• Home
  • »
  • News
  • »
  • national-international
  • »
  • Rajiv Gandhi Assassins Release: ರಾಜೀವ್ ಹಂತಕರ ಬಿಡುಗಡೆಗೆ ಕಾಂಗ್ರೆಸ್‌ ವಿರೋಧ, ಸೋನಿಯಾ ನಿಲುವಿಗೆ ಸಿಂಘ್ವಿ ಆಕ್ಷೇಪ!

Rajiv Gandhi Assassins Release: ರಾಜೀವ್ ಹಂತಕರ ಬಿಡುಗಡೆಗೆ ಕಾಂಗ್ರೆಸ್‌ ವಿರೋಧ, ಸೋನಿಯಾ ನಿಲುವಿಗೆ ಸಿಂಘ್ವಿ ಆಕ್ಷೇಪ!

ಅಭಿಷೇಕ್ ಮನು ಸಿಂಘ್ವಿ-ಸೋನಿಯಾ ಗಾಂಧಿ (ಸಂಗ್ರಹ ಚಿತ್ರ)

ಅಭಿಷೇಕ್ ಮನು ಸಿಂಘ್ವಿ-ಸೋನಿಯಾ ಗಾಂಧಿ (ಸಂಗ್ರಹ ಚಿತ್ರ)

"ರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆ ಮಾಡುವ ಸುಪ್ರೀಂ ಕೋರ್ಟ್ ನಿರ್ಧಾರವು ರಾಷ್ಟ್ರದ ಆತ್ಮಸಾಕ್ಷಿಯನ್ನು ಆಘಾತಗೊಳಿಸಿದೆ" ಎಂದು ಹಿರಿಯ ವಕೀಲ ಮತ್ತು ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ ಹೇಳಿದ್ದಾರೆ.

  • News18 Kannada
  • Last Updated :
  • New Delhi, India
  • Share this:

ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ (former Prime Minister Rajiv Gandhi) ಹಂತಕರ (assassins) ಬಿಡುಗಡೆಗೆ ಸುಪ್ರೀಂ ಕೋರ್ಟ್ (Supreme Court) ಮಹತ್ವದ ಆದೇಶ ನೀಡಿದೆ. ಈ ಹಿಂದೆ ತಮಿಳುನಾಡು ಸರ್ಕಾರ (Tamil Nadu government) ಕೂಡಾ ರಾಜೀವ್ ಗಾಂಧಿ ಹಂತಕರ ಬಿಡುಗಡೆಗೆ ರಾಜ್ಯಪಾಲರಿಗೆ (governor) ಶಿಫಾರಸು ಮಾಡಿತ್ತು. ಇದನ್ನು ಸುಪ್ರೀಂ ಕೋರ್ಟ್ ಪರಿಗಣಿಸಿದ್ದು, ಅವರ ಬಿಡುಗಡೆಗೆ ಆದೇಶಿಸಿದೆ. ಮೇ ತಿಂಗಳಲ್ಲಿ ಮತ್ತೋರ್ವ ಆರೋಪಿ ಪೇರಾರಿವಾಳನ್‌ನನ್ನು (Perarivalan) ಸುಪ್ರೀಂ ಕೋರ್ಟ್ ಬಿಡುಗಡೆ ಮಾಡಿತ್ತು.ಇದೀಗ 6 ಮಂದಿಯನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ಪ್ರಕರಣದಲ್ಲಿ ನಳಿನಿ ಶ್ರೀಹರನ್ (Nalini Sri Haran) ಸೇರಿದಂತೆ ಐವರು ತಮಿಳುನಾಡಿನ ಜೈಲಿನಲ್ಲಿ ಜೀವಾವಧಿ ಶಿಕ್ಷೆ (life sentence) ಅನುಭವಿಸುತ್ತಿದ್ದಾರೆ. ಇವರಿಗೆಲ್ಲ ಇದೀಗ ರಿಲೀಫ್ ಸಿಕ್ಕಿದೆ. ಇನ್ನು ಸುಪ್ರೀಂಕೋರ್ಟ್ ನಿರ್ಧಾರದ ವಿರುದ್ಧ ಕಾಂಗ್ರೆಸ್ (Congress) ಕಿಡಿಕಾರಿದೆ. ನಳಿನಿ ಶ್ರೀಹರನ್ ಮತ್ತು ಇತರೆ ಐವರು ಅಪರಾಧಿಗಳ ಬಿಡುಗಡೆ ವಿಚಾರದಲ್ಲಿ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ (Sonia Gandhi) ಅವರ ನಿಲುವನ್ನು ಒಪ್ಪುವುದಿಲ್ಲ ಎಂದು ಕಾಂಗ್ರೆಸ್ ಹೇಳಿದೆ.


ರಾಜೀವ್ ಹಂತಕರ ಬಿಡುಗಡೆ ಆದೇಶಕ್ಕೆ ಕಾಂಗ್ರೆಸ್ ವಿರೋಧ


ರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆ ಮಾಡುವ ಸುಪ್ರೀಂ ಕೋರ್ಟ್ ನಿರ್ಧಾರವು"ರಾಷ್ಟ್ರದ ಆತ್ಮಸಾಕ್ಷಿಯನ್ನು ಆಘಾತಗೊಳಿಸಿದೆ" ಎಂದು ಹಿರಿಯ ವಕೀಲ ಮತ್ತು ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ ಹೇಳಿದ್ದಾರೆ. ನಮ್ಮ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಮೇಲೆ ಕ್ರೂರ, ಪೂರ್ವ ಯೋಜಿತ ಮತ್ತು ಹೇಯ ಹತ್ಯೆಯನ್ನು ನಡೆಸಿದ ಆರು ಅಪರಾಧಿಗಳನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ನಡೆ ದೇಶದ ಆತ್ಮಸಾಕ್ಷಿಯನ್ನು ಬೆಚ್ಚಿ ಬೀಳಿಸಿದೆ ಅಂತ ಅವರು ಆತಂಕ ವ್ಯಕ್ತಪಡಿಸಿದ್ದಾರೆ.




“ಡಿಎಂಕೆ ನಿಲುವೇ ಬೇರೆ, ಕಾಂಗ್ರೆಸ್‌ ನಿಲುವೇ ಬೇರೆ”


ತಮಿಳುನಾಡಿನಲ್ಲಿ ತನ್ನ ರಾಜಕೀಯ ಮಿತ್ರ ಪಕ್ಷವಾದ ಡಿಎಂಕೆ ತೆಗೆದುಕೊಂಡ ನಿಲುವಿನ ಬಗ್ಗೆ ಮಾತನಾಡಿದ ಸಿಂಘ್ವಿ, “ಕಾಂಗ್ರೆಸ್ ಪಕ್ಷ ಈ ವಿಷಯದಲ್ಲಿ ಸೋನಿಯಾ ಗಾಂಧಿಯವರೊಂದಿಗೆ ಭಿನ್ನಾಭಿಪ್ರಾಯ ಹೊಂದಿದೇವೆ. ಈ ವಿಷಯದಲ್ಲಿ ಕಾಂಗ್ರೆಸ್ ಪಕ್ಷದ ನಿಲುವು ಮತ್ತು ತಮಿಳುನಾಡಿನ ನಿಲುವು ಯಾವಾಗಲೂ ವಿಭಿನ್ನವಾಗಿದೆ. ನಮ್ಮ ನಿಲುವು ವರ್ಷಗಳಿಂದ ಈ ವಿಷಯದಲ್ಲಿ ಸ್ಪಷ್ಟ ಮತ್ತು ಸ್ಥಿರವಾಗಿದೆ ಎಂದಿದ್ದಾರೆ.


ಸೋನಿಯಾ ಗಾಂಧಿ ನಿಲುವಿಗೆ ಕಾಂಗ್ರೆಸ್ ವಿರೋಧ!


"ಈ ಪ್ರಕರಣದಲ್ಲಿ, ಕೇಂದ್ರ ಸರ್ಕಾರದ ಅಭಿಪ್ರಾಯವನ್ನೇ ಕಾಂಗ್ರೆಸ್ ಕೂಡ ಹೊಂದಿದೆ. ಈ ವಿಚಾರದಲ್ಲಿ ಸೋನಿಯಾ ಗಾಂಧಿ ಅವರ ಅಭಿಪ್ರಾಯವನ್ನು ಪಕ್ಷ ಒಪ್ಪುವುದಿಲ್ಲ, ಎಂದಿಗೂ ಆ ನಿಲುವನ್ನು ಒಪ್ಪಿಲ್ಲ. ಈ ಅಭಿಪ್ರಾಯವನ್ನು ವರ್ಷಗಳಿಂದಲೂ ಸ್ಪಷ್ಟಪಡಿಸುತ್ತಾ ಬಂದಿದ್ದೇವೆ" ಎಂದು ಕಾಂಗ್ರೆಸ್ ವಕ್ತಾರ ಅಭಿಷೇಕ್ ಮನು ಸಿಂಘ್ವಿ ಹೇಳಿದ್ದಾರೆ.


ಯಾರ್ಯಾರ ಬಿಡುಗಡೆಗೆ ಸುಪ್ರೀಂ ಆದೇಶ?


ರಾಜೀವ್ ಗಾಂಧಿ ಹಂತಕರಾದ ನಳಿನಿ ಶ್ರೀ ಹರನ್ ಅಲ್ಲದೇ, ಶ್ರೀಹರನ್, ಸಂತನ್, ಮುರುಗನ್, ರಾಬರ್ಟ್ ಪಾಯಸ್ ಮತ್ತು ರವಿಚಂದ್ರನ್ ಜೈಲಿನಲ್ಲಿದ್ದಾರೆ. ಇವರ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ನಳಿನಿ ಶ್ರೀಹರನ್ ಜೈಲಿನಿಂದ ಬಿಡುಗಡೆ ಸುದ್ದಿ ತಿಳಿಯುತ್ತಿದ್ದಂತೆಯೇ ಅವರ ಸ್ವಗ್ರಾಮ ವೆಲ್ಲೂರಿನ ನಿವಾಸದ ಮುಂದೆ ಕುಟುಂಬಸ್ಥರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂತೋಷ ವ್ಯಕ್ತಪಡಿಸಿದ್ದಾರೆ.


ರಾಜ್ಯಪಾಲರಿಗೆ ಶಿಫಾರಸು ಮಾಡಿದ್ದ ತಮಿಳುನಾಡು


2018ರ ಸೆಪ್ಟೆಂಬರ್ 9ರಂದು ನಡೆದ ಸಂಪುಟ ಸಭೆಯಲ್ಲಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ 7 ಅಪರಾಧಿಗಳ ಕ್ಷಮಾದಾನ ಅರ್ಜಿಗಳನ್ನು ಪರಿಗಣಿಸಲಾಗಿತ್ತು. ಸಂವಿಧಾನದ ಆರ್ಟಿಕಲ್ 161ರ ಅಡಿಯಲ್ಲಿ ನೀಡಲಾದ ಅಧಿಕಾರವನ್ನು ಅನ್ವಯಿಸಿ ಅವರ ಜೀವಾವಧಿ ಶಿಕ್ಷೆಯನ್ನು ಹಿಂತೆಗೆದುಕೊಳ್ಳಲು ರಾಜ್ಯಪಾಲರಿಗೆ ಶಿಫಾರಸು ಮಾಡಲು ನಿರ್ಧರಿಸಲಾಗಿತ್ತು. 1991ರ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ನಳಿನಿ ಅವರಲ್ಲದೆ, ಶ್ರೀಹರನ್, ಸಂತನ್, ಮುರುಗನ್, ರಾಬರ್ಟ್ ಪಾಯಸ್ ಮತ್ತು ರವಿಚಂದ್ರನ್ ಅವರು ಜೈಲು ಪಾಲಾಗಿದ್ದರು.

Published by:Annappa Achari
First published: