ಜಮ್ಮು (ಮೇ 3): ಉತ್ತರ ಕಾಶ್ಮೀರದ ಹಂದ್ವಾರದಲ್ಲಿ ಭಾನುವಾರ ಮುಂಜಾನೆ ಉಗ್ರರ ಜೊತೆ ನಡೆದ ಎನ್ಕೌಂಟರ್ನಲ್ಲಿ ಕರ್ನಲ್, ಮೇಜರ್, ಇಬ್ಬರು ಸೈನಿಕರು ಹಾಗೂ ಸಬ್ ಇನ್ಸ್ಪೆಕ್ಟರ್ ಹುತಾತ್ಮರಾಗಿದ್ದಾರೆ. ಎನ್ಕೌಂಟರ್ ವೇಳೆ ಇಬ್ಬರು ಉಗ್ರರನ್ನು ಹೊಡೆದುರುಳಿಸಲು ಪೊಲೀಸರು ಯಶಸ್ವಿಯಾಗಿದ್ದಾರೆ.
ಕುಪ್ವಾರಾ ಜಿಲ್ಲೆಯ ಹಂದ್ವಾರದ ಮನೆಯೊಂದರಲ್ಲಿ ಉಗ್ರರು ನಾಗರಿಕರನ್ನು ಒತ್ತೆಯಾಳುಗಳನ್ನಾಗಿ ಇಟ್ಟುಕೊಂಡ ಬಗ್ಗೆ ಸೇನೆಗೆ ಮಾಹಿತಿ ದೊರೆತಿತ್ತು. ಹೀಗಾಗಿ ಜಮ್ಮು-ಕಾಶ್ಮೀರ ಪೊಲೀಸರ ಜೊತೆಗೂಡಿ ಸೇನೆ ಜಂಟಿ ಕಾರ್ಯಾಚರಣೆಗೆ ಇಳಿದಿತ್ತು. ಈ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.
ಉಗ್ರರ ಬಳಿ ಆಧುನಿಕ ಶಸ್ತ್ರಾಸ್ತ್ರ ಇತ್ತು ಎನ್ನಲಾಗಿದೆ. ಹೀಗಾಗಿ ದೊಡ್ಡ ಮಟ್ಟದ ದಾಳಿ ನಡೆದಿದೆ. ಈ ವೇಳೆ ಇಬ್ಬರು ಉಗ್ರರು ಕೂಡ ಹತರಾಗಿದ್ದಾರೆ. ಒತ್ತೆಯಾಳಾಗಿದ್ದವರನ್ನು ರಕ್ಷಣೆ ಮಾಡಲಾಗಿದೆ.
ಇದನ್ನೂ ಓದಿ: ಹುಬ್ಬಳ್ಳಿ ಪ್ರಕರಣ - ದೇಶದ್ರೋಹಿಗಳನ್ನು ಎನ್ ಕೌಂಟರ್ ಮಾಡಬೇಕು ; ಪ್ರಮೋದ್ ಮುತಾಲಿಕ್ ಕಿಡಿ
ಶನಿವಾರ ಕಾರ್ಯಾಚರಣೆಗೆಂದು ತೆರಳಿದ್ದ ಎರಡು ಸೇನಾ ಅಧಿಕಾರಿಗಳು ಸೇರಿ ಒಟ್ಟು ಐದು ಜನರು ಕಾಣೆಯಾಗಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ. ಶನಿವಾರ ಸಂಜೆಯಿಂದಲೇ ಇವರ ಜೊತೆಗಿನ ಸಂಪರ್ಕ ಕಡಿತಗೊಂಡಿದೆ. ಇವರಿಗಾಗಿ ಹುಡುಕಾಟ ಕೂಡ ನಡೆದಿದೆ. ಸದ್ಯ, ಈ ಭಾಗದಲ್ಲಿ ಬಿಗಿ ಭದ್ರತೆ ನಿಯೋಜನೆ ಮಾಡಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ