Punjab Elections: Arvind Kejriwal ಕುಟಿಲ ನೀತಿಗಳ ಬಗ್ಗೆ ಶ್ರೀನಿವಾಸ್ ಬಿ.ವಿ. ಕಿಡಿ

ಪಂಜಾಬ್ ವಿಧಾನಸಭಾ ಚುನಾವಣೆಯನ್ನು ಗೆದ್ದೇ ಗೆಲ್ಲಬೇಕೆಂದು ನಿರ್ಧರಿಸಿರುವ ಎಐಸಿಸಿಯ ಮಾಜಿ ಅಧ್ಯಕ್ಷ ಹಾಗೂ ಸಂಸದ ರಾಹುಲ್ ಗಾಂಧಿ  ಹಾಗೂ ಅವರ ಸಹೋದರಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಇಂದು ಪಂಜಾಬಿನಲ್ಲಿ ಪ್ರಚಾರ ನಡೆಸಿದ್ದಾರೆ.‌

ಬಿವಿ ಶ್ರೀನಿವಾಸ್​​​

ಬಿವಿ ಶ್ರೀನಿವಾಸ್​​​

  • Share this:
ನವದೆಹಲಿ, ಫೆ. 17: ಪಂಜಾಬ್ ವಿಧಾನಸಭಾ ಚುನಾವಣೆಯನ್ನು (Punjab Assembly Elections) ಗೆದ್ದೇ ಗೆಲ್ಲುವುದಾಗಿ ಕಾಂಗ್ರೆಸ್ (Congress) ವಿಶ್ವಾಸ ಇಟ್ಟುಕೊಂಡಿದೆ. ಈ ಹಿನ್ನೆಲೆಯಲ್ಲಿ ಪಂಜಾಬಿನಲ್ಲಿ ತೀವ್ರ ಸ್ಪರ್ಧೆ ನೀಡುತ್ತಿರುವ ಆಮ್ ಅದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್​​ ಕೇಜ್ರಿವಾಲ್ (Delhi CM Arvind Kejriwal) ಅವರ ಕುಟಿಲ ನೀತಿಗಳ ಬಗ್ಗೆ ಅಖಿಲ ಭಾರತ ಯುವ ಕಾಂಗ್ರೆಸ್ ಅಧ್ಯಕ್ಷರೂ ಆದ ಕನ್ನಡಿಗ ಶ್ರೀನಿವಾಸ್ ಬಿವಿ (All India Youth Congress President Srinivas BV) ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅರವಿಂದ ಕೇಜ್ರಿವಾಲ್ ವಿರುದ್ಧ ಪ್ರತಿಭಟನೆ
ಅರವಿಂದ್ ಕೇಜ್ರಿವಾಲ್ ಅವರ ಪಿತೂರಿ ಚಿಂತನೆ ಮತ್ತು ಪ್ರತ್ಯೇಕತಾವಾದಿ ನೀತಿಯ ವಿರುದ್ಧ ಗುರುವಾರ ಭಾರತೀಯ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿವಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.‌ ಈ ವೇಳೆ 'ಅರವಿಂದ್ ಕೇಜ್ರಿವಾಲ್ ಅವರ ಬಗ್ಗೆ ಆಮ್ ಆದ್ಮಿ ಪಕ್ಷದ ಸಂಸ್ಥಾಪಕ ಸದಸ್ಯ ಕುಮಾರ್ ವಿಶ್ವಾಸ್ ಬಯಲಿಗೆಳೆದಿದ್ದಾರೆ. ದೇಶದ ಭದ್ರತೆಗೆ ಸಂಬಂಧಿಸಿದ ಆಘಾತಕಾರಿ, ಸಂವೇದನಾಶೀಲ, ಸಂಗತಿಗಳನ್ನು ಕುಮಾರ್ ವಿಶ್ವಾಸ್ ದೇಶದ ಮುಂದೆ ಇಟ್ಟಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರು ಯಾವುದೇ ರೀತಿಯಿಂದಲಾದರೂ ಸರಿ ಅಧಿಕಾರವನ್ನು ಪಡೆಯಲು ಬಯಸುತ್ತಾರೆ ಎಂದು ಹೇಳಿದ್ದಾರೆ. ಕೇಜ್ರಿವಾಲ್ ಅವರಿಗೆ ದೇಶಕ್ಕಿಂತ ಅಧಿಕಾರ ದೊಡ್ಡದು ಎಂಬುದನ್ನು ಉಲ್ಲೇಖಿಸಿದ್ದಾರೆ. ಇದನ್ನು ಜನತೆ ಅರ್ಥ' ಮಾಡಿಕೊಳ್ಳಬೇಕು' ಎಂದು ಶ್ರೀನಿವಾಸ್ ಹೇಳಿದ್ದಾರೆ.

ಅರವಿಂದ ಕೇಜ್ರಿವಾಲ್ ಗೆ ಶ್ರೀನಿವಾಸ್ ಪ್ರಶ್ನೆ
ಅರವಿಂದ್ ಕೇಜ್ರಿವಾಲ್ ಯಾವುದೇ ಸಂದರ್ಭದಲ್ಲಿ ಪಂಜಾಬ್ ಅನ್ನು ಪ್ರತ್ಯೇಕಿಸುವ ಮೂಲಕ ಅಥವಾ ಪ್ರತ್ಯೇಕತಾವಾದಿಗಳೊಂದಿಗೆ ಕೈ ಜೋಡಿಸುವ ಮೂಲಕ ದೇಶವನ್ನು ಒಡೆಯುವ ಶಕ್ತಿಗಳೊಂದಿಗೆ ಶಾಮೀಲಾಗಿ ಪ್ರಧಾನಿಯಾಗಲು ಬಯಸಿದ್ದರು. ಆದರೀಗ ಅರವಿಂದ್ ಕೇಜ್ರಿವಾಲ್ ಅವರೇ ಪಂಜಾಬ್ ಮುಖ್ಯಮಂತ್ರಿಯಾಗಲು ಬಯಸುತ್ತಾರೆಯೇ ಎಂದು ಅವರು ಕೇಳಿದರು. ಅರವಿಂದ್ ಕೇಜ್ರಿವಾಲ್ ಅಧಿಕಾರ ಪಡೆಯಲು ಪ್ರತ್ಯೇಕತಾವಾದ ಮತ್ತು ಖಲಿಸ್ತಾನ್‌ಗೆ ಸಂಬಂಧಿಸಿದ ಜನರ ಪರವಾಗಿದ್ದಾರೆಯೇ? ಅಂತಹ ಪ್ರತ್ಯೇಕತಾವಾದಿ ಸಂಘಟನೆಗಳು ಮತ್ತು ಗುಂಪುಗಳೊಂದಿಗೆ ಅರವಿಂದ್ ಕೇಜ್ರಿವಾಲ್ ಯಾವುದೇ ಸಂಬಂಧವನ್ನು ಹೊಂದಿದ್ದಾರೆಯೇ? ಎಂದು ಶ್ರೀನಿವಾಸ್ ಪ್ರಶ್ನೆ ಮಾಡಿದ್ದಾರೆ.

ಇದನ್ನು ಓದಿ: Manmohan Singh vs Modi: ಎಲ್ಲದಕ್ಕೂ ದೇಶದ ಮೊದಲ ಪ್ರಧಾನಿ ನೆಹರೂ ಅವರನ್ನೇ ದೂರುತ್ತಿದ್ದಾರೆ; ಡಾ. ಮನಮೋಹನ್ ಸಿಂಗ್ ಆಕ್ಷೇಪ

ಆಮ್ ಆದ್ಮಿ ಪಕ್ಷ ಸರಿ ಇಲ್ಲ
ಭಾರತೀಯ ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಮಾಧ್ಯಮ ಉಸ್ತುವಾರಿ ರಾಹುಲ್ ರಾವ್ (Rahul Rao) ಅವರು ಎಎಪಿಗೆ ಸರಿ ಇಲ್ಲ. ಎಎಪಿಯ ಸಂಸ್ಥಾಪಕ ಕುಮಾರ್ ವಿಶ್ವಾಸ್ ಜಿ ಅವರು ಹೇಳುತ್ತಿರುವುದು ಇದನ್ನೇ. ಪ್ರತಿಯೊಬ್ಬ ಪಂಜಾಬಿ ಮತ್ತು ಪ್ರತಿಯೊಬ್ಬ ದೇಶವಾಸಿಯೂ ಎಎಪಿಯ ಕರಾಳ ಉದ್ದೇಶಗಳ ಬಗ್ಗೆ ತಿಳಿದಿದ್ದಾರೆ. ಪಂಜಾಬ್‌ನ ಜನರು ಅರವಿಂದ ಕೇಜ್ರಿವಾಲ್ ಅವರನ್ನು ಎಂದಿಗೂ ಒಪ್ಪುವುದಿಲ್ಲ ಎಂದರು. ಭಾರತೀಯ ಯುವ ಕಾಂಗ್ರೆಸ್‌ನ ರಾಷ್ಟ್ರೀಯ ರಾಷ್ಟ್ರೀಯ ಕಾರ್ಯದರ್ಶಿ ಮತ್ತು ದೆಹಲಿ ಸಹ ಉಸ್ತುವಾರಿ ಖುಷ್ಬೂ ಶರ್ಮಾ ಸೇರಿದಂತೆ ಅನೇಕ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಇದನ್ನು ಓದಿ: ಪ್ರಧಾನಿ ವಿರುದ್ಧ ಸರಣಿ ವಾಗ್ದಾಳಿ ನಡೆಸಿದ Telangana CMಗೆ ಹುಟ್ಟುಹಬ್ಬದ ಶುಭ ಕೋರಿದ Modi

ರಾಹುಲ್ ಗಾಂಧಿ - ಪ್ರಿಯಾಂಕಾ ಗಾಂಧಿ ಪ್ರಚಾರ
ಪಂಜಾಬ್ ವಿಧಾನಸಭಾ ಚುನಾವಣೆಯನ್ನು ಗೆದ್ದೇ ಗೆಲ್ಲಬೇಕೆಂದು ನಿರ್ಧರಿಸಿರುವ ಎಐಸಿಸಿಯ ಮಾಜಿ ಅಧ್ಯಕ್ಷ ಹಾಗೂ ಸಂಸದ ರಾಹುಲ್ ಗಾಂಧಿ  ಹಾಗೂ ಅವರ ಸಹೋದರಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಇಂದು ಪಂಜಾಬಿನಲ್ಲಿ ಪ್ರಚಾರ ನಡೆಸಿದ್ದಾರೆ.‌ ರಾಹುಲ್ ಗಾಂಧಿ ಅವರು ಫತೇಘರ್ ಸಾಹಿಬ್ ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರೆ ಪ್ರಿಯಾಂಕಾ ಗಾಂಧಿ ಅವರು ಪಠಾಣ್ ಕೋಟ್ ಮತ್ತು ಲೂಧಿಯಾನ ಜಿಲ್ಲೆಗಳಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು.

ಫೆಬ್ರವರಿ 20ರಂದು ಮತದಾನ
ಮೊದಲಿಗೆ ಪಂಜಾಬ್ ಚುನಾವಣೆ ಫೆಬ್ರವರಿ 14ಕ್ಕೆ ನಿಗದಿಯಾಗಿತ್ತು. ಪಂಜಾಬಿನಲ್ಲಿ ಗುರು ರವಿದಾಸ್​ ಜಯಂತಿ ಅತ್ಯಂತ ದೊಡ್ಡ ಆಚರಣೆ. ಗುರು ರವಿದಾಸ್​ ಜಯಂತಿ ಆಚರಣೆಗಾಗಿ ರಾಜ್ಯದ ಪರಿಶಿಷ್ಠ ಜಾತಿ ಸಮುದಾಯದ ಭಕ್ತರು ಫೆಬ್ರವರಿ 10 ರಿಂದ 16ರವರೆಗೆ ವಾರಣಾಸಿಗೆ ತೆರಳಲಿದ್ದಾರೆ. ಹೀಗೆ ಪ್ರವಾಸ ಕೈಗೊಳ್ಳುವ ಪರಿಶಿಷ್ಟ ಜಾತಿ ಸಮುದಾಯ ಮತದಾರರ ಸಂಖ್ಯೆ ಸುಮಾರು 20 ಪಕ್ಷ. ಪಂಜಾಬಿನಲ್ಲಿ ಶೇಕಡಾ 32ರಷ್ಟು ಪರಿಶಿಷ್ಟ ಜಾತಿಗಳ ಸಮುದಾಯದ ಮತದಾರರಿದ್ದು ಆ ಪೈಕಿ 20 ಲಕ್ಷದಷ್ಟು ಜನ ಮತ ಚಲಾಯಿಸಲು ಸಾಧ್ಯವಾಗುವುದಿಲ್ಲ. ಮತದಾನ ಮಾಡುವುದು ಅವರ ಸಾಂವಿಧಾನಿಕ ಹಕ್ಕು ಆದುದರಿಂದ ಮತದಾನದ ದಿನಾಂಕವನ್ನು ಮುಂದೂಡಬೇಕು ಎಂದು ಮುಖ್ಯಮಂತ್ರಿ ಚರಣಜಿತ್ ಚನ್ನಿ ಅವರು ಪತ್ರದ ಮೂಲಕ ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು. ಆ ಮನವಿಗೆ ಸ್ಪಂದಿಸಿರುವ ಚುನಾವಣಾ ಆಯೋಗ ಮತದಾನದ ದಿನಾಂಕವನ್ನು ಫೆಬ್ರವರಿ 14ರಿಂದ 20ಕ್ಕೆ ಮುಂದೂಡಿದೆ. ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.
Published by:Seema R
First published: