ಪೆಟ್ರೋಲ್​​-ಡೀಸೆಲ್​​​ ಬೆಲೆಯಲ್ಲಿ ಸ್ಥಿರತೆ: ಇಲ್ಲಿದೆ ದರ ವಿವರ

ಈ ಹಿಂದೆ ಸೆಪ್ಟೆಂಬರ್​​ 14ರಂದು ಸೌದಿ ಅರೇಬಿಯಾದ ಅರಾಮ್ಕೋ ತೈಲ ಕಂಪೆನಿ ಮೇಲೆ ಡ್ರೋನ್‌ ದಾಳಿ ನಡೆದಿತ್ತು. ಈ ಡ್ರೋನ್​​ ದಾಳಿ ಬಳಿಕ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ದಿಢೀರ್​​ ಏರಿಕೆಯಾಗಿತ್ತು.

news18-kannada
Updated:October 16, 2019, 10:41 PM IST
ಪೆಟ್ರೋಲ್​​-ಡೀಸೆಲ್​​​ ಬೆಲೆಯಲ್ಲಿ ಸ್ಥಿರತೆ: ಇಲ್ಲಿದೆ ದರ ವಿವರ
ಸಾಂದರ್ಭಿಕ ಚಿತ್ರ
news18-kannada
Updated: October 16, 2019, 10:41 PM IST
ಬೆಂಗಳೂರು(ಅ.16): ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲೋತ್ಪನ್ನಗಳ ಬೆಲೆ ದಾಖಲೆಯ ಮಟ್ಟ ತಲುಪಿದ ಬಳಿಕ ಇಳಿಕೆಯಾಗಿದೆ. ಆದರೆ, ಕಳೆದ ಎರಡು ದಿನಗಳಿಂದ ಮಾತ್ರ ದೈನಂದಿನ ಬೆಲೆ ಬದಲಾವಣೆ ಪ್ರಕ್ರಿಯೆಯಲ್ಲಿ ಪೆಟ್ರೋಲ್​​​-ಡೀಸೆಲ್ ದರದಲ್ಲಿ ಸ್ಥಿರತೆ ಕಂಡು ಬಂದಿದೆ ಎನ್ನಲಾಗುತ್ತಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಒಂದು ಲೀಟರ್​​ ಪೆಟ್ರೋಲ್​​ ಬೆಲೆ 73.27 ರೂ., ಡೀಸೆಲ್ ಬೆಲೆ ಲೀಟರ್​​ಗೆ 67.41 ರೂ. ಆಗಿದೆ ಎನ್ನಲಾಗಿದೆ. ಇನ್ನು ಬೆಂಗಳೂರಿನಲ್ಲಿ ಪೆಟ್ರೋಲ್​​ ಲೀಟರ್​ ದರ 75.72 ರೂ., ಡೀಸೆಲ್​​ಗೆ 68.62 ರೂ. ಇದೆ. ಹಾಗೆಯೇ ಕೊಲ್ಕತ್ತಾದಲ್ಲಿ ಪೆಟ್ರೋಲ್​​-ಡೀಸೆಲ್​​ ಬೆಲೆ ಕ್ರಮವಾಗಿ 75.92 ರೂ. ಮತ್ತು 68.77 ರೂ. ಆಗಿದೆ. ಅಲ್ಲದೇ ಮುಂಬೈನಲ್ಲಿ ಲೀಟರ್​​ ಪೆಟ್ರೋಲ್​​ಗೆ 78.88 ರೂ. ಮತ್ತು ಡೀಸೆಲ್​​ಗೆ 69.61 ರೂ. ಇದೆ. ಚೆನ್ನೈ ಪೆಟ್ರೋಲ್​ಗೆ 76.16 ರೂ., ಡೀಸೆಲ್​ ದರವೂ ​​70.21 ರೂ. ಕಡಿಮೆಯಾಗಿದೆ. ಅಂತೆಯೇ ಹೈದರಾಬಾದ್​ನಲ್ಲೂ ಪೆಟ್ರೋಲ್​​​ಗೆ ಲೀಟರ್​​ ಬೆಲೆ 77.91 ರೂ., ಡೀಸೆಲ್​​ ಬೆಲೆ 72.42 ರೂ. ಆಗಿದೆ.

ಈ ಹಿಂದೆ ಸೆಪ್ಟೆಂಬರ್​​ 14ರಂದು ಸೌದಿ ಅರೇಬಿಯಾದ ಅರಾಮ್ಕೋ ತೈಲ ಕಂಪೆನಿ ಮೇಲೆ ಡ್ರೋನ್‌ ದಾಳಿ ನಡೆದಿತ್ತು. ಈ ಡ್ರೋನ್​​ ದಾಳಿ ಬಳಿಕ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ದಿಢೀರ್​​ ಏರಿಕೆಯಾಗಿತ್ತು. ತೈಲ ಪೂರೈಕೆಯಲ್ಲಿ ವ್ಯತ್ಯಯ ಕಾಣಿಸಿಕೊಂಡ ಕಾರಣದಿಂದಾಗಿ ಅಂತರಾಷ್ಟ್ರೀಯ ಮಾರುಕಟ್ಟೆ ಮೇಲೆ ಪರಿಣಾ ಬೀರಿತ್ತು. ಇದರಿಂದಲೇ ಬೆಲೆ ಏರಿಕೆ ಕಂಡಿತ್ತು.

ಇದೀಗ ಎಲ್ಲಾ ಸಮಸ್ಯೆಯೂ ಸರಿಪಡಿಸಲಾಗಿದೆ. ಕಚ್ಚಾ ತೈಲದ ಬೆಲೆಯೂ ತುಸು ಇಳಿಕೆಯಾಗಿದೆ. ಹಾಗಾಗಿ ಪೆಟ್ರೋಲ್‌ ಬೆಲೆಯೂ ಇಳಿಯುವ ನಿರೀಕ್ಷೆ ಹೆಚ್ಚಿದ ಎಂದು ಇಂಡಿಯನ್‌ ಆಯಿಲ್‌ನ ಅಧ್ಯಕ್ಷ ಸಂಜೀವ್‌ ಸಿಂಗ್‌ ಹೇಳಿದ್ದಾರೆ.

ಇದನ್ನೂ ಓದಿ: ‘ಬಿಜೆಪಿಗೆ ವೋಟ್​​ ಮಾಡಿದ್ರೆ ಬೇಟಿ ಬಚಾವೋ, ಬೇಟಿ ಪಢಾವೋ, ಬೇಟಿ ಖಿಲಾವೊ ಗ್ಯಾರಂಟಿ: ಬಬಿತಾ ಪೋಗಟ್ ಭರವಸೆ

ಯಾಕೆ ಬೆಲೆ ಕಡಿಮೆ?: ಕಳೆದ ಐದು ದಿನಗಳಿಂದ ಪೆಟ್ರೋಲ್-ಡೀಸೆಲ್​​ ಬೆಲೆಗಳು ಇಳಿಕೆಯಾಗುತ್ತಿರವುದನ್ನು ನಾವು ಗಮನಿಸಬಹುದು. ಪೆಟ್ರೋಲ್ ಬೆಲೆ ಇಳಿಕೆಗೆ ಮಾಮೂಲಿಯಂತೆ ಕಾರಣವಾಗಿರುವುದು ಅಂತಾರಾಷ್ಟ್ರೀಯ ಕಚ್ಛಾ ತೈಲ ಬೆಲೆಯಲ್ಲಿ ಆಗುತ್ತಿರುವ ಗಣನೀಯ ಇಳಿಕೆ. ಪ್ರಮುಖ ತೈಲ ಮಾರುಕಟ್ಟೆಯಾದ ಬ್ರೆಂಟ್ ಕ್ರೂಡ್​ನಲ್ಲಿ ಬ್ಯಾರೆಲ್ ತೈಲವು 59.23 ಡಾಲರ್​ಗೆ ಇಳಿಕೆಯಾಗಿದೆ. ಹಾಗೆಯೇ ಡಬ್ಲ್ಯೂಟಿಐ ಕ್ರೂಡ್​ನಲ್ಲಿನ ಬ್ಯಾರೆಲ್ ತೈಲವು 50.53 ಡಾಲರ್ ಆಗಿದೆ. ಮುಂದಿನ ಕೆಲ ದಿನಗಳವರೆಗೂ ಈ ತೈಲ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆಯಾಗುವ ಸಂಭವವಿದ್ದು, ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಇನ್ನಷ್ಟು ಇಳಿಯುವ ಸಾಧ್ಯತೆ ಇದೆ
---------
Loading...

First published:October 16, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...