JP Nadda ಭೇಟಿ ಮಾಡಿದ CM Bommai, ಆದರೂ ಸಚಿವ ಸಂಪುಟ ಕಸರತ್ತು ಮುಂದೂಡಿಕೆ

ಬಸವರಾಜ ಬೊಮ್ಮಾಯಿ

ಬಸವರಾಜ ಬೊಮ್ಮಾಯಿ

ಸಂಪುಟ ಪುನರ್ ರಚನೆ ಅಥವಾ ವಿಸ್ತರಣೆಗೆ ಸಂಭವನೀಯರ ಪಟ್ಟಿ ನೀಡುವಂತೆ ಸಿಎಂಗೆ ಸೂಚಿಸಿದ್ದಾರೆ. ಸಿಎಂ ನೀಡುವ ಪಟ್ಟಿ ಪರಿಶೀಲಿಸಿ ಹೈಕಮಾಂಡ್ ನಾಯಕರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. ಏಪ್ರಿಲ್ 20ರಿಂದ 25ರೊಳಗೆ ನಡೆಯುವ ಸಾಧ್ಯತೆ ಇದೆ.

  • Share this:

ನವದೆಹಲಿ, ಏ. 6: ರಾಜ್ಯ ವಿಧಾನಸಭಾ ಚುನಾವಣೆಗೆ ಉಳಿದಿರುವುದು ಒಂದೇ ವರ್ಷ. ಒಂದು ವರ್ಷದ ಅವಧಿಗಾದರೂ ಮಂತ್ರಿಯಾಗಬೇಕು ಎಂದು ಕನಸು ಕಾಣುತ್ತಿದ್ದ ಸಚಿವಕಾಂಕ್ಷಿಗಳಿಗೆ ಮತ್ತೆ ನಿರಾಸೆಯಾಗಿದೆ. ಸಂಪುಟ ಪುನರ್ ರಚನೆ ಮಾಡುವ ಅಥವಾ ವಿಸ್ತರಣೆ ಮಾಡುವ ಬಗ್ಗೆ ಚರ್ಚೆ ಮಾಡಲೆಂದೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ (Chief Minister Basavaraja Bommai) ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ (BJP National President JP Nadda) ಅವರನ್ನು ಭೇಟಿ ಮಾಡಿದ್ದರು. ಆದರೂ ಸಚಿವ ಸಂಪುಟ ಕಸರತ್ತು ಮತ್ತೊಮ್ಮೆ ಮುಂದೂಡಿಕೆಯಾಗಿದೆ.‌


ಕಾರ್ಯಕಾರಿಣಿ ಬಳಿಕವೇ ಸಂಪುಟಕ್ಕೆ ಸರ್ಜರಿ
ಹೊಸಪೇಟೆಯಲ್ಲಿ ಏಪ್ರಿಲ್ 16 ಮತ್ತು 17ರಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದ್ದು ಕಾರ್ಯಕಾರಿಣಿ ಸಭೆ ಬಳಿಕ ಸರ್ಜರಿ ಮಾಡುವಂತೆ ಸಿಎಂ ಬಸವರಾಜ ಬೊಮ್ಮಾಯಿ‌ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡ ಸೂಚನೆ ನೀಡಿದ್ದಾರೆ. ಜೊತೆಗೆ ಸಂಪುಟ ಪುನರ್ ರಚನೆ ಅಥವಾ ವಿಸ್ತರಣೆಗೆ ಸಂಭವನೀಯರ ಪಟ್ಟಿ ನೀಡುವಂತೆ ಸಿಎಂಗೆ ಸೂಚಿಸಿದ್ದಾರೆ. ಸಿಎಂ ನೀಡುವ ಪಟ್ಟಿ ಪರಶೀಲಿಸಿ ಹೈಕಮಾಂಡ್ ನಾಯಕರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ. ಈ‌ ಹಿನ್ನೆಲೆಯಲ್ಲಿ ಸಂಪುಟ ಪುನರ್ ರಚನೆ ಮಾಡುವ ಅಥವಾ ವಿಸ್ತರಣೆ ಮಾಡುವ ಪ್ರಕ್ರಿಯೆ ಏಪ್ರಿಲ್ 20ರಿಂದ 25ರೊಳಗೆ ನಡೆಯುವ ಸಾಧ್ಯತೆ ಇದೆ.


ಎರಡೆರಡು ಬಾರಿ ನಡ್ಡಾ-ಸಿಎಂ ಭೇಟಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಬಿಜೆಪಿ ಸಂಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡ ಅವರನ್ನು ಭೇಟಿ ಮಾಡಿದ್ದರಾದರೂ ಸಚಿವ ಸಂಪುಟ ಪುನರ್ ರಚನೆ ಅಥವಾ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲು ಸಾಧ್ಯವಾಗಿರಲಿಲ್ಲ. ರಾತ್ರಿ ಮತ್ತೆ ಬಿಜೆಪಿ ರಾಷ್ಟ್ರೀಯ ಕಚೇರಿಯಲ್ಲಿ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ ಸುದೀರ್ಘವಾದ ಮಾತುಕತೆ ನಡೆಸಿದರು. ಇದಾದ ಬಳಿಕ ಬಸವರಾಜ ಬೊಮ್ಮಾಯಿ‌, ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಮತ್ತೊಂದು ಸುತ್ತಿನ ಮಾತುಕತೆ ನಡೆಸಿದರು. ಆದರೂ ಸಚಿವ ಸಂಪುಟ ಪುನರ್ ರಚನೆ ಅಥವಾ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಂಡಿಲ್ಲ ಎಂದು ಗೊತ್ತಾಗಿದೆ.


ಇದನ್ನು ಓದಿ: ಸಂಪುಟ ಪುನರ್ ರಚನೆಯೋ, ವಿಸ್ತರಣೆಯೋ ಹೈಕಮಾಂಡ್ ‌ನಿರ್ಧಾರ: CM Basavaraja Bommai


ಸಚಿವಾಕಾಂಕ್ಷಿಗಳಿಂದ ಲಾಬಿ
ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ದೊಡ್ಡ ಮಟ್ಟದಲ್ಲೇ ಸಂಪುಟ ಪುನರ್ ರಚನೆ ಆಗಲಿದೆ. 6ರಿಂದ 8 ಮಂದಿ‌ ಹಿರಿಯ ಸಚಿವರನ್ನು ಕೈಬಿಟ್ಟು 10ರಿಂದ-12 ಮಂದಿ‌‌ ಹೊಸಬರಿಗೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಕೂಡ ಹೇಳಲಾಗುತ್ತಿದೆ. ಈ ನಡುವೆ ಸಚಿವಾಕಾಂಕ್ಷಿಗಳಾದ ಎಂ.ಪಿ. ರೇಣುಕಾಚಾರ್ಯ, ಬಸವನಗೌಡ ಪಾಟೀಲ್ ಯತ್ನಾಳ್, ಬಿ.ವೈ. ವಿಜಯೇಂದ್ರ, ಆರ್. ಶಂಕರ್, ರಮೇಶ್ ಜಾರಕಿಹೊಳಿ, ಶ್ರೀಮಂತ ಪಾಟೀಲ್ ತಮ್ಮದೇಯಾದ ರೀತಿಯಲ್ಲಿ ಲಾಬಿ ಮಾಡುತ್ತಿದ್ದಾರೆ.‌


ಇದನ್ನು ಓದಿ: ಮಧ್ಯಾಹ್ನದ ಊಟದ ಹೊತ್ತಿನಲ್ಲೇ ಡೌನ್​ ಆದ Swiggy - Zomato App ; ಆಹಾರ ಪ್ರಿಯರಿಗೆ ಪರದಾಟ


ಕೇಂದ್ರ ಸಚಿವರನ್ನು ಭೇಟಿಮಾಡಿದ ಸಿಎಂ
ನಿನ್ನೆಯಿಂದ ದೆಹಲಿಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ರಾಜ್ಯಕ್ಕೆ ಬರಬೇಕಾದ ಅನುದಾನಗಳ ಶೀಘ್ರ ಬಿಡುಗಡೆಗೆ ಮನವಿ ಮಾಡಿದರು.‌ ಕೇಂದ್ರ ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತೆ ಖಾತೆ ಸಚಿವರಾದ ಧರ್ಮೇಂದ್ರ ಪ್ರಧಾನ್ ಅವರನ್ನು ಭೇಟಿ ಮಾಡಿ ಕುವೆಂಪು ವಿರಚಿತ ಶ್ರೀ ರಾಮಾಯಣ ದರ್ಶನಂ ಪುಸ್ತಕವನ್ನು ಕಾಣಿಕೆಯಾಗಿ ನೀಡಿದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಸೈನಿಕ ಶಾಲೆ ಆರಂಭಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು. ಸಂದರ್ಭದಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮತ್ತಿತರರು ಉಪಸ್ಥಿತರಿದ್ದರು.

First published: