ನವದೆಹಲಿ (ಆ. 5): ದೆಹಲಿಯಲ್ಲಿ ಅತ್ಯಾಚಾರಕ್ಕೆ ಒಳಗಾದ 9 ವರ್ಷದ ಬಾಲಕಿಯ ಪೋಷಕರ ಫೋಟೋವನ್ನು ಹಂಚಿಕೊಂಡು ಸಂತ್ರಸ್ತೆಯ ಕುರಿತ ಮಾಹಿತಿಯನ್ನು ಬಹಿರಂಗ ಪಡಿಸಿದ್ದಾರೆ ಎಂಬ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದೆಹಲಿಯ ವಕೀಲ ವಿನೀತ್ ಜಿಂದಾಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ರಾಹುಲ್ ಗಾಂಧಿ ಅವರ ಈ ವರ್ತನೆ ಅಪರಾಧವಾಗಿದೆ. ಅಲ್ಲದೇ ಪೋಕ್ಸೊ ಕಾಯ್ದೆ ಸೆಕ್ಷನ್ 23, ಬಾಲ ನ್ಯಾಯ 74, 228ಎ ಭಾರತೀಯ ದಂಡ ಸಂಹಿತೆ ಅಡಿಯಲ್ಲಿ ಅಪರಾಧವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಸಂತ್ರಸ್ತ ಕುಟುಂಬದ ಮಾಹಿತಿ ಬಿಟ್ಟುಕೊಟ್ಟ ಹಿನ್ನಲೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್ಸಿಪಿಸಿಆರ್) ಕೂಡ ಮಂಗಳವಾರ ಟ್ವಿಟರ್ ಇಂಡಿಯಾಗೆ ನೋಟಿಸ್ ಜಾರಿ ಮಾಡಿತ್ತು. ಅಲ್ಲದೇ ಪೋಕ್ಸೊ ಕಾಯ್ದೆಯನ್ನು ಉಲ್ಲಂಘಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಟ್ವಿಟ್ ಮಾಡಿದ್ದು, ಅವರ ವಿರುದ್ಧ ಕ್ರಮ ಕೈ ಗೊಳ್ಳುವಂತಎ ಎನ್ಸಿಪಿಸಿಆರ್ ಟ್ವಿಟರ್ ಇಂಡಿಯಾಕ್ಕೆ ತಿಳಿಸಿತ್ತು. ಈ ಘಟನೆ ಬೆನ್ನಲ್ಲೇ ಇದೀಗ ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಾಗಿದೆ.
ಈ ಪ್ರಕರಣ ಕುರಿತು ಟ್ವೀಟ್ ಮಾಡಿರುವ ಎನ್ಸಿಪಿಸಿಆರ್ನ ಅಧ್ಯಕ್ಷೆ ಪ್ರಿಯಾಂಕ್ ಕನೂಂಗೊ, ಈ ಕುರಿತು ಅರಿವಿಗೆ ಬರುತ್ತಿದ್ದಂತೆ ಮಕ್ಕಳ ಹಕ್ಕುಗಳ ಸಂಸ್ಥೆಯು ಕ್ರಮ ಕೈ ಗೊಂಡಿದೆ, ಸಂತ್ರಸ್ತೆ ಪೋಷಕರ ಚಿತ್ರವನ್ನು ಹಂಚಿಕೊಳ್ಳುವ ಮೂಲಕ ರಾಹುಲ್ ಗಾಂಧಿ ನಿಯಮ ಉಲ್ಲಂಘಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಪಶ್ಚಿಮ ದೆಹಲಿಯಲ್ಲಿ ಸ್ಮಶಾನದಲ್ಲಿ ಕೆಲಸ ಮಾಡುತ್ತಿದ್ದ ಮೂವರು ಮತ್ತು ಧಾರ್ಮಿಕ ಕ್ಷೇತ್ರದಲ್ಲಿದ್ದ ವ್ಯಕ್ತಿ 9 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿದ್ದರು. ಈ ಘಟನೆ ಕುರಿತು ಪೊಲೀಸರು ಸೆಕ್ಷನ್ 302, 376, 506 ಅಡಿ ಮತ್ತು ಪೋಸ್ಕೊ, ಎಸ್ ಸಿ/ ಎಸ್ ಟಿ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದರು.
ಇದನ್ನು ಓದಿ: ಬಾಲಕಿ ಮೇಲೆ ಅತ್ಯಾಚಾರ, ಕೊಲೆ; ಅಂತ್ಯಸಂಸ್ಕಾರವನ್ನೂ ಮುಗಿಸಿದ ದುಷ್ಕರ್ಮಿಗಳು
ದೆಹಲಿ ಕಂಟೋನ್ಮೆಂಟ್ ಏರಿಯಾದ ನಂಗಲ್ ಗ್ರಾಮದಲ್ಲಿ ನಡೆದಿದೆ. ಪೊಲೀಸರ ಪ್ರಕಾರ, ಬಾಲಕಿ ಭಾನುವಾರ ಸಂಜೆ 5.30 ಕ್ಕೆ ಮನೆಯಿಂದ ಹೊರ ಬಂದಿದ್ದಳು. ಸ್ಮಶಾನದಲ್ಲಿರುವ ವಾಟರ್ ಕೂಲರ್ನಿಂದ ಕೋಲ್ಡ್ ವಾಟರ್ ತರಲು ಹೋಗಿದ್ದ ಬಾಲಕಿ ಮನೆಗೆ ವಾಪಸ್ ಬರಲಿಲ್ಲ. ಸುಮಾರು 6 ಗಂಟೆ ಸಮಯದಲ್ಲಿ ಸ್ಮಶಾನದ ಅರ್ಚಕ ರಾಧೆ ಶ್ಯಾಮ್ ಹಾಗೂ ಮತ್ತಿಬ್ಬರು ವ್ಯಕ್ತಿಗಳು ಬಾಲಕಿಯ ತಾಯಿಯನ್ನು ಕರೆದು ರುದ್ರಭೂಮಿಯಲ್ಲಿ ಬಿದ್ದಿದ್ದ ಅಪ್ರಾಪ್ತೆಯ ಶವವನ್ನು ತೋರಿಸಿದರು. ಜೊತೆಗೆ ವಾಟರ್ ಕೂಲರ್ನಿಂದ ಕುಡಿಯುವ ನೀರನ್ನು ತೆಗೆದುಕೊಳ್ಳುವಾಗ ಕರೆಂಟ್ ಶಾಕ್ ಹೊಡೆದು ಸಾವನ್ನಪ್ಪಿದ್ದಾಳೆ ಎಂದು ಹೇಳಿದರು. ಮಗಳ ಸಾವಿನ ಬಗ್ಗೆ ತಾಯಿ ಅನುಮಾನಿಸಿ, ಪೊಲೀಸರಿಗೆ ಕರೆ ಮಾಡಲು ಮುಂದಾದಗ, ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದರೆ, ಮರಣೋತ್ತರ ಪರೀಕ್ಷೆ ನಡೆಸುತ್ತಾರೆ. ಆಗ ಬಾಲಕಿಯ ಅಂಗಾಂಗಗಳನ್ನು ಕದಿಯುತ್ತಾರೆ ಎಂದು ತಾಯಿಗೆ ಹೆದರಿಸಿ ಬಾಲಕಿ ಅಂತ್ಯ ಸಂಸ್ಕಾರ ನಡೆಸಿದ್ದರು.
ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ ಅತ್ಯಾಚಾರಕ್ಕೆ ಒಳಾಗದ ಬಾಲಕಿಯ ಕುಟುಂಬಸ್ಥರನ್ನು ರಾಹುಲ್ ಗಾಂಧಿ ಭೇಟಿ ಮಾಡಿದ್ದರು. ಈ ವೇಳೆ ಕುಟುಂಬಕ್ಕೆ ಸಾಂತ್ವನ ಹೇಳಿದ ರಾಹುಲ್ ಗಾಂಧಿ ಎಲ್ಲಾ ರೀತಿಯ ಬೆಂಬಲವನ್ನು ಕುಟುಂಬಕ್ಕೆ ನೀಡುವ ಭರವಸೆ ನೀಡಿದ್ದರು. ಈ ವೇಳೆ ಕುಟುಂಬಸ್ಥರೊಂದಿಗೆ ಇದ್ದ ರಾಹುಲ್ ಗಾಂಧಿ ಫೋಟೋವನ್ನು ಕಾಂಗ್ರೆಸ್ ನಾಯಕ ಟ್ವಿಟರ್ನಲ್ಲಿ ಹಂಚಿಕೊಂಡಿದ್ದರು.
ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ