ಮಾಂಸಹಾರ ಸೇವನೆ, JNU ವಿವಿಯಲ್ಲಿ ಘರ್ಷಣೆ: ABVP ವಿದ್ಯಾರ್ಥಿಗಳ ವಿರುದ್ಧ FIR ದಾಖಲು

JNUನಲ್ಲಿ ರಾಮ ನವಮಿ ಆಚರಣೆ

JNUನಲ್ಲಿ ರಾಮ ನವಮಿ ಆಚರಣೆ

ಎಬಿವಿಪಿ ವಿದ್ಯಾರ್ಥಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 323, 341, 509, 506 ಮತ್ತು 34ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ಖಚಿತಪಡಿಸಿದ್ದಾರೆ. 

  • Share this:

ನವದೆಹಲಿ, ಏ. 11: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (Akhila Bharath Vidyarti Parishath) ವಿದ್ಯಾರ್ಥಿಗಳು ರಾಮನವಮಿ (Rama navami) ದಿನ ಮಾಂಸಾಹಾರ (Non veg) ಸೇವಿಸಬಾರದು ಎಂದು ಎಡಪಂಥೀಯ ವಿದ್ಯಾರ್ಥಿಗಳನ್ನು (Left Students) ತಡೆದ ಹಿನ್ನೆಲೆಯಲ್ಲಿ ದೆಹಲಿಯ ಪ್ರತಿಷ್ಠಿತ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ (JNU) ಘರ್ಷಣೆ ಏರ್ಪಟ್ಟಿದ್ದು 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ.‌ ಇದೀಗ, ಕೆಲವು ವಿದ್ಯಾರ್ಥಿಗಳ ದೂರಿನ ಮೇರೆಗೆ ದೆಹಲಿ ಪೊಲೀಸರು (Delhi Police) ಅಪರಿಚಿತ ಎಬಿವಿಪಿ ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್ (FIR) ದಾಖಲಿಸಿಕೊಂಡಿದ್ದಾರೆ. ಇತ್ತ ಎಬಿವಿಪಿ ವತಿಯಿಂದಲೂ ಪ್ರತಿ ದೂರು ಸಲ್ಲಿಕೆಯಾಗುವ ಸಾಧ್ಯತೆಗಳಿವೆ


ಎಬಿವಿಪಿಯಿಂದಲೂ ದೂರು ಸಾಧ್ಯತೆ


ಅಪರಿಚಿತ ಎಬಿವಿಪಿ ವಿದ್ಯಾರ್ಥಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 323, 341, 509, 506 ಮತ್ತು 34ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ಖಚಿತಪಡಿಸಿದ್ದಾರೆ. ಜೆಎನ್‌ಯು ವಿದ್ಯಾರ್ಥಿಗಳ ಒಕ್ಕೂಟ ಮತ್ತು ಕೆಲವು ಎಡಪಕ್ಷಗಳ ಸದಸ್ಯರು ನೀಡಿದ ದೂರನ್ನು ಆಧರಿಸಿ ಪೊಲೀಸರು ಎಫ್ ಐಆರ್ ಅನ್ನು ದಾಖಲಿಸಿದ್ದಾರೆ. ಎಡಪಂಥೀಯ ವಿದ್ಯಾರ್ಥಿಗಳು ದೂರು ದಾಖಲಿಸಿರುವುದಕ್ಕೆ ಪ್ರತಿಯಾಗಿ ಈಗ ಎಬಿವಿಪಿ ವಿದ್ಯಾರ್ಥಿಗಳು ಕೂಡ ದೂರು ದಾಖಲಿಸುವ ಸಾಧ್ಯತೆ ಇದೆ.


ಸೂಕ್ತ ಕ್ರಮದ ಭರವಸೆ ನೀಡಿದ ಪೊಲೀಸರು


ಪ್ರಕರಣದ ಬಗ್ಗೆ ಮಾಹಿತಿ ಸಂಗ್ರಹ ಮಾಡಲಾಗುತ್ತಿದ್ದು ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಆರೋಪಿಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗುವುದು ಜೆಎನ್‌ಯು ಹಾಸ್ಟೆಲ್ ವಾರ್ಡನ್ ಹಾಗೂ ಭದ್ರತಾ ಸಿಬ್ಬಂದಿಯಿಂದ ವರದಿ ತರಿಸಿಕೊಳ್ಳಲಾಗುವುದು ವಿಶ್ವವಿದ್ಯಾನಿಲಯದ ನಿಯಮಗಳ ಅಡಿಯಲ್ಲಿ ತಪ್ಪಿತಸ್ಥರೆಂದು ಕಂಡುಬಂದ ವಿದ್ಯಾರ್ಥಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.


ಜೆಎನ್‌ಯು ಆಡಳಿತ ಮಂಡಳಿಯಿಂದಲೂ ತನಿಖೆ


ಇನ್ನೊಂದೆಡೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವಿದ್ಯಾರ್ಥಿಗಳು ಮಾಂಸಹಾರ ಸೇವನೆ ಮಾಡಬಾರದೆಂದು ಎಡಪಂಥೀಯ ವಿದ್ಯಾರ್ಥಿಗಳು ಹಾಗೂ ಕಾವೇರಿ ಹಾಸ್ಟೆಲ್‌ ನ ಮೆಸ್ ಕಾರ್ಯದರ್ಶಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪವೂ ಕೇಳಿಬಂದ‌ ಹಿನ್ನೆಲೆಯಲ್ಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಕೂಡ ತನಿಖೆಯನ್ನು ಪ್ರಾರಂಭಿಸಿದೆ.


ಇದನ್ನೂ ಓದಿ:  ರಾಮ ಹುಟ್ಟಿರದಿದ್ರೆ BJP ಏನ್ಮಾಡ್ತಿತ್ತು? ಅವರಿಗೆ ಹಿಂದುತ್ವದ ಪೇಟೆಂಡ್ ಇದೆಯಾ ಎಂದ ಮಹಾ ಸಿಎಂ


ಏತನ್ಮಧ್ಯೆ, ಎಡಪಂಥೀಯ ವಿಚಾರಧಾರೆಗೆ ಸಂಬಂಧಿಸಿದ ವಿದ್ಯಾರ್ಥಿಗಳು ಇಂದು ಮಧ್ಯಾಹ್ನ 2 ಗಂಟೆಗೆ ದೆಹಲಿ ಪೊಲೀಸ್ ಪ್ರಧಾನ ಕಚೇರಿಯ ಎದುರು ಪ್ರತಿಭಟನೆಗೆ ಕರೆ ನೀಡಿದ್ದಾರೆ.


ಕೋಳಿ ಸರಬರಾಜಿಗೆ ಅಡ್ಡಿ


ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವಿದ್ಯಾರ್ಥಿಗಳು ರಾಮನವಮಿಯ ಸಂದರ್ಭದಲ್ಲಿ ಮಾಂಸಾಹಾರ ತಿನ್ನುವುದನ್ನು ವಿರೋಧಿಸಿದ್ದರಿಂದ ಭಾನುವಾರ ಜೆಎನ್‌ಯುನಲ್ಲಿ ಘರ್ಷಣೆಯಾಗಿದೆ. ಎಬಿವಿಪಿ ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿರುವ ಕಾವೇರಿ ಹಾಸ್ಟೆಲ್‌ನ ಮೆಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ ಕೋಳಿ ಸರಬರಾಜು ಮಾಡದಂತೆ ತಡೆದಿದ್ದಾರೆ ಎಂದು ಆರೋಪಿಸಲಾಗಿದೆ.


ಮತ್ತೊಂದೆಡೆ ಎಡಪಂಥೀಯ ವಿದ್ಯಾರ್ಥಿಗಳು ಕಾವೇರಿ ಹಾಸ್ಟೆಲ್‌ನಲ್ಲಿ ರಾಮನವಮಿ ಪ್ರಾರ್ಥನೆಗೆ ಅಡ್ಡಿಪಡಿಸಿದ್ದಾರೆ ಎಂದು ಎಬಿವಿಪಿ ಆರೋಪಿಸಿದೆ. ನಂತರದ ಹಿಂಸಾಚಾರದಲ್ಲಿ, ಎಡ ಸಂಘಟನೆಗಳು ತಮ್ಮ ಸುಮಾರು 50 ಸದಸ್ಯರು ಗಾಯಗೊಂಡಿದ್ದಾರೆ ಎಂದು ಹೇಳಿಕೊಂಡರೆ, ಎಬಿವಿಪಿ ತನ್ನ ಹತ್ತು ಸದಸ್ಯರು ಗಾಯಗೊಂಡಿದ್ದಾರೆ ಎಂದು ಹೇಳಿಕೊಂಡಿದೆ‌.


ಇದನ್ನೂ ಓದಿ: ಇಂದು ನರೇಂದ್ರ ಮೋದಿ-ಜೋ ಬೈಡನ್ Virtual Meeting; ಯಾವೆಲ್ಲ ಪ್ರಮುಖ ವಿಚಾರಗಳು ಚರ್ಚೆಯಾಗುತ್ತೆ ಗೊತ್ತಾ?


ಕಲಬುರಗಿಯ ಕೇಂದ್ರಿಯ ವಿವಿಯಲ್ಲಿಯೂ ಗಲಾಟೆ


ರಾಮನವಮಿ ಆಚರಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆದಿರುವ ಆರೋಪ ಕೇಳಿ ಬಂದಿದೆ. ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿಯಲ್ಲಿರುವ ಕೇಂದ್ರೀಯ ವಿಶ್ವವಿದ್ಯಾಲಯದ ಆವರಣದಲ್ಲಿ ಭಾನುವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ವಿವಿಯ ವಿದ್ಯಾರ್ಥಿಗಳಿಂದಲೇ ರಾಮನವಮಿ ಆಚರಿಸಿದ್ದ‌ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ ಕೇಳಿ ಬಂದಿದೆ. ಹಲ್ಲೆಗೊಳಗಾದ ವಿದ್ಯಾರ್ಥಿಗಳು ABVPಯಲ್ಲಿ ಗುರುತಿಸಿಕೊಂಡಿದ್ದಾರೆ. ಘಟನೆ ಖಂಡಿಸಿ ವಿವಿ ಮುಂಭಾಗ ABVP ಪ್ರತಿಭಟನೆ ನಡೆಸುತ್ತಿದೆ.

First published: