ದೆಹಲಿ ಹಿಂಸಾಚಾರವನ್ನು ಕಾಂಗ್ರೆಸ್​, ಆಪ್​ ರಾಜಕೀಯವಾಗಿ ಬಳಸಿಕೊಳ್ಳುತ್ತಿವೆ; ಕೇಂದ್ರ ಸಚಿವ ಜಾವಡೇಕರ್​ ವಾಗ್ದಾಳಿ

ದೆಹಲಿಯಲ್ಲಿ ಶಾಂತಿಯನ್ನು ಸ್ಥಾಪಿಸುವ ನಿಟ್ಟಿನಲ್ಲಿ ಆಮ್ ಆದ್ಮಿ ಪಕ್ಷ ಕೆಲಸ ಮಾಡಬೇಕಿತ್ತು. ಆದರೆ, ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ದೆಹಲಿ ಅಸೆಂಬ್ಲಿಯಲ್ಲಿ ಗಲಭೆಗೆ ಒಳಗಾದವರನ್ನು ಧರ್ಮದಿಂದ ಗುರುತಿಸುವ ಕೆಲಸ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್​ ಕಿಡಿಕಾರಿದ್ದಾರೆ.

MAshok Kumar | news18-kannada
Updated:February 28, 2020, 7:12 AM IST
ದೆಹಲಿ ಹಿಂಸಾಚಾರವನ್ನು ಕಾಂಗ್ರೆಸ್​, ಆಪ್​ ರಾಜಕೀಯವಾಗಿ ಬಳಸಿಕೊಳ್ಳುತ್ತಿವೆ; ಕೇಂದ್ರ ಸಚಿವ ಜಾವಡೇಕರ್​ ವಾಗ್ದಾಳಿ
ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್​.
  • Share this:
ನವ ದೆಹಲಿ (ಫೆಬ್ರವರಿ 27); ಗಲಭೆ ಪೀಡಿತ ದೆಹಲಿಯಲ್ಲಿ ಶಾಂತಿ ಸ್ಥಾಪಿಸುವ ಸಲುವಾಗಿ ಬಿಜೆಪಿ ಪ್ರಯತ್ನಿಸುತ್ತಿದ್ದರೆ, ಈ ಹಿಂಸಾಚಾರವನ್ನು ವಿರೋಧ ಪಕ್ಷವಾದ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ ರಾಜಕೀಯವಾಗಿ ಬಳಸಿಕೊಳ್ಳುತ್ತಿವೆ ಎಂದು ಬಿಜೆಪಿ ಮುಖಂಡ ಮತ್ತು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಆರೋಪಿಸಿದ್ದಾರೆ.

ದೆಹಲಿ ಹಿಂಸಾಚಾರದ ಕುರಿತು ವಿರೋಧ ಪಕ್ಷಗಳ ವಿರುದ್ಧ ಕಿಡಿಕಾರಿರುವ ಅವರು, “ಕಾಂಗ್ರೆಸ್ ಮತ್ತು ಆಪ್ ಕಳೆದ ಎರಡು ತಿಂಗಳಿನಿಂದ ಶಾಂತಿಯನ್ನು ಕದಡುವ ಕೆಲಸ ಮಾಡುತ್ತಿವೆ. ಡಿಸೆಂಬರ್ ತಿಂಗಳಲ್ಲಿ ಕಾಂಗ್ರೆಸ್ ಹಂಗಾಮಿ ರಾಷ್ಟ್ರಾಧ್ಯಕ್ಷೆ ಸೋನಿಯಾ ಗಾಂಧಿ ಕೇಂದ್ರದ ವಿರುದ್ದ ಅಂತಿಮ ಹೋರಾಟ ಎಂದು ಕರೆ ನೀಡಿದ್ದರು. ಈ ಹೋರಾಟ ಇಂದು ಹಿಂಸಾರೂಪ ತಳೆದಿದೆ.

ಇನ್ನೂ ದೆಹಲಿಯಲ್ಲಿ ಶಾಂತಿಯನ್ನು ಸ್ಥಾಪಿಸುವ ನಿಟ್ಟಿನಲ್ಲಿ ಆಮ್ ಆದ್ಮಿ ಪಕ್ಷ ಕೆಲಸ ಮಾಡಬೇಕಿತ್ತು. ಆದರೆ, ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ದೆಹಲಿ ಅಸೆಂಬ್ಲಿಯಲ್ಲಿ ಗಲಭೆಗೆ ಒಳಗಾದವರನ್ನು ಧರ್ಮದಿಂದ ಗುರುತಿಸಿದ್ದಾರೆ.

ಇಂತಹ ಸಂದರ್ಭದಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಜವಾಬ್ದಾರಿಯಿಂದ ವರ್ತಿಸಬೇಕು ಆದರೆ, ಕಾಂಗ್ರೆಸ್ ಮತ್ತು ಆಪ್ ದೆಹಲಿ ಹಿಂಸಾಚಾರವನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿರುವುದು ದುರಾದೃಷ್ಟಕರ" ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ : ದೆಹಲಿ ಹಿಂಸಾಚಾರ; ಬೇಜವಾಬ್ದಾರಿ ಹೇಳಿಕೆ ನೀಡದಂತೆ ಇಸ್ಲಾಮಿಕ್ ಸಂಘಟನೆಗಳಿಗೆ ಸೂಚನೆ ನೀಡಿದ ಕೇಂದ್ರ ಸರ್ಕಾರ
First published: February 28, 2020, 7:12 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading