CMTI Recruitment 2020: ಪ್ರಾಜೆಕ್ಟ್ ಫೆಲೋ ಮತ್ತು ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಐಟಿಐ, ಡಿಪ್ಲೋಮಾ, ಬಿ.ಎಸ್ಸಿ, ಎಂ.ಎಸ್ಸಿ, ಗ್ರಾಜುಯೇಷನ್, ಎಂಬಿಎ, ಬಿ.ಇ/ಬಿ.ಟೆಕ್ ಮತ್ತು ಬಿಬಿಎಂ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದೆಂದು ತಿಳಿಸಿದೆ.

news18-kannada
Updated:October 11, 2020, 7:05 PM IST
CMTI Recruitment 2020: ಪ್ರಾಜೆಕ್ಟ್ ಫೆಲೋ ಮತ್ತು ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
jobs
  • Share this:
ಸೆಂಟ್ರಲ್ ಮ್ಯಾನಿಫ್ಯಾಕ್ಚರಿಂಗ್ ಟೆಕ್ನಾಲಜಿ ಇನ್ಟಿಟ್ಯೂಟ್​ನಲ್ಲಿ (ಸಿಎಂಟಿಐ) ಖಾಲಿ ಇರುವ 12 ಪ್ರಾಜೆಕ್ಟ್ ಫೆಲೋ ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳನ್ನ ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃ ವೆಬ್​ಸೈಟ್​​ಗೆ ತೆರಳಿ ನೀಡಲಾಗಿರುವ ಮಾಹಿತಿಯನ್ನು ಓದಿ ನಂತರ ಅರ್ಜಿ ಸಲ್ಲಿಸಲು ತಿಳಿಸಿದೆ. ಅ.23ರೊಳಗೆ ಅರ್ಜಿ ಸಲ್ಲಿಸಬೇಕಿದೆ.

ವಿದ್ಯಾರ್ಹತೆ:

ಐಟಿಐ, ಡಿಪ್ಲೋಮಾ, ಬಿ.ಎಸ್ಸಿ, ಎಂ.ಎಸ್ಸಿ, ಗ್ರಾಜುಯೇಷನ್, ಎಂಬಿಎ, ಬಿ.ಇ/ಬಿ.ಟೆಕ್ ಮತ್ತು ಬಿಬಿಎಂ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದೆಂದು ತಿಳಿಸಿದೆ.

ವಯೋಮಿತಿ:

ಪ್ರಕಟನೆಯಲ್ಲಿ ತಿಳಿಸಿರುವಂತೆ ಸಿಎಂಟಿಐ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ

ವೇತನ:

ಪ್ರಾಜೆಕ್ಟ್ ಫೆಲೋ ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,000/- ರಿಂದ 30,000/-ರೂ ವೇತನವನ್ನು ಸಿಗಲಿದೆಅರ್ಜಿ ಶುಲ್ಕ: ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ ಹೇಗೆ?

ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್​ಸೈಟ್​ಗೆ https://cmti-india.net/  ಪ್ರಕಟನೆಯನ್ನು ಓದಿ . ನಂತರ  ಕೇಳಲಾಗಿರುವ ಅಗತ್ಯ ದಾಖಲೆಗಳನ್ನು ಲಗತ್ತಿಸಿ recruitment.cmti@nic.in ವಿಳಾಸಕ್ಕೆ ಮೇಲ್ ಮಾಡಬೇಕು.

ಅಕ್ಟೋಬರ್ 23,2020ರೊಳಗೆ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published by: Harshith AS
First published: October 11, 2020, 7:05 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading