Sonia Gandhi: ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಅನಾರೋಗ್ಯದ ಹಿನ್ನೆಲೆಯಲ್ಲಿ ಕಾಂಗ್ರೆಸ್ (Congress) ನಾಯಕಿ ಸೋನಿಯಾ ಗಾಂಧಿ (Sonia Gandhi) ಅವರನ್ನು ಚಿಕಿತ್ಸೆಗಾಗಿ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ (Ganga Ram Hospital) ದಾಖಲಿಸಲಾಗಿದೆ.

ಸೋನಿಯಾ ಗಾಂಧಿ

ಸೋನಿಯಾ ಗಾಂಧಿ

  • Share this:
ನವದೆಹಲಿ (ಜೂನ್ 12): ಅನಾರೋಗ್ಯದ ಹಿನ್ನೆಲೆಯಲ್ಲಿ ಕಾಂಗ್ರೆಸ್ (Congress) ನಾಯಕಿ ಸೋನಿಯಾ ಗಾಂಧಿ (Sonia Gandhi) ಅವರನ್ನು ಚಿಕಿತ್ಸೆಗಾಗಿ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ (Ganga Ram Hospital) ದಾಖಲಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಕೆಲವು ದಿನಗಳ ಹಿಂದೆ ಸೋನಿಯಾ ಗಾಂಧಿಗೆ ಕೊರೋನಾ (Corona) ಸೋಂಕು ತಗುಲಿತ್ತು ಎಂದು ಹೇಳಲಾಗಿದೆ. ಕೋವಿಡ್ (Covid 19) ಸಂಬಂಧಿತ ಸಮಸ್ಯೆಗಳಿಂದಾಗಿ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 75 ವರ್ಷದ ಸೋನಿಯಾ ಗಾಂಧಿ ಭಾನುವಾರ ದೆಹಲಿಯ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಸದ್ಯ ಸೋನಿಯಾ ಗಾಂಧಿ ಆಸ್ಪತ್ರೆಯಲ್ಲಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಟ್ವಿಟರ್​ ಮೂಲಕ ಮಾಹಿತಿ ನೀಡಿದ್ದಾರೆ.

ಸೋನಿಯಾ ಗಾಂಧಿ ಆರೋಗ್ಯ ಸ್ಥಿರ:

ಇನ್ನು, ಸೋನಿಯಾ ಗಾಂಧಿ ಆರೋಗ್ಯದಲ್ಲಿ ಸ್ಥಿರವಾಗಿದೆ. ಸದ್ಯ ಅವರ ಆರೈಕೆಯಲ್ಲಿ ತಜ್ಞ ವೈದ್ಯರ ತಂಡವಿದ್ದು, ಆರೋಗ್ಯದ ಬಗ್ಗೆ ನಿಗಾವಹಿಸಿದೆ ಎಂದು ಕಾಂಗ್ರೆಸ್​ ಪಕ್ಷದ ಮೂಲಗಳು ತಿಳಿಸಿದೆ. ಕೋವಿಡ್ ಸಂಬಂಧಿತ ಸಮಸ್ಯೆಯಿಂದಾಗಿ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸೋನಿಯಾ ಗಾಂಧಿ ಆರೋಗ್ಯ ಚೇತರಿಕೆಗಾಗಿ ಪ್ರಾರ್ಥಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಪ್ರಕಟಣೆ ಹೇಳಿದೆ. ಅಲ್ಲದೇ ಸೋನಿಯಾ ಅವರ ಅರೋಗ್ಯದ ಬಗ್ಗೆ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಟ್ವಿಟರ್​ ಮೂಲಕ ಮಾಹಿತಿ ನೀಡಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣ:

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೋನಿಯಾ ಗಾಂಧಿ ಅವರಿಗೆ ಇಡಿ ಜೂನ್ 8ರಂದು ನೋಟಿಸ್ ಕಳುಹಿಸಿತ್ತು. ಆದರೆ ಸೋನಿಯಾ ಗಾಂಧಿಗೆ ಕೊರೋನಾ ಸೋಂಕು ತಗುಲಿದೆ. ಹೀಗಾಗಿ ಸೋನಿಯಾ ಗಾಂಧಿ ಅವರು ಇಡಿ ಕಚೇರಿಗೆ ವಿಚಾರಣೆಗೆ ತೆರಳಲು ಸಾಧ್ಯವಾಗಲಿಲ್ಲ. ನಂತರ ಜೂನ್ 23 ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ ಅವರಿಗೆ ನೋಟಿಸ್ ಕಳುಹಿಸಿತ್ತು. ಆದರೆ ಈ ವೇಳೆ ಸೋನಿಯಾ ಇಡಿಗೆ ಕಾಲಾವಕಾಶ ಕೇಳಿದ್ದರು. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್ ಗಾಂಧಿಗೂ ಇಡಿ ಸಮನ್ಸ್ ಜಾರಿ ಮಾಡಿದೆ. ಜೂನ್ 13 ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ ರಾಹುಲ್ ಗಾಂಧಿಗೆ ಸೂಚಿಸಿದೆ.

ಇದನ್ನೂ ಓದಿ: National Herald ಪ್ರಕರಣದಲ್ಲಿ ಸೋನಿಯಾ, ರಾಹುಲ್​​ಗೆ ಸಮನ್ಸ್ ಖಂಡಿಸಿ ನಾಳೆ ಕಾಂಗ್ರೆಸ್ ಪಾದಯಾತ್ರೆ

ನಾಳೆ ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ:

ವಿಚಾರಣೆಗೆ ಹಾಜರಾಗುವಂತೆ ಇಡಿ ರಾಹುಲ್ ಗಾಂಧಿಗೆ ಸಮನ್ಸ್ ನೀಡಿದ್ದು, ಕಾಂಗ್ರೆಸ್ ಪಕ್ಷವು ಪ್ರತಿಭಟನೆ ನಡೆಸಲಿದೆ. ಕಾಂಗ್ರೆಸ್‌ನ ಹಿರಿಯ ಪದಾಧಿಕಾರಿಗಳ ಸಭೆ ಇತ್ತೀಚೆಗೆ ನಡೆದಿದ್ದು, ಸಭೆಯಲ್ಲಿ ಮಾರ್ಚ್ 13ರ ಆಂದೋಲನದ ಕುರಿತು ಚರ್ಚಿಸಲಾಗಿದೆ ಎಂದು ತಿಳಿದುಬಂದಿದೆ. ಜೂನ್ 13 ರಂದು ದೇಶಾದ್ಯಂತ ಇಡಿ ಕಚೇರಿಗಳ ಮುಂದೆ ಕಾಂಗ್ರೆಸ್ ಆಂದೋಲನವನ್ನು ಆಯೋಜಿಸಲಿದೆ. ದೆಹಲಿಯ ಇಡಿ ಕಚೇರಿಯಲ್ಲೂ ಮೋರ್ಚಾ ನಡೆಯಲಿದೆ.

ಇದನ್ನೂ ಓದಿ: MP Anil Firojiya: ತೂಕ ಇಳಿಸಿದರೆ ಅಭಿವೃದ್ಧಿ ಕಾರ್ಯಗಳಿಗೆ 1 ಸಾವಿರ ಕೋಟಿ, ಗಡ್ಕರಿ ಮಾತಿಗೆ 15 ಕೆಜಿ ತೂಕ ಇಳಿಸಿದ ಸಂಸದ

ಮಾರ್ಗ ಮಧ್ಯಯೇ ತಡೆಯುವ ಸಾಧ್ಯತೆ:

ಬೆಳಿಗ್ಗೆ 9ಗಂಟೆಗೆ ಅಕ್ಬರ್ ರಸ್ತೆಯಲ್ಲಿರುವ ಎಐಸಿಸಿಯಲ್ಲಿ ಜಮಾವಣೆಗೊಳ್ಳಲಿರುವ ಕಾಂಗ್ರೆಸ್ ನಾಯಕರು ಬಳಿಕ ಜಾರಿ ನಿರ್ದೇಶನಾಲಯದ ಕಚೇರಿಗೆ ಮೆರವಣಿಗೆ ಮೂಲಕ ತೆರಳುವರು ಎಂದು ಪಕ್ಷದ ಮೂಲಗಳು ತಿಳಿಸಿವೆ. ಮಾರ್ಗ ಮಧ್ಯೆ ಪೊಲೀಸರು ಕಾಂಗ್ರೆಸ್ ನಾಯಕರನ್ನು ತಡೆದು ಬಂಧಿಸುವ ಸಾಧ್ಯತೆ ಇದೆ.
Published by:shrikrishna bhat
First published: