ಮಧ್ಯಪ್ರದೇಶ ಬಿಕ್ಕಟ್ಟು: ಇಂದು ರಾಜ್ಯಪಾಲರ ನಿರ್ದೇಶನದ ಮೇರೆಗೆ ವಿಶ್ವಾಸಮತ ಯಾಚನೆ?

ನನ್ನ ಸರ್ಕಾರ ವಿಧಾನಸಭೆಯಲ್ಲಿ ಬಹುಮತ ಹೊಂದಿದೆ. ಇದನ್ನು ಸಾಬೀತುಪಡಿಸಲು ನಾನು ಸಿದ್ಧ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್‌ನಾಥ್‌ ಹೇಳಿದ್ದರು. ಅದರಂತೆಯೇ ಈಗ ಕಮಲ್‌ನಾಥ್‌ ನೇತೃತ್ವದ ಮಧ್ಯಪ್ರದೇಶ ಸರ್ಕಾರಕ್ಕೆ ಬಹುಮತ ಸಾಬೀತುಪಡಿಸಲು ಅಗ್ನಿಪರೀಕ್ಷೆ ಎದುರಾಗಿದೆ.

ಸಿಎಂ ಕಮಲ್​​ನಾಥ್

ಸಿಎಂ ಕಮಲ್​​ನಾಥ್

  • Share this:
    ನವದೆಹಲಿ(ಮಾ.16): ಮಧ್ಯಪ‍್ರದೇಶ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಕಮಲ್‌ನಾಥ್‌ ಅವರಿಗೆ ವಿಶ್ವಾಸಮತ ಯಾಚಿಸಲು ಇಂದು ಅವಕಾಶ ನೀಡುವ ಸಾಧ್ಯತೆಯಿದೆ. ರಾಜ್ಯಪಾಲ ಲಾಲ್‌ಜಿ ಟಂಡನ್ ನಿರ್ದೇಶನದ ಮೇರೆಗೆ ಸ್ಪೀಕರ್ ನರ್ಮದಾ ಪ್ರಸಾದ್ ಪ್ರಜಾಪತಿ ವಿಶ್ವಾಸ ಮತ ಯಾಚನೆಯ ಪ್ರಕ್ರಿಯೆ ನೋಡಿಕೊಳ್ಳಲಿದ್ದಾರೆ. ಓಪನ್ ಬ್ಯಾಲಟ್ ಮೂಲಕ ಮತದಾನ ನಡೆಯಲಿದೆ. ಇಡೀ ಮತದಾನ ಪ್ರಕ್ರಿಯೆಯನ್ನು ನೇರ ಪ್ರಸಾರ ಮಾಡಲಿದ್ದಾರೆ ಎನ್ನಲಾಗುತ್ತಿದೆ.

    ಇನ್ನು, ಮಧ್ಯಪ್ರದೇಶದ ವಿಧಾನಸಭೆ ಅಧಿವೇಶನವು ಇಂದಿನಿಂದಲೇ ಶುರುವಾಗಲಿದೆ. ಬೆಳಿಗ್ಗೆ 11 ಗಂಟೆಗೆ ಪ್ರಾರಂಭವಾಗಲಿದೆ. ರಾಜ್ಯಪಾಲ ಲಾಲ್‌ಜಿ ಟಂಡನ್ ವಿಧಾನಸಭೆಯನ್ನುದ್ದೇಸಿ ಮಾತನಾಡಿದ ನಂತರ, ವಿಶ್ವಾಸಮತ ಯಾಚನೆಗೆ ಸ್ವೀಕರ್‌ ಅವಕಾಶ ನೀಡಲಿದ್ದಾರೆ.

    ಇತ್ತೀಚೆಗೆ ನನ್ನ ಸರ್ಕಾರ ವಿಧಾನಸಭೆಯಲ್ಲಿ ಬಹುಮತ ಹೊಂದಿದೆ. ಇದನ್ನು ಸಾಬೀತುಪಡಿಸಲು ನಾನು ಸಿದ್ಧ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್‌ನಾಥ್‌ ಹೇಳಿದ್ದರು. ಅದರಂತೆಯೇ ಈಗ ಕಮಲ್‌ನಾಥ್‌ ನೇತೃತ್ವದ ಮಧ್ಯಪ್ರದೇಶ ಸರ್ಕಾರಕ್ಕೆ ಬಹುಮತ ಸಾಬೀತುಪಡಿಸಲು ಅಗ್ನಿಪರೀಕ್ಷೆ ಎದುರಾಗಿದೆ.

    ಇದನ್ನೂ ಓದಿ: ಕೊರೋನಾ ವೈರಸ್​​: ಸಾರ್ಕ್‌ ರಾಷ್ಟ್ರಗಳ ನಾಯಕರ ಜತೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್‌

    ಶನಿವಾರ ಮಧ್ಯಪ್ರದೇಶದ ರಾಜ್ಯಪಾಲರನ್ನು ಭೇಟಿಯಾಗಿದ್ದ ಬಿಜೆಪಿ ನಾಯಕರು, ಸಿಎಂ ಕಮಲನಾಥ್ ಅವರಿಗೆ ಸೋಮವಾರ ಸದನದಲ್ಲಿ ವಿಶ್ವಾಸಮತ ಯಾಚಿಸಿ ಬಹುಮತ ಸಾಬೀತು ಪಡಿಸಲು ನಿರ್ದೇಶನ ನೀಡುವಂತೆ ಒತ್ತಾಯಿಸಿದ್ದರು. ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಬಿಜೆಪಿ ನಿಯೋಗ ರಾಜ್ಯಪಾಲ ಲಾಲ್​ಜೀ ಟಂಡನ್ ಅವರ ಬಳಿ ಮನವಿ ಮಾಡಿತ್ತು. ಜೈಪುರದ ರೆಸಾರ್ಟ್​ನಲ್ಲಿ ಉಳಿದುಕೊಂಡಿದ್ದ ಕಾಂಗ್ರೆಸ್ ಶಾಸಕರು ಈಗಾಗಲೇ ಭೂಪಾಲ್​ಗೆ ಮರಳಿದ್ದಾರೆ. ನಾಳೆ ನಡೆಯುವ ಅಧಿವೇಶನದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ.

    230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆಯಲ್ಲಿ ಪ್ರಸ್ತುತ 228 ಶಾಸಕರಿದ್ದಾರೆ. ಬಹುಮತಕ್ಕೆ 115 ಸ್ಥಾನಗಳ ಅವಶ್ಯಕತೆ ಇದೆ. ಬಿಎಸ್​ಪಿಯ ಇಬ್ಬರು ಶಾಸಕರು, ಸಮಾಜವಾದಿ ಪಕ್ಷದ ಓರ್ವ ಶಾಸಕ ಹಾಗೂ ನಾಲ್ವರು ಪಕ್ಷೇತರ ಶಾಸಕರ ಬೆಂಬಲದೊಂದಿಗೆ 121 ಸದಸ್ಯರ ಬಲದೊಂದಿಗೆ ಕಾಂಗ್ರೆಸ್ ಸರ್ಕಾರ ರಚನೆ ಮಾಡಿದೆ. ಆದರೆ, ಇದೀಗ ಪಕ್ಷೇತರರು ಸೇರಿದಂತೆ ಕಾಂಗ್ರೆಸ್​ನ 22 ಶಾಸಕರು ರಾಜೀನಾಮೆ ನೀಡಿದ್ದಾರೆ. ಹಾಲಿ ಕಾಂಗ್ರೆಸ್​ನಲ್ಲಿ ಕೇವಲ 92 ಶಾಸಕರಿದ್ದಾರೆ. ಹೀಗಾಗಿ, ಒಂದುವೇಳೆ ನಾಳೆ ಸಿಎಂ ಕಮಲನಾಥ್​ಗೆ ವಿಶ್ವಾಸಮತ ಯಾಚನೆಗೆ ಸೂಚನೆ ನೀಡಿದರೆ ಸರ್ಕಾರ ಪತನವಾಗುವ ಸಾಧ್ಯತೆ ಹೆಚ್ಚಾಗಿದೆ.
    First published: