆ ಕಳುಹಿಸಿದ್ದಾರೆಂದು ಆರೋಪಿಸಿ ವಿದ್ಯಾರ್ಥಿನಿಯೊಬ್ಬಳನ್ನು ಬಂಧಿಸಿದ್ದಾರೆ.  

ವಿದ್ಯಾರ್ಥಿನಿಯರಿಂದ ಪ್ರತಿಭಟನೆ

ವಿದ್ಯಾರ್ಥಿನಿಯರಿಂದ ಪ್ರತಿಭಟನೆ

  • Share this:
    ಚಂಡಿಗಢ: ಹಾಸ್ಟೆಲ್​ನಲ್ಲಿ ಸುಮಾರು 60 ಯುವತಿಯರು ಸ್ನಾನ ಮಾಡುತ್ತಿರುವ ವಿಡಿಯೋಗಳು ಲೀಕ್ ಆದ ಕಳವಳಕಾರಿ ಘಟನೆ ನಡೆದಿದೆ. ಇನ್ನೂ ಆಘಾತಕಾರಿ ವಿಷಯವೆಂದರೆ 60 ಯುವತಿಯರು ಸ್ನಾನ ಮಾಡುತ್ತಿರುವ ವಿಡಿಯೋ ಸೆರೆಹಿಡಿದದ್ದೂ ಸಹ ಯುವತಿಯೇ ಆಗಿದ್ದಾಳೆ, ಸ್ನಾನ ಮಾಡುವ ವಿಡಿಯೋ ಮಾಡಿದ ಯುವತಿ ಅದನ್ನು ಇನ್ನೋರ್ವ ಯುವಕನಿಗೆ ವಿಡಿಯೋವನ್ನು ಕಳಿಸಿಕೊಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಆ ಯುವಕ ಈ ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟು ವೈರಲ್ ಮಾಡಿದ್ದಾನೆ. ಚಂಡೀಗಢ ವಿಶ್ವವಿದ್ಯಾಲಯದ ಕ್ಯಾಂಪಸ್‌ನ ಯುವತಿಯರ ಹಾಸ್ಟೆಲ್ ವಿಡಿಯೋ ಲೀಕ್ ಬೆನ್ನಲ್ಲೇ ಮಧ್ಯರಾತ್ರಿ ಬೃಹತ್ ಪ್ರತಿಭಟನೆ ನಡೆದಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಯುವತಿಯರ ಸ್ನಾನದ ವಿಡಿಯೋಗಳನ್ನು ಮಾಡಿ ಶಿಮ್ಲಾದ ಹುಡುಗನಿಗೆ ಕಳುಹಿಸಿದ್ದಾರೆಂದು ಆರೋಪಿಸಿ ವಿದ್ಯಾರ್ಥಿನಿಯೊಬ್ಬಳನ್ನು ಬಂಧಿಸಿದ್ದಾರೆ.  

    ವಿಡಿಯೋ ಸೆರೆಹಿಡಿದು ಯುವಕನಿಗೆ ಕಳಿಸಿದ ಆರೋಪಿ ಬಾಲಕಿಯ ವಿರುದ್ಧ ಐಪಿಸಿ ಸೆಕ್ಷನ್ 354 ಸಿ ಮತ್ತು ಐಟಿ ಕಾಯ್ದೆಯಡಿ ಘರುವಾನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.



    ಸ್ಥಳೀಯ ವರದಿಗಳ ಪ್ರಕಾರ, ಆನ್‌ಲೈನ್‌ನಲ್ಲಿ ವಿಡಿಯೋ ಸೋರಿಕೆಯಾದ ನಂತರ ಕೆಲವು ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಿಸಲಾಗಿದೆ. ಆರೋಪಿ ಎಂಬಿಎ ಪ್ರಥಮ ವರ್ಷದ ವಿದ್ಯಾರ್ಥಿನಿ ಎಂದು ಪೊಲೀಸರು ತಿಳಿಸಿದ್ದಾರೆ.

    ಆತ್ಮಹತ್ಯೆಗೆ ಯತ್ನಿಸಿದ ಬಾಲಕಿಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಆದರೆ ವಿದ್ಯಾರ್ಥಿನಿಯರ ಆತ್ಮಹತ್ಯೆ ಪ್ರಯತ್ನವನ್ನು ವಿಶ್ವವಿದ್ಯಾಲಯದ ಆಡಳಿತ ಮಂಡಳಿ ನಿರಾಕರಿಸಿದೆ. ಪ್ರತಿಭಟನೆಯ ವೇಳೆ ವಿದ್ಯಾರ್ಥಿನಿಯೊಬ್ಬರು ಪ್ರಜ್ಞೆ ತಪ್ಪಿ ಬಿದ್ದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಚಂಡಿಗಢ ವಿಶ್ವವಿದ್ಯಾಲಯ ತಿಳಿಸಿದೆ.



    ಕಠಿಣ ಕ್ರಮದ ಭರವಸೆ
    ಪಂಜಾಬ್ ಶಾಲಾ ಶಿಕ್ಷಣ ಸಚಿವ ಹರ್ಜೋತ್ ಸಿಂಗ್ ಬೈನ್ಸ್ ಈ ವಿಷಯದ ಬಗ್ಗೆ ಪ್ರತಿಕ್ರಿಯಿಸಿದ್ದು, ವಿದ್ಯಾರ್ಥಿಗಳು ಶಾಂತವಾಗಿರುವಂತೆ ಕೇಳಿಕೊಂಡಿದ್ದಾರೆ. ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ. "ನಾನು ಚಂಡೀಗಢ ವಿಶ್ವವಿದ್ಯಾನಿಲಯದ ಎಲ್ಲಾ ವಿದ್ಯಾರ್ಥಿಗಳನ್ನು ಶಾಂತವಾಗಿರಲು ವಿನಂತಿಸುತ್ತೇನ.  ಯಾವುದೇ ತಪ್ಪಿತಸ್ಥರನ್ನು ಬಿಡುವುದಿಲ್ಲ. ಇದು ಅತ್ಯಂತ ಸೂಕ್ಷ್ಮ ವಿಷಯ. ನಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳ ಘನತೆಗೆ ಸಂಬಂಧಿಸಿದ ಈ ವಿಷಯ ನಮ್ಮ ಸಮಾಜದವನ್ನು ಪರೀಕ್ಷಗೆ ಒಡ್ಡಿದೆ ಎಂದು ಅವರು ತಿಳಿಸಿದ್ದಾರೆ.
    Published by:ಗುರುಗಣೇಶ ಡಬ್ಗುಳಿ
    First published: