ರಾಯಪುರ (ಮಾರ್ಚ್ 6): ಪೊಲೀಸರಿಗೆ ಮಾಹಿತಿ ನೀಡುತ್ತಿದ್ದರು ಎನ್ನುವ ಅನುಮಾನ ಹಿನ್ನೆಲೆಯಲ್ಲಿ ಛತ್ತೀಸ್ಗಢದಲ್ಲಿ ಮಾವೋವಾದಿಗಳು ನಾಲ್ಕು ಜನರನ್ನು ಹತ್ಯೆ ಮಾಡಿದ್ದಾರೆ. ಬಿಜಪುರ್ ಜಿಲ್ಲೆಯ ದುಮ್ರಿ-ಪಾಲ್ನಾರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಳೆದ ಎರಡು ದಿನಗಳಲ್ಲಿ ನಾಲ್ಕು ಜನರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾಡಿಗೆ ರಸ್ತೆ ಸಂಪರ್ಕ ಕಲ್ಪಿಸುವ ವಿಚಾರದಲ್ಲಿ ಕೆಲ ಹಳ್ಳಿಗರು ಬೆಂಬಲ ಸೂಚಿಸಿದ್ದರು. ಅವರನ್ನು ಮಾವೋವಾದಿಗಳು ಕಾಡಿಗೆ ಬರುವಂತೆ ಕರೆದಿದ್ದರು. ಈ ವೇಳೆ ಅವರನ್ನು ಹತ್ಯೆ ಮಾಡಲಾಗಿದೆ.
ಗ್ರಾಮಸ್ಥರು ಕಾಣೆಯಾಗಿರುವ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಬಗ್ಗೆ ವಿಚಾರಿಸಿದಾಗ ಅವರು ಕಾಡಿನತ್ತ ತೆರಳಿರುವ ವಿಚಾರ ಬೆಳಕಿಗೆ ಬಂದಿತ್ತು. ಕಾಡಿನಲ್ಲಿ ಪೊಲೀಸರು ಗಸ್ತು ತಿರುಗಿದ ವೇಳೆ ಹೆಣಗಳು ಸಿಕ್ಕಿವೆ. ಅಂದಹಾಗೆ, ಇವರನ್ನು ಒಮ್ಮೆಲೇ ಹತ್ಯೆ ಮಾಡಲಾಗಿದೆಯೋ ಅಥವಾ ಬೇರೆ ಬೇರೆ ಸಮಯದಲ್ಲಿ ಹತ್ಯೆ ಮಾಡಲಾಗಿದೆಯೇ ಎನ್ನುವ ಬಗ್ಗೆ ಮಾಹಿತಿ ಸಿಕ್ಕಿಲ್ಲ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ