Punjab Elections: ಸಿಎಂ ಚರಣಜಿತ್ ಸಿಂಗ್ ಚನ್ನಿಯೇ ಮುಂದಿನ ಸಿಎಂ ಅಭ್ಯರ್ಥಿ -ರಾಹುಲ್ ಗಾಂಧಿ ಘೋಷಣೆ

Punjab Election: ಇಂದು ಪಂಜಾಬ್ ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಲೋಧಿಯಾನದ ಹರ್ಷೀಲಾ ರೆಸಾರ್ಟ್ ನಲ್ಲಿ ವರ್ಚ್ಯುಯಲ್ ರ್‍ಯಾಲಿ ಉದ್ದೇಶಿಸಿ ಭಾಷಣ ಮಾಡುತ್ತಾ ಪಂಜಾಬ್ ಚುನಾವಣೆಗೆ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಹಾಲಿ ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿ ಅವರೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು‌ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಚರಣಜಿತ್ ಸಿಂಗ್ ಚನ್ನಿ

ಚರಣಜಿತ್ ಸಿಂಗ್ ಚನ್ನಿ

  • Share this:
ನವದೆಹಲಿ, ಫೆ. 5: ಪಂಜಾಬ್ ವಿಧಾನಸಭಾ ಚುನಾವಣೆಯನ್ನು (Punjab Assembly Elections) ಗೆದ್ದೇ ಗೆಲ್ಲುವುದಾಗಿ ಕಾಂಗ್ರೆಸ್ (Congress) ವಿಶ್ವಾಸ ಇಟ್ಟುಕೊಂಡಿದೆ. ಆದರೆ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ (Chief Minister Charanjith Sing Chenni) ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು (Punjab Congress President Navajoth Sing Sidhu) ನಡುವೆ ಉನ್ನತ ಹುದ್ದೆಯ ಮೇಲೆ ಕಣ್ಣಿದ್ದು ಮುಖ್ಯಮಂತ್ರಿ ಅಭ್ಯರ್ಥಿಯನ್ನು (Chief Ministerial Candidate) ಘೋಷಣೆ ಮಾಡಬೇಕೆಂಬ ಭಾರೀ ಒತ್ತಡ ಉಂಟಾಗಿತ್ತು. ಈ‌ ಹಿನ್ನಲೆಯಲ್ಲಿ ಎಐಸಿಸಿಯ ಮಾಜಿ ಅಧ್ಯಕ್ಷ ಹಾಗೂ ಸಂಸದ ರಾಹುಲ್ ಗಾಂಧಿ (AICC Former President and Member of Parliament Rahul Gandhi) ಅವರು ಇಂದು ಚರಣಜಿತ್ ಸಿಂಗ್ ಚನ್ನಿ ಅವರೇ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಣೆ ಮಾಡುವ ಮೂಲಕ ಗೊಂದಲ ಬಗೆಹರಿಸಿದ್ದಾರೆ.

ಸಿಎಂ ಅಭ್ಯರ್ಥಿ ಪ್ರಕಟಿಸಿದ ರಾಹುಲ್ ಗಾಂಧಿ
ಇಂದು ಪಂಜಾಬ್ ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಲೋಧಿಯಾನದ ಹರ್ಷೀಲಾ ರೆಸಾರ್ಟ್ ನಲ್ಲಿ ವರ್ಚ್ಯುಯಲ್ ರ್‍ಯಾಲಿ ಉದ್ದೇಶಿಸಿ ಭಾಷಣ ಮಾಡುತ್ತಾ ಪಂಜಾಬ್ ಚುನಾವಣೆಗೆ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಹಾಲಿ ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿ ಅವರೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು‌ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಚರಣಜಿತ್ ಸಿಂಗ್ ಚನ್ನಿಯೇ ಫವರೀಟ್
ಜನವರಿ 27ರಂದು ಪಂಜಾಬಿನ ಜಲಂಧರ್‌ನ ಮಿಥಾಪುರದಲ್ಲಿ "ನವಿ ಸೋಚ್ ನಯಾ ಪಂಜಾಬ್' ಎಂಬ ಹೆಸರಿನ ವರ್ಚುವಲ್ ರ್‍ಯಾಲಿ ಉದ್ದೇಶಿಸಿ ಮಾತನಾಡುತ್ತಿದ್ದ ರಾಹುಲ್ ಗಾಂಧಿ ಅವರು, 'ಶೀಘ್ರವೇ ಕಾಂಗ್ರೆಸ್ ಕಾರ್ಯಕರ್ತರು ಪಂಜಾಬಿನ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಬೇಕು ಎಂಬುದನ್ನು ‌ನಿರ್ಧರಿಸಲಿದ್ದಾರೆ' ಎಂದು ಹೇಳಿದ್ದರು.

ಇದನ್ನೂ ಓದಿ: ಇಂದು ಪಂಜಾಬ್ ಸಿಎಂ ಅಭ್ಯರ್ಥಿ ಘೋಷಣೆ ಮಾಡಲಿರುವ ರಾಹುಲ್ ಗಾಂಧಿ

ಅದೇ ರೀತಿ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹ ಮಾಡಲಾಗಿತ್ತು. ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರು ಚರಣಜಿತ್ ಸಿಂಗ್ ಚನ್ನಿ ಅವರನ್ನೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು‌ ಘೋಷಿಸುವಂತೆ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಚರಣಜಿತ್ ಸಿಂಗ್ ಚನ್ನಿ‌ ಅವರನ್ನೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಣೆ ಮಾಡಲಾಗಿದೆ.

ಪಂಜಾಬ್ ಚುನಾವಣೆ ಮುಂದೂಡಿಕೆ
ಕೇಂದ್ರ ಚುನಾವಣಾ ಆಯೋಗ ಫೆಬ್ರವರಿ 14ರ ಬದಲು ಫೆಬ್ರವರಿ 20ರಂದು ಪಂಜಾಬ್​​​ನಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಸಲು ನಿರ್ಧರಿಸಿದೆ. ಪಂಜಾಬಿನಲ್ಲಿ ಗುರು ರವಿದಾಸ್​ ಜಯಂತಿ ಅತ್ಯಂತ ದೊಡ್ಡ ಆಚರಣೆ. ಗುರು ರವಿದಾಸ್​ ಜಯಂತಿ ಆಚರಣೆಗಾಗಿ ರಾಜ್ಯದ ಪರಿಶಿಷ್ಠ ಜಾತಿ ಸಮುದಾಯದ ಭಕ್ತರು ಫೆಬ್ರವರಿ 10 ರಿಂದ 16ರವರೆಗೆ ವಾರಣಾಸಿಗೆ ತೆರಳಲಿದ್ದಾರೆ.

ಹೀಗೆ ಪ್ರವಾಸ ಕೈಗೊಳ್ಳುವ ಪರಿಶಿಷ್ಟ ಜಾತಿ ಸಮುದಾಯ ಮತದಾರರ ಸಂಖ್ಯೆ ಸುಮಾರು 20 ಪಕ್ಷ. ಪಂಜಾಬಿನಲ್ಲಿ ಶೇಕಡಾ 32ರಷ್ಟು ಪರಿಶಿಷ್ಟ ಜಾತಿಗಳ ಸಮುದಾಯದ ಮತದಾರರಿದ್ದು ಆ ಪೈಕಿ 20 ಲಕ್ಷದಷ್ಟು ಜನ ಮತ ಚಲಾಯಿಸಲು ಸಾಧ್ಯವಾಗುವುದಿಲ್ಲ. ಮತದಾನ ಮಾಡುವುದು ಅವರ ಸಾಂವಿಧಾನಿಕ ಹಕ್ಕು ಆದುದರಿಂದ ಮತದಾನದ ದಿನಾಂಕವನ್ನು ಮುಂದೂಡಬೇಕು ಎಂದು ಮುಖ್ಯಮಂತ್ರಿ ಚರಣಜಿತ್ ಚನ್ನಿ ಅವರು ಪತ್ರದ ಮೂಲಕ ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು.

ಇದನ್ನೂ ಓದಿ: ಮುಸ್ಲಿಮರೊಂದಿಗಿನ ನನ್ನ ಸಂಬಂಧವು, ನನ್ನೊಂದಿಗಿನ ಅವರ ಸಂಬಂಧದಂತೆಯೇ ಇದೆ

ಆ ಮನವಿಗೆ ಸ್ಪಂದಿಸಿರುವ ಚುನಾವಣಾ ಆಯೋಗ ಮತದಾನದ ದಿನಾಂಕವನ್ನು ಫೆಬ್ರವರಿ 14ರಿಂದ 20ಕ್ಕೆ ಅಂದರೆ 6 ದಿನ ಮುಂದೂಡಿದೆ. ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.
Published by:Sandhya M
First published: