Congress Protest: ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ, ರಾಹುಲ್ ಗಾಂಧಿ ವಶಕ್ಕೆ ಪಡೆದ ಪೊಲೀಸರು

ಇಂದು ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ರಣಕಹಳೆ ಊದಿದರು. ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ, ರಾಹುಲ್ ಗಾಂಧಿ, ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಸೇರಿದಂತೆ ಹಲವು ಪ್ರಮುಖರು ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಸೋನಿಯಾ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ

ಸೋನಿಯಾ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ

  • Share this:
ನವದೆಹಲಿ: ಬೆಲೆ ಏರಿಕೆ (Price Hike) ವಿರೋಧಿಸಿ ಕೇಂದ್ರ ಸರ್ಕಾರದ (Central Government) ವಿರುದ್ಧ ಕಾಂಗ್ರೆಸ್ ನಾಯಕರು (Congress Leaders) ಪ್ರತಿಭಟನೆ (Protest) ಮಾಡುತ್ತಿದ್ದಾರೆ. ದೇಶದಲ್ಲಿ ನಿರಂತರವಾಗಿ ಬೆಲೆ ಏರಿಕೆ, ನಿರುದ್ಯೋಗ (Unemployment) ಹೆಚ್ಚಳವಾಗುತ್ತಿದೆ ಅಂತ ಆರೋಪಿಸಿ ಕಾಂಗ್ರೆಸ್ ಪ್ರತಿಭಟನೆ ಕೈಗೊಂಡಿದೆ. ಎಐಸಿಸಿ ಅಧ್ಯಕ್ಷೆ (AICC President) ಸೋನಿಯಾಗಾಂಧಿ (Sonia Gandhi) ನೇತೃತ್ವದಲ್ಲಿ ಪಾರ್ಲಿಮೆಂಟ್ (Parliament) ಎದುರು ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ಮತ್ತೊಂದೆಡೆ ರಾಹುಲ್ ಗಾಂಧಿ (Rahul Gandhi) ನೇತೃತ್ವದಲ್ಲಿ ರಾಜಭವನ ಚಲೋ (Rajbhavan Chalo) ಹೋರಾಟ ನಡೆಯಿತು. ಈ ವೇಳೆ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಪ್ರತಿಭಟನಾಕಾರನ್ನು ಪೊಲೀಸರು ವಶಕ್ಕೆ ಪಡೆದರು.

ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದ ಕಾಂಗ್ರೆಸ್

ದೇಶದಲ್ಲಿ ಬೆಲೆ ಏರಿಕೆ, ನಿರುದ್ಯೋಗ ಹೆಚ್ಚಳವಾಗುತ್ತಿದೆ ಅಂತ ಆರೋಪಿಸಿ ಹಾಗೂ ಜಿಎಸ್‌ಟಿ ಹೇರಿ ಜನಸಾಮಾನ್ಯರನ್ನು ಸಂಕಷ್ಟಕ್ಕೆ ದೂಡಲಾಗಿದೆ ಅಂತ ಆರೋಪಿಸಿ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ರಣಕಹಳೆ ಊದಿದರು. ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ, ರಾಹುಲ್ ಗಾಂಧಿ, ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಸೇರಿದಂತೆ ಹಲವು ಪ್ರಮುಖರು ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.





ಪ್ರತಿಭಟನೆಯಲ್ಲಿ ಭಾಗಿಯಾದ ಸೋನಿಯಾ ಗಾಂಧಿ

ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಸಂಸದರು ಇಂದು ಸಂಸತ್ತಿಗೆ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದರು. ಸಂಸತ್ತಿನ ಗೇಟ್ ನಂಬರ್ 1 ಹೊರಗೆ ಪಕ್ಷದ ಮಹಿಳಾ ಸಂಸದರೊಂದಿಗೆ ಸೋನಿಯಾ ಗಾಂಧಿ ಬ್ಯಾನರ್ ಹಿಡಿದು ನಿಂತು, ಅಗತ್ಯ ವಸ್ತುಗಳ ಮೇಲಿನ ಜಿಎಸ್‌ಟಿ ಹೆಚ್ಚಳವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ವಿರೋಧ ಪಕ್ಷದ ಸಂಸದರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಇದನ್ನೂ ಓದಿ: Siddaramotsava: ಸಿದ್ದರಾಮೋತ್ಸವದ ವಿರುದ್ಧ ಕಾಂಗ್ರೆಸ್ ಹೈಕಮಾಂಡ್‌ಗೆ ದೂರು! ಸಿದ್ದು ಮೇಲೆ ಸಿಡುಕು ಯಾರಿಗೆ?

ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು

ಇನ್ನು ಪ್ರಧಾನಿ ಮನೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಪ್ರತಿಭಟನಾಕಾರರು ಯತ್ನಿಸಿದರು. ಈ ವೇಳೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ರಾಹುಲ್ ಗಾಂಧಿ, ಶಶಿ ತರೂರ್ ಸೇರಿದಂತೆ ಹಲವು ಕಾಂಗ್ರೆಸ್ ಸಂಸದರನ್ನು ಪೊಲೀಸರು ವಶಕ್ಕೆ ಪಡೆದರು. ಸಂಸತ್ತಿನ ಹೊರಗೆ ಧರಣಿ ನಡೆಸಿದ್ದಕ್ಕಾಗಿ ರಾಹುಲ್ ಗಾಂಧಿ ಮತ್ತು ಇತರ ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆಯಲಾಗಿದೆ. ಸಂಸತ್ತಿನ ಹೊರಗೆ ಧರಣಿ ನಡೆಸಿದ ಸಂಸದರೊಂದಿಗೆ ರಾಹುಲ್ ಗಾಂಧಿ ರಾಷ್ಟ್ರಪತಿ ಭವನದತ್ತ ಹೊರಟಿದ್ದರು. ಈ ವೇಳೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಅಧೀರ್ ರಂಜನ್ ಚೌಧರಿ ಮತ್ತು ಕೆ.ಸಿ ವೇಣುಗೋಪಾಲ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಇನ್ನು ಕಾಂಗ್ರೆಸ್ ಪ್ರತಿಭಟನೆಗೆ ಅನುಮತಿ ನೀಡಿರಲಿಲ್ಲ ಅಂತ ಪೊಲೀಸರು ಹೇಳಿದ್ದಾರೆ.

ನಮ್ಮ ಮೇಲೆ ಹಲ್ಲೆಯಾಗಿದೆ ಎಂದ ಸಂಸದರು

ಹಣದುಬ್ಬರ ಮತ್ತು ಬೆಲೆ ಏರಿಕೆಯ ವಿಷಯವನ್ನು ಪ್ರಸ್ತಾಪಿಸಲು ಎಲ್ಲಾ ಕಾಂಗ್ರೆಸ್ ಸಂಸದರು ರಾಷ್ಟ್ರಪತಿ ಭವನದ ಕಡೆಗೆ ಮೆರವಣಿಗೆ ನಡೆಸುತ್ತಿದ್ದರು ಆದರೆ ಅವರು ನಮ್ಮನ್ನು ಇಲ್ಲಿಂದ ಮುಂದೆ ಹೋಗಲು ಬಿಡುತ್ತಿಲ್ಲ. ಜನರ ಸಮಸ್ಯೆಗಳನ್ನು ಎತ್ತುವುದು ನಮ್ಮ ಕೆಲಸ... ಕೆಲವು ಸಂಸದರನ್ನು ವಶಕ್ಕೆ ಪಡೆದಿದ್ದಾರೆ, ಥಳಿಸಿದ್ದಾರೆ ಅಂತ ಕಾಂಗ್ರೆಸ್ ಸಂಸದರು ಆರೋಪಿಸಿದ್ರು.

ಇದನ್ನೂ ಓದಿ: Monkeypox: ಅಮೆರಿಕದಲ್ಲಿ ಜೋರಾಯ್ತು ಮಂಕಿಪಾಕ್ಸ್ ಅಬ್ಬರ! ಹೆಲ್ತ್ ಎಮೆರ್ಜೆನ್ಸಿ ಘೋಷಿಸಿದ ಸರ್ಕಾರ

ಸುದ್ದಿಗೋಷ್ಠಿ ನಡೆಸಿ ಆರೋಪಿಸಿದ್ದ ರಾಹುಲ್ ಗಾಂಧಿ

ಇದಕ್ಕೂ ಮುನ್ನ ಸುದ್ದಿಗೋಷ್ಠಿ ನಡೆಸಿದ್ದ ರಾಹುಲ್ ಗಾಂಧಿ, ಭಾರತದಲ್ಲಿ ಸರ್ವಾಧಿಕಾರಿ ಆಡಳಿತ ಆರಂಭವಾಗಿದೆ ಅಂತ ಆರೋಪಿಸಿದ್ದರು. ಮೋದಿ ಸರ್ಕಾರವು ಪ್ರತಿಪಕ್ಷ ನಾಯಕರ ವಿರುದ್ಧ ಪ್ರತಿ ಕೇಂದ್ರೀಯ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ. ಇದನ್ನು ನೋಡಿದರೆ ಭಾರತವು "ಸರ್ವಾಧಿಕಾರದ ಆಕ್ರಮಣವನ್ನು" ನೋಡುತ್ತಿದೆ ಅಂತ ಅನುಸುತ್ತಿದೆ ಅಂತ ಗುಡುಗಿದ್ದರು.
Published by:Annappa Achari
First published: