ನವ ದೆಹಲಿ (ಫೆಬ್ರವರಿ 06) ಹಿಂದೂ ದೇವತೆಗಳನ್ನು ಅಪಮಾನಿಸುವ ಮೂಲಕ ಹಿಂದೂಗಳ ಭಾವನೆಗೆ ಧಕ್ಕೆ ತಂದಿದ್ದಾರೆ. ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರನ್ನೂ ಅವಮಾನಿಸಿದ್ದಾರೆ ಎಂಬ ಆರೋಪದ ಮೇಲೆ ಜನವರಿ 1 ರಂದು ಖ್ಯಾತ ಸ್ಟಾಂಡಪ್ ಕಾಮಿಡಿಯನ್ ಮುನಾವರ್ ಫಾರೂಕಿ ಅವರನ್ನು ಪೊಲೀಸರು ಬಂಧಿಸಿದ್ದರು. ಅಲ್ಲದೆ, ಕಲಂ 298, 269 , 188 ಮತ್ತು 34 ಈ ಸೆಕ್ಷನ್ಗಳಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಕೆಳ ಹಂತದ ನ್ಯಾಯಾಲಯ ಮತ್ತು ಹೈಕೋರ್ಟ್ನಲ್ಲಿ ಮುನಾವರ್ ಫಾರೂಕಿ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರವೇ ಜಾಮೀನು ಮಂಜೂರು ಮಾಡಿದೆ. ಆದರೆ, ಈವರೆಗೆ ಅವರನ್ನು ಜೈಲಿನಿಂದ ಬಿಡುಗಡೆ ಮಾಡಿಲ್ಲ. ಹೀಗಾಗಿ ಸುಪ್ರೀಂ ಕೋರ್ಟ್ ಮಧ್ಯಪ್ರದೇಶ ಸರ್ಕಾರಕ್ಕೆ ನೊಟೀಸ್ ನೀಡಿದೆ. ಆದರೆ, ಜೈಲು ಅಧಿಕಾರಿಗಳು ಮಾತ್ರ ತಾವು ಯಾವುದೇ ಆದೇಶವನ್ನು ಸ್ವೀಕರಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇಂದೋರ್ ಬಿಜೆಪಿ ಶಾಸಕಿ ಮಾಲಿನಿ ಗೌರ್ ಅವರ ಮಗ ಏಕ್ಲವ್ಯ ಗೌರ್ ನೀಡಿದ ದೂರಿನ ಆಧಾರದ ಮೇಲೆ, ಹಿಂದೂ ಧರ್ಮದ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪದಡಿಯಲ್ಲಿ ಮುಂಬೈ ಮೂಲದ ಖ್ಯಾತ ಹಾಸ್ಯನಟ(ಕಾಮಿಡಿಯನ್) ಮುನಾವರ್ ಫಾರೂಕಿ ಮತ್ತು ಅವರ ನಾಲ್ವರು ಸಹಚರರನ್ನು ಜನವರಿ 1 ರಂದು ಬಂಧಿಸಲಾಗಿತ್ತು. ಆದರೆ, ಬಂಧಿಸಿ ಎರಡು ದಿನಗಳಾದ ಬಳಿಕ, ಹಿಂದೂ ಧರ್ಮದ ಭಾವನೆಗಳನ್ನು ಅವಮಾನಿಸಿದ್ದಾರೆ ಎಂದು ಹೇಳಿರುವ ಯಾವುದೇ ವಿಡಿಯೋ ಸಾಕ್ಷ್ಯಾಧಾರಗಳಿಲ್ಲ ಎಂದು ಇಂದೋರ್ ಪೊಲೀಸರು ತಿಳಿಸಿದ್ದರು.
ಆದರೂ ಸಹ ಅವರು ಇತರ ನಾಲ್ವರು ಸಹ ಆರೋಪಿಗಳೊಂದಿಗೆ ಜನವರಿ 2 ರಿಂದ ಜೈಲಿನಲ್ಲಿದ್ದಾರೆ. ಆದರೆ, ಈ ಸಂಬಂಧ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್, ಹಾಸ್ಯ ನಟನನ್ನು ಬಂಧಿಸುವಾಗ ಯಾವುದೇ ಸರಿಯಾದ ಕಾರ್ಯವಿಧಾನವನ್ನು ಅನುಸರಿಸಲಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿತ್ತು.
It is nearly 30 hours since the order was passed. Yet, the order is being undermined by the MP police and jail authorities.
Is all this happening with or without the knowledge of the MP Chief Minister?
— P. Chidambaram (@PChidambaram_IN) February 6, 2021
ಇದನ್ನೂ ಓದಿ: ಹಿಂದೂ ದೇವತೆಗಳ ಅಪಹಾಸ್ಯ ಪ್ರಕರಣ; ಬಂಧಿತ ಹಾಸ್ಯನಟ ಮುನಾವರ್ ವಿರುದ್ಧ ಪುರಾವೆಗಳಿಲ್ಲ ಎಂದ ಪೊಲೀಸರು
ಆದರೆ, ಸುಪ್ರೀಂ ಕೋರ್ಟ್ ಆದೇಶಕ್ಕೆ ಪ್ರತಿಕ್ರಿಯಿಸಿರುವ ಮಧ್ಯಪ್ರದೇಶ ಸಚಿವ ವಿಶ್ವಾಸ್ ಸಾರಂಗ್, "ಜಾಮೀನು ಒಂದು ವಾಡಿಕೆಯ ಪ್ರಕ್ರಿಯೆ, ಇದರರ್ಥ ಅವನು ನಿರಪರಾಧಿ ಎಂದು ಅರ್ಥವಲ್ಲ. ನಮ್ಮ ಪೊಲೀಸರು ಯಾವುದೇ ತಪ್ಪು ಮಾಡಿಲ್ಲ. ಹಿಂದೂಗಳನ್ನು ಗೇಲಿ ಮಾಡಲು ಯಾರಿಗೂ ಏಕೆ ಅವಕಾಶ ನೀಡಬೇಕು?" ಎಂದಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ