ದೆಹಲಿಯಲ್ಲಿ ಕಾಮುಕರ ಅಟ್ಟಹಾಸ; 2 ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

news18
Updated:August 10, 2018, 12:08 PM IST
ದೆಹಲಿಯಲ್ಲಿ ಕಾಮುಕರ ಅಟ್ಟಹಾಸ; 2 ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ
news18
Updated: August 10, 2018, 12:08 PM IST
-ನ್ಯೂಸ್​ 18 ಕನ್ನಡ

ನವದೆಹಲಿ,(ಆ.10): ದಿನೇ ದಿನೇ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಲೇ ಇವೆ. ಅದರಲ್ಲೂ ಅಮಾಯಕ ಮಕ್ಕಳ ಮೇಲೆ ಕಾಮುಕರ ವ್ಯಾಘ್ರರ ಅಟ್ಟಹಾಸ ಹೆಚ್ಚಾಗಿದೆ. ರಾಷ್ಟ್ರ ರಾಜಧಾನಿಯಂತೂ ಅತ್ಯಾಚಾರಿಗಳ ಗೂಡಾಗಿ ಪರಿಣಮಿಸಿದೆ. 2 ನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿ ಮೇಲೆ ಎಲೆಕ್ಟ್ರಿಷಿಯನ್​ ಒಬ್ಬ ಅತ್ಯಾಚಾರ ಎಸಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

ಗೋಲ್​ ಮಾರುಕಟ್ಟೆ ಏರಿಯಾದಲ್ಲಿರುವ ನವದೆಹಲಿ ಮುನ್ಸಿಪಲ್​ ಕೌನ್ಸಿಲ್​​ ಶಾಲೆಯ ಆವರಣದಲ್ಲಿ ಇಂತಹ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗುರುವಾರ ಸಂಜೆ ಆ ಪುಟ್ಟ ಬಾಲಕಿ ಶಾಲೆ ಮುಗಿಸಿ ಮನೆಗೆ ವಾಪಸ್​ ಬಂದಾಗ ನಡೆದ ಅಹಿತಕರ ಘಟನೆಯ ಬಗ್ಗೆ ತನ್ನ ಪೋಷಕರಿಗೆ ತಿಳಿಸಿದ್ದಾಳೆ. ಆಗ ಈ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.

ಆರೋಪಿಯನ್ನು ರಾಮ್​ ಆಸ್ರೆ (37) ಎಂದು ಗುರುತಿಸಲಾಗಿದ್ದು, ಈತ ಕಳೆದ ಒಂದು ತಿಂಗಳಿನಿಂದ ಎನ್​ಡಿಎಂಸಿ ಶಾಲೆಯಲ್ಲಿ ಖಾಯಂ ಎಲೆಕ್ಟ್ರಿಷಿಯನ್​ ಆಗಿ ಕೆಲಸ ನಿರ್ವಹಿಸುತ್ತಿದ್ದ ಎನ್ನಲಾಗಿದೆ. ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಿದ್ದಾರೆ.
First published:August 10, 2018
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ