ದೇಶಾದ್ಯಂತ ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ಆಕ್ರೋಶ: ಸುಪ್ರೀಂಕೋರ್ಟ್​ ಮೆಟ್ಟಿಲೇರಿದ ಕಾಂಗ್ರೆಸ್​​​

ದೇಶದ ಪೌರತ್ವ ಹುಟ್ಟು ಮತ್ತು ವಂಶಪಾರಂಪರಿಕವಾಗಿ ಬರುತ್ತದೆ ಎಂದು ಸಂವಿಧಾನ ಹೇಳುತ್ತದೆ. ಆದರೆ, ಭಾರತೀಯ ಜನತಾ ಪಕ್ಷ ಸರ್ಕಾರ ಸ್ವೇಚ್ಛೆ ಉದ್ದೇಶದಿಂದ ಈ ಮಸೂದೆ ಜಾರಿಗೆ ಮುಂದಾಗಿದೆ ಎಂದು ಕಾಂಗ್ರೆಸ್​​ ಆರೋಪಿಸಿತ್ತು.


Updated:December 13, 2019, 5:56 PM IST
ದೇಶಾದ್ಯಂತ ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ಆಕ್ರೋಶ: ಸುಪ್ರೀಂಕೋರ್ಟ್​ ಮೆಟ್ಟಿಲೇರಿದ ಕಾಂಗ್ರೆಸ್​​​
ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ.
  • Share this:
ನವದೆಹಲಿ(ಡಿ.13): ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ನೂತನ ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ಕಾಂಗ್ರೆಸ್​​ ಸುಪ್ರೀಂಕೋರ್ಟ್​ ಮೆಟ್ಟಿಲೇರಿದೆ. ಈ ಪೌರತ್ವ ತಿದ್ದುಪಡಿ ಮಸೂದೆಯೂ ಸಂವಿಧಾನದ 14ನೇ ವಿಧಿಯ ಉಲ್ಲಂಘನೆ ಮಾಡಿದೆ ಎಂದು ಸುಪ್ರೀಂಕೋರ್ಟ್​ಗೆ ಹೇಳಿದೆ. "ದೇಶದ ಪ್ರತಿಯೊಬ್ಬ ಪ್ರಜೆಗೂ ಕಾನೂನಿನಡಿ ಸಮಾನ ರಕ್ಷಣೆ ನೀಡಬೇಕೆಂದು ಭಾರತ ಸಂವಿಧಾನದ 14ನೇ ವಿಧಿಯಲ್ಲಿ ಹೇಳಲಾಗಿದೆ. ಆದರೀಗ ಕೇಂದ್ರ ಸರ್ಕಾರ ಜಾರಿಗೆ ಮುಂದಾದ ಪೌರತ್ವದ ತಿದ್ದುಪಡಿ ಮಸೂದೆಯೂ ಇದಕ್ಕೆ ವ್ಯತಿರಿಕ್ತವಾಗಿದೆ" ಎಂದು ನ್ಯಾಯಪೀಠದ ಮುಂದೆ ಕಾಂಗ್ರೆಸ್​​ ಪ್ರಸ್ತಾಪಿಸಿದೆ.

ಈ ಹಿಂದೆಯೇ ಪೌರತ್ವ ತಿದ್ದುಪಡಿ ಮಸೂದೆಯೂ ಕಪಟತನದಿಂದ ಕೂಡಿದೆ ಎಂದು ಕಾಂಗ್ರೆಸ್​ ಅಭಿಪ್ರಾಯಪಟ್ಟಿತ್ತು. ದೇಶದ ಪೌರತ್ವ ಹುಟ್ಟು ಮತ್ತು ವಂಶಪಾರಂಪರಿಕವಾಗಿ ಬರುತ್ತದೆ ಎಂದು ಸಂವಿಧಾನ ಹೇಳುತ್ತದೆ. ಆದರೆ, ಭಾರತೀಯ ಜನತಾ ಪಕ್ಷ ಸರ್ಕಾರ ಸ್ವೇಚ್ಛೆ ಉದ್ದೇಶದಿಂದ ಈ ಮಸೂದೆ ಜಾರಿಗೆ ಮುಂದಾಗಿದೆ ಎಂದು ಕಾಂಗ್ರೆಸ್​​ ಆರೋಪಿಸಿತ್ತು. ಅಲ್ಲದೇ ಅಸಮಾನತೆ, ಅಕ್ರಮದಿಂದ ಕೂಡಿರುವ ಈ ಮಸೂದೆ ಸಂವಿಧಾನದ 14ನೇ ವಿಧಿ ಉಲ್ಲಂಘನೆ ಮಾಡಿದೆ. ಇದೊಂದು ಅಸಂವಿಧಾನಿಕ ಮಸೂದೆ. ಇದರ ವಿರುದ್ಧ ಸುಪ್ರೀಂಕೋರ್ಟ್​ಗೆ ಹೋಗಲಿದ್ದೇವೆ ಎಂದಿತ್ತು ಕಾಂಗ್ರೆಸ್.

​​ ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಜನ ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಅಸ್ಸಾಂನಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ. ಇಲ್ಲಿನ ಡಿಸ್ಪುರ್‌ ಜಂತ್ ಭವನದ ಬಳಿ ಪ್ರತಿಭಟನಾಕಾರರು ಬಸ್‌ಗೆ ಬೆಂಕಿ ಹಚ್ಚಿ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತ್ರಿಪುರಾ ಹಾಗೂ ಅಸ್ಸಾಂನಲ್ಲಿ ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ, ಪರಿಸ್ಥಿತಿ ನಿಯಂತ್ರಿಸಲು ಸೇನೆಯನ್ನು ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ: ನಿರ್ಭಯಾ ಕೇಸ್​​: ಮರಣದಂಡನೆ ಪಶ್ನಿಸಿ ಅತ್ಯಾಚಾರಿ ಸಲ್ಲಿಸಿದ ಮೇಲ್ಮನವಿ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಸಂತ್ರಸ್ತೆ ತಾಯಿ

ಅಸ್ಸಾಂ, ಗುವಾಹಟಿ, ತ್ರಿಪುರಾಗಳಲ್ಲಿ ಪರಿಸ್ಥಿತಿ ಬಿಗಡಾಯಿಸುತ್ತಿರುವುದನ್ನು ಮನಗಂಡ ಕೇಂದ್ರ ಸರ್ಕಾರ ಬೆಳಗ್ಗೆ 140 ಯೋಧರನ್ನು ಕಳುಹಿಸಿತ್ತು. ಆದರೆ ಹಿಂಸಾಚಾರ ಭುಗಿಲೆದ್ದ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ನಿಯಂತ್ರಿಸಲು ಐದು ಸಾವಿರ ಯೋಧರನ್ನು ಕಳುಹಿಸಲಾಗಿದೆ ಎಂದು ವರದಿ ವಿವರಿಸಿದೆ. ಅಸ್ಸಾಂ ಸರ್ಕಾರ ಈಗಾಗಲೇ ಮೊಬೈಲ್ ಹಾಗೂ ಇಂಟರ್ನೆಟ್ ಸೇವೆಯನ್ನು ಸುಮಾರು ಹತ್ತು ಜಿಲ್ಲೆಗಳಲ್ಲಿ ಕಡಿತಗೊಳಿಸಿದೆ. ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಹಲವಾರು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ವರದಿ ತಿಳಿಸಿದೆ.
Published by: Ganesh Nachikethu
First published: December 13, 2019, 5:43 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading