Congress President: ಕೌನ್ ಬನೇಗಾ ಕಾಂಗ್ರೆಸ್ ಪ್ರೆಸಿಡೆಂಟ್? ಅಕ್ಟೋಬರ್ 17ಕ್ಕೆ ಎಲೆಕ್ಷನ್

ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗೆ ಅಕ್ಟೋಬರ್ 17ರಂದು ಚುನಾವಣೆ ನಡೆಸಲು ನಿರ್ಧರಿಸಲಾಗಿದೆ. ಇನ್ನು ಅಕ್ಟೋಬರ್ 19ಕ್ಕೆ ಫಲಿತಾಂಶ ಘೋಷಣೆಯಾಗಲಿದೆ. ಇನ್ನು ರಾಹುಲ್ ಗಾಂಧಿ ಅವರು ಮತ್ತೊಮ್ಮೆ ಎಐಸಿಸಿ ಅಧ್ಯಕ್ಷರಾಗುವುದಿಲ್ಲ ಎಂದು ತಮ್ಮ ನಿಲುವಿನಲ್ಲಿ ಪಟ್ಟು ಹಿಡಿದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಯಾರಾಗುತ್ತಾರೆ ಕಾಂಗ್ರೆಸ್ ಅಧ್ಯಕ್ಷರು?

ಯಾರಾಗುತ್ತಾರೆ ಕಾಂಗ್ರೆಸ್ ಅಧ್ಯಕ್ಷರು?

  • Share this:
ನವದೆಹಲಿ: ಕಾಂಗ್ರೆಸ್‌ನಲ್ಲಿ (Congress) ಎಲ್ಲವೂ ಸರಿಯಿಲ್ಲ ಎನ್ನುವುದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ಘಟಾನುಘಟಿ ನಾಯಕರ (Senior Leader) ರಾಜೀನಾಮೆಯಿಂದಾಗಿ (Resign) ಅಲ್ಲೋಲ ಕಲ್ಲೋಲ ಉಂಟಾಗುತ್ತಿದೆ. ಚುನಾವಣೆಗಳಲ್ಲಿ (Election) ಸತತ ಸೋಲು, ರಾಜ್ಯಗಳ ಹಲವು ನಾಯಕರ ಮೇಲೆ ಇಡಿ ದಾಳಿ (ED Raid) ಸೇರಿದಂತೆ ಎಐಸಿಸಿಗೆ (AICC) ಹಲವು ಆಘಾತ ಎದುರಾಗುತ್ತಿದೆ. ಇನ್ನು ಮೊನ್ನೆಯಷ್ಟೇ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಗುಲಾಂ ನಬಿ ಆಜಾದ್ (Ghulam Nabi Azad) ಅವರು, ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಕಾಂಗ್ರೆಸ್ ಪಕ್ಷದ ಎಲ್ಲಾ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದರು. ಅದರ ಬೆನ್ನಲ್ಲೇ ತೆಲಂಗಾಣದ (Telangana) ಹಿರಿಯ ನಾಯಕ ಮತ್ತು ಮಾಜಿ ರಾಜ್ಯಸಭಾ ಸದಸ್ಯ ಎಂಎ ಖಾನ್ (M.A. Khan) ಕೂಡ ಪಕ್ಷಕ್ಕೆ ಗುಡ್ ಬೈ ಹೇಳಿದ್ದರು. ಈ ಎಲ್ಲಾ ಬೆಳವಣಿಗೆಗಳ ನಡುವೆ ಪಕ್ಷದ ಅಧ್ಯಕ್ಷರ (President) ಆಯ್ಕೆಗೆ ಕಾಂಗ್ರೆಸ್ ನಾಯಕರು ಮುಹೂರ್ತ ಫಿಕ್ಸ್ ಮಾಡಿದ್ದಾರೆ.

ಸೋನಿಯಾ ಗಾಂಧಿ ನೇತೃತ್ವದಲ್ಲಿ ನಡೆದ ಸಭೆ

ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ವರ್ಚುವಲ್ ಮೂಲಕ ಸಭೆ ನಡೆಯಿತು. ಈ ಸಭೆಯಲ್ಲಿ ಅಧ್ಯಕ್ಷರ ಆಯ್ಕೆ, ಹಿರಿಯ ನಾಯಕರ ರಾಜೀನಾಮೆ ಸೇರಿದಂತೆ ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಯಿತು. ಇನ್ನು ಇದೇ ಸಭೆಯಲ್ಲಿ ಹಲವು ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಕಾಂಗ್ರೆ,ಸ್ ಅಧ್ಯಕ್ಷರ ಚುನಾವಣೆಗೆ ಮುಹೂರ್ತ

ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗೆ ಅಕ್ಟೋಬರ್ 17ರಂದು ಚುನಾವಣೆ ನಡೆಸಲು ನಿರ್ಧರಿಸಲಾಗಿದೆ. ಇನ್ನು ಅಕ್ಟೋಬರ್ 19ಕ್ಕೆ ಫಲಿತಾಂಶ ಘೋಷಣೆಯಾಗಲಿದೆ. ಸೆಪ್ಟೆಂಬರ್ 22 ರಂದು ಅಧ್ಯಕ್ಷರ ಚುನಾವಣೆ ಕುರಿತು ನೋಟಿಫಿಕೇಶನ್ ಹೊರಡಿಸಲಿದೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಇಚ್ಚಿಸುವ ಅಭ್ಯರ್ಥಿಗಳು ಸೆಪ್ಟೆಂಬರ್ 24 ರಿಂದ 30 ರೊಳಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ. ಅಕ್ಟೋಬರ್ 8 ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕವಾಗಿದೆ.

ಇದನ್ನೂ ಓದಿ: MA Khan Quits Congress: ಗುಲಾಂ ನಬಿ ಆಜಾದ್ ಬೆನ್ನಲ್ಲೇ ಕೈಕೊಟ್ಟ ಮತ್ತೊಬ್ಬ ನಾಯಕ! ರಾಹುಲ್ ಗಾಂಧಿ ವಿರುದ್ಧ ಗರಂ

ಅಕ್ಟೋಬರ್ 17ರಂದು ಚುನಾವಣೆ, 19ಕ್ಕೆ ರಿಸಲ್ಟ್

ಇನ್ನು ಅಕ್ಟೋಬರ್ 17 ರಂದು ಚುನಾವಣೆ ನಡೆಯಲಿದೆ. ಬೆಳಗ್ಗೆ 100 ಗಂಟೆಯಿಂದ ಸಂಜೆ 4 ಗಂಟೆ ವರೆಗೆ ಮತದಾನ ನಡೆಯಲಿದೆ. ಇನ್ನು ಅಕ್ಟೋಬರ್ 19 ರಂದು ಬೆಳಕ್ಕೆ 10 ಗಂಟೆಗೆ ಮತ ಏಣಿಕೆ ನಡೆಸಿ ಫಲಿತಾಂಶ ಘೋಷಣೆಯಾಗಲಿದೆ.

ಹಲವು ನಾಯಕರು ಸಭೆಯಲ್ಲಿ ಭಾಗಿ

ಹಿರಿಯ ನಾಯಕ ಆನಂದ್ ಶರ್ಮಾ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಪಕ್ಷದ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ, ಕೆಸಿ ವೇಣುಗೋಪಾಲ್, ಮಾಜಿ ಕೇಂದ್ರ ಸಚಿವರಾದ ಜೈರಾಮ್ ರಮೇಶ್, ಮುಕುಲ್ ವಾಸ್ನಿಕ್ ಮತ್ತು ಪಿ ಚಿದಂಬರಂ ಮತ್ತು ರಾಜಸ್ಥಾನ ಮುಖ್ಯಮಂತ್ರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. ಇನ್ನು ಸೋನಿಯಾಗಾಂಧಿ ಜೊತೆ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಹಾಜರಿದ್ದರು.

ಇದನ್ನೂ ಓದಿ: Ghulam Nabi Azad: ಇಂದಿರಾ- ರಾಜೀವ್ ಆಪ್ತರಾಗಿದ್ದ ಆಜಾದ್ ರಾಹುಲ್​ ಗಾಂಧಿಗೆ 'ಅಪರಿಚಿತ' ಆಗಿದ್ದು ಹೇಗೆ?

ಸೋಲಿನ ಬಳಿಕ ರಾಜೀನಾಮೆ ನೀಡಿದ್ದ ರಾಹುಲ್ ಗಾಂಧಿ

2019 ರಲ್ಲಿ ನಡೆದ ಸಂಸತ್ತಿನ ಚುನಾವಣೆಯಲ್ಲಿ ಪಕ್ಷವು ಸತತ ಎರಡನೇ ಸೋಲನ್ನು ಅನುಭವಿಸಿದ ನಂತರ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹಂಗಾಮಿ ಅಧ್ಯಕ್ಷರಾಗಿ ಮತ್ತೆ ಪಕ್ಷದ ಆಡಳಿತವನ್ನು ವಹಿಸಿಕೊಂಡ ಸೋನಿಯಾ ಗಾಂಧಿ ಅವರು, ಆಗಸ್ಟ್ 2020 ರಲ್ಲಿ ಅನಾರೋಗ್ಯ ಮತ್ತು ಇತರೇ ಕಾರಣಗಳಿಂದ ರಾಜೀನಾಮೆ ನೀಡಲು ಮುಂದಾಗಿದ್ದರು. ಇನ್ನು ರಾಹುಲ್ ಗಾಂಧಿ ಅವರು ಮತ್ತೊಮ್ಮೆ ಎಐಸಿಸಿ ಅಧ್ಯಕ್ಷರಾಗುವುದಿಲ್ಲ ಎಂದು ತಮ್ಮ ನಿಲುವಿನಲ್ಲಿ ಪಟ್ಟು ಹಿಡಿದಿದ್ದಾರೆ ಎಂದು ಮೂಲಗಳು ತಿಳಿಸಿವೆ.
Published by:Annappa Achari
First published: