Bitcoin Issue: ಬಿಟ್ ಕಾಯಿನ್ ಹಗರಣದ ಬಗ್ಗೆ ಹೈಕಮಾಂಡ್ ಜತೆ ಚರ್ಚಿಸಲು ಸಿಎಂ ಬೊಮ್ಮಾಯಿ ಯತ್ನ!

BItcoin Issue: ಆರ್​ಎಸ್​ಎಸ್​ ನಾಯಕರು ಮತ್ತು ರಾಜ್ಯಪಾಲರ ಬಳಿಕ ತುರ್ತಾಗಿ ಹೈಕಮಾಂಡ್ ನಾಯಕರನ್ನು ಸಿಎಂ ಭೇಟಿ ಮಾಡುತ್ತಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

  • Share this:
ನವದೆಹಲಿ, ನ. 10: ಇತ್ತೀಚೆಗೆ ರಾಜ್ಯದಲ್ಲಿ ಭಾರೀ ಚರ್ಚೆ ಆಗುತ್ತಿರುವ ಮತ್ತು ಮುಖ್ಯಮಂತ್ರಿ ಬದಲಾಗುತ್ತಾರೆ ಎಂಬ ಚರ್ಚೆಗೆ ಮುನ್ನುಡಿ ಬರೆದಿರುವ ಬಿಟ್ ಕಾಯಿನ್ ಹಗರಣದ (Bitcoin Scam) ಬಗ್ಗೆ ಇಂದು ಅಥವಾ ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Chief Minister Basavaraja Bommai) ಬಿಜೆಪಿ ಹೈಕಮಾಂಡ್ ನಾಯಕರು, ವಿಶೇಷವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (Prime Minister Narendra Modi), ಕೇಂದ್ರ ಗೃಹ ಸಚಿವ ಅಮಿತ್ ಶಾ (Union Home Minister Amit Sha) ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡ (BJP National President JP Nadda) ಅವರನ್ನು ಭೇಟಿ ಮಾಡಿ ಚರ್ಚೆ ನಡೆಸುತ್ತಾರೆ ಎನ್ನಲಾಗಿದೆ.

ಹೈಕಮಾಂಡ್​ ನಾಯಕರನ್ನು ಭೇಟಿಯಾಗಲು ಬೊಮ್ಮಾಯಿ ಯತ್ನ

ಇಂದು ಮಧ್ಯಾಹ್ನ ಖಾಸಗಿ ಸುದ್ದಿ ಸಂಸ್ಥೆಯ ಕಾನ್ನ ಕ್ಲೇವ್ (Conclave) ನಲ್ಲಿ ಭಾಗವಹಿಸುವ ಮತ್ತು ಕೆಲವು ಕೇಂದ್ರ ಸಚಿವರ ಭೇಟಿಯ ನೆಪದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಗೆ ಬರುತ್ತಿದ್ದಾರೆ. ಆದರೆ ಬಿಜೆಪಿ ಹೈಕಮಾಂಡ್ ನಾಯಕರನ್ನು  (BJP High Command Leaders) ಭೇಟಿಯಾಗುವುದು ಅವರ ಮುಖ್ಯ ಉದ್ದೇಶ ಎಂದು ಹೇಳಲಾಗುತ್ತಿದೆ. ಮುಖ್ಯಮಂತ್ರಿ ಆದ ಹೊಸದರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಅಮಿತ್ ಶಾ, ಜೆಪಿ ನಡ್ಡ ಎಲ್ಲರೂ ಭೇಟಿಗೆ ಅವಕಾಶ ಮಾಡಿಕೊಟ್ಟಿದ್ದರು. ಆ ನಂತರದಲ್ಲಿ ಅವರ ಭೇಟಿ ಮಾಡಲು ನಿರಂತರವಾಗಿ ಪ್ರಯತ್ನಿಸಿದರೂ ಅದು ಸಾಧ್ಯವಾಗಿಲ್ಲ. ಈಗಲೂ ಬುಧವಾರ ರಾತ್ರಿ ದೆಹಲಿಯಲ್ಲೇ (Delhi) ವಾಸ್ತವ್ಯ ಇದ್ದು ಶತಾತಗತಾಯ ಹೈಕಮಾಂಡ್ ನಾಯಕರನ್ನು ಭೇಟಿ ಆಗಲೇಬೇಕೆಂದು ಬಸವರಾಜ ಬೊಮ್ಮಾಯಿ ನಿಶ್ವಯಿಸಿದ್ದಾರೆ ಎಂದು ಗೊತ್ತಾಗಿದೆ.

ಇದನ್ನು ಓದಿ : ಕರ್ನಾಟಕದಲ್ಲಿ ಬಿಟ್‌ಕಾಯಿನ್ ಹಗರಣದ ತನಿಖೆಯ ಕುರಿತು PMO ಪರಿಶೀಲನೆ..

ಬಿಟ್​ ಕಾಯಿನ್​ ಹಗರಣದ ಬಗ್ಗೆ ಚರ್ಚೆ

ಇತ್ತೀಚೆಗೆ ಕರ್ನಾಟಕದ ಧಾರವಾಡದ ಬಳಿ ನಡೆದ ಆರ್ ಎಸ್ ಎಸ್ ಬೈಠಕ್ (RSS Meeting) ವೇಳೆಯೂ ಹುಬ್ಬಳ್ಳಿಯಲ್ಲೇ ಠಿಕಾಣಿ ಹೂಡಿ ಆರ್ ಎಸ್ ಎಸ್ ನಾಯಕರನ್ನು ಭೇಟಿ ಆಗಲು ಪ್ರಯತ್ನಿಸಿದ್ದರು. ಆದರೆ ಅವಕಾಶ ಸಿಕ್ಕಿರಲಿಲ್ಲ. ವಾರದ ಬಳಿಕ ಆರ್ ಎಸ್ ಎಸ್ ನಾಯಕ ಮುಕುಂದ್ ಅವರೇ ಖುದ್ದಾಗಿ ಬಂದು ಬಸವರಾಜ ಬೊಮ್ಮಾಯಿ ಜೊತೆ ಚರ್ಚಿಸಿದ್ದಾರೆ. ಇದಾದ ಮೇಲೆ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಜೊತೆ ಸಿಎಂ ಬೊಮ್ಮಾಯಿ ಸಭೆ ಮಾಡಿದ್ದಾರೆ.‌ ಕೂಡಲೇ  ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Governor Thawar Chand Gehlot) ಅವರನ್ನು ಭೇಟಿಯಾಗಿದ್ದಾರೆ. ಈ ಎಲ್ಲಾ ಸಂದರ್ಭಗಳಲ್ಲೂ ಬಿಟ್ ಕಾಯಿನ್ ಹಗರಣದ ಬಗ್ಗೆ ಚರ್ಚೆ ನಡೆದಿರಬಹುದು. ಇದರ ಮುಂದುವರಿದ ಭಾಗವಾಗಿ ಈಗ ಹೈಕಮಾಂಡ್ ನಾಯಕರ ಭೇಟಿಗೆ ಬಸವರಾಜ ಬೊಮ್ಮಾಯಿ ಪ್ರಯತ್ನಿಸುತ್ತಿರಬಹುದು ಎಂದು ಹೇಳಲಾಗುತ್ತಿದೆ.

ಬಿಟ್ ಕಾಯಿನ್ ಹಗರಣದಿಂದ ಮುಖ್ಯಮಂತ್ರಿ ಬದಲಾವಣೆ ಆಗಬಹುದು, ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆ ಆಗಬಹುದು ಎಂದು ವ್ಯಾಪಕವಾಗಿ ಚರ್ಚೆ ಆಗುತ್ತಿದೆ. ಈ ಬಗ್ಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ (State BJP In charge Arun Sing) ಸ್ವತಃ 'ನಾಯಕತ್ವ ಬದಲಾವಣೆ ಇಲ್ಲ' ಎಂದು ಸ್ಪಷ್ಟೀಕರಣ ಕೊಟ್ಟ ಮೇಲೂ ಚರ್ಚೆ ನಡೆಯುತ್ತಲೇ ಇದೆ. ಹಿಂದೆ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗಲೂ ಅರುಣ್ ಸಿಂಗ್ ಪದೇ ಪದೇ 'ಮುಖ್ಯಮಂತ್ರಿ ಬದಲಾವಣೆ ಇಲ್ಲ' ಎನ್ನುತ್ತಿದ್ದರು ಕಡೆಗೆ ಯಡಿಯೂರಪ್ಪ ರಾಜೀನಾಮೆ ನೀಡಬೇಕಾಗಿ ಬಂತು. ಈಗಲೂ 'ಬೆಂಕಿ ಇಲ್ಲದೆ ಹೊಗೆ ಕಾಣಿಸಿಕೊಳ್ಳುವುದಿಲ್ಲ' ಎಂದು ಬಿಜೆಪಿ ನಾಯಕರು ಮಾತನಾಡಿಕೊಳ್ಳುತ್ತಿದ್ದಾರೆ.

ಇದನ್ನು ಓದಿ:  ಕುಸಿತ ಕಂಡ Bitcoin ಮೌಲ್ಯ: ಟಾಪ್ ಕ್ರಿಪ್ಟೋ ಕರೆನ್ಸಿಗಳ ಬೆಲೆ ಹೇಗಿದೆ?

ಪರಿಷತ್​ ಚುನಾವಣೆ ಬಗ್ಗೆಯೂ ಚರ್ಚೆ

ಆರ್ ಎಸ್ ಎಸ್ ನಾಯಕರು ಮತ್ತು ರಾಜ್ಯಪಾಲರ ಬಳಿಕ ತುರ್ತಾಗಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಒಂದೊಮ್ಮೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೈಕಮಾಂಡ್ ನಾಯಕರನ್ನು ಭೇಟಿಯಾದರೆ ಇತ್ತೀಚೆಗೆ ನಡೆದ ಉಪ‌ ಚುನಾವಣೆ (By Elections), ಮುಂದೆ ನಡೆಯುವ ಪರಿಷತ್ ಚುನಾವಣೆ (Legislative Council Elections) ಮತ್ತು ಸಂಪುಟ ವಿಸ್ತರಣೆ (Cabinet Expansion) ಬಗ್ಗೆಯೂ ಚರ್ಚೆ ನಡೆಸುವ ಸಾಧ್ಯತೆ ಇದೆ.
Published by:Vasudeva M
First published: