• Home
  • »
  • News
  • »
  • national-international
  • »
  • Congress Presidential Election: ಖರ್ಗೆ ವಿರುದ್ಧ ಶಶಿ ತರೂರ್ ಸ್ಪರ್ಧೆ; ಇಲ್ಲಿದೆ ಲೇಟೆಸ್ಟ್ ಅಪ್​ಡೇಟ್

Congress Presidential Election: ಖರ್ಗೆ ವಿರುದ್ಧ ಶಶಿ ತರೂರ್ ಸ್ಪರ್ಧೆ; ಇಲ್ಲಿದೆ ಲೇಟೆಸ್ಟ್ ಅಪ್​ಡೇಟ್

ಶಶಿ ತರೂರ್ v/s ಮಲ್ಲಿಕಾರ್ಜುನ್ ಖರ್ಗೆ

ಶಶಿ ತರೂರ್ v/s ಮಲ್ಲಿಕಾರ್ಜುನ್ ಖರ್ಗೆ

ಸಂಸದ ಮಲ್ಲಿಕಾರ್ಜುನ ಖರ್ಗೆ ನಾನು ಯಾರ ವಿರುದ್ಧವೂ ಹೋರಾಡುತ್ತಿಲ್ಲ. ಬದಲಿಗೆ ಕಾಂಗ್ರೆಸ್ ಪಕ್ಷದ ಸಿದ್ಧಾಂತಕ್ಕಾಗಿ ಹೋರಾಡುತ್ತಿದ್ದೇನೆ ಎಂದು ಸಮರ್ಥಿಸಿಕೊಂಡರು.

  • Share this:

ದೆಹಲಿ: ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವಂತೆ ತಮ್ಮ ನಾಯಕರು ಮತ್ತು ಸದಸ್ಯರು ತಮ್ಮಲ್ಲಿ ಮನವಿ ಮಾಡಿಕೊಂಡಿದ್ದಾರೆ ಎಂದು ಕಾಂಗ್ರೆಸ್ ನಾಯಕ, ಸಂಸದ ಮಲ್ಲಿಕಾರ್ಜುನ ಖರ್ಗೆ (Congress leader Mallikarjun Kharge)  ಹೇಳಿದ್ದಾರೆ. ಚುನಾವಣೆಯಲ್ಲಿ ಮತ್ತೊಬ್ಬ ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ (Shashi Tharoor) ವಿರುದ್ಧ ಖರ್ಗೆ ಕಣಕ್ಕಿಳಿದಿದ್ದಾರೆ. ತಮ್ಮ ಪ್ರತಿಸ್ಪರ್ಧಿ ಬಗ್ಗೆ ಪ್ರತಿಕ್ರಿಯಿಸಿದ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಒಮ್ಮತದ ಅಭ್ಯರ್ಥಿಯನ್ನು ಹೊಂದಿರುವುದು ಉತ್ತಮ ಎಂದು ನಾನು ಈಗಾಗಲೇ ಸಂಸದ, ಕಾಂಗ್ರೆಸ್ ಅಧ್ಯಕ್ಷ ಸ್ಥಾನದ (Congress President Election) ಆಕಾಂಕ್ಷಿ ಶಶಿ ತರೂರ್ ಅವರಿಗೆ ತಿಳಿಸಿರುವುದಾಗಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.


ಕಾಂಗ್ರೆಸ್ ಅಧ್ಯಕ್ಷ ಚುನಾವಣೆಗೆ ಸ್ಪರ್ಧಿಸುವ ನಿರ್ಧಾರದ ಹಿಂದಿನ ಕಾರಣವನ್ನು ವಿವರಿಸಿದ ಸಂಸದ ಮಲ್ಲಿಕಾರ್ಜುನ್ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರು ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸದ ಕಾರಣ, ನನ್ನ ಹಿರಿಯ ಸಹೋದ್ಯೋಗಿಗಳು ಚುನಾವಣೆಯಲ್ಲಿ ಸ್ಪರ್ಧಿಸುವಂತೆ ನನ್ನನ್ನು ಕೇಳಿದ್ದಾರೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: Vande Mataram: ಹೆಲೋ ಬದಲಿಗೆ ವಂದೇ ಮಾತರಂ ಹೇಳಿ; ಸರ್ಕಾರದ ಖಡಕ್ ಆದೇಶ


ಕಾಂಗ್ರೆಸ್ ಪಕ್ಷದ ಸಿದ್ಧಾಂತಕ್ಕೆ ಹೋರಾಟ
ಮುಂದುವರೆದು ಮಾತನಾಡಿದ ಸಂಸದ ಮಲ್ಲಿಕಾರ್ಜುನ ಖರ್ಗೆ,  ನಾನು ಯಾರ ವಿರುದ್ಧವೂ ಹೋರಾಡುತ್ತಿಲ್ಲ. ಬದಲಿಗೆ ಕಾಂಗ್ರೆಸ್ ಪಕ್ಷದ ಸಿದ್ಧಾಂತಕ್ಕಾಗಿ ಹೋರಾಡುತ್ತಿದ್ದೇನೆ ಎಂದು ಸಮರ್ಥಿಸಿಕೊಂಡರು.


ಇದನ್ನೂ ಓದಿ: Football Match: ಫುಟ್​ಬಾಲ್ ಪಂದ್ಯದಿಂದ 127 ಜನರು ದುರ್ಮರಣ; 180 ಜನರಿಗೆ ಗಾಯ


'ಒಬ್ಬ ವ್ಯಕ್ತಿ ಒಂದು ಹುದ್ದೆ'
ನಾನು ನಾಮಪತ್ರ ಸಲ್ಲಿಸಿದ ದಿನ ಉದಯಪುರದಲ್ಲಿ ತೆಗೆದುಕೊಂಡ ಪಕ್ಷದ 'ಒಬ್ಬ ವ್ಯಕ್ತಿ ಒಂದು ಹುದ್ದೆ' ನಿರ್ಧಾರಕ್ಕೆ ಅನುಗುಣವಾಗಿ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ನಾನು ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕಾಗಿ ನನ್ನ ಪ್ರಚಾರವನ್ನು ಪ್ರಾರಂಭಿಸುತ್ತೇನೆ ಎಂದು ಸಂಸದ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾಗಿ ಸುದ್ದಿ ಸಂಸ್ಥೆ ಪಿಟಿಐ ಉಲ್ಲೇಖಿಸಿದೆ.


ಮಲ್ಲಿಕಾರ್ಜುನ ಖರ್ಗೆ ಶಶಿ ತರೂರ್ ನಡುವೆ ಸ್ಪರ್ಧೆ
ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಗಾಂಧಿ ಕುಟುಂಬದ ಆಯ್ಕೆಯಾಗಿ ಕಣಕ್ಕಿಳಿದಿದ್ದಾರೆ. ಗಾಂಧಿ ಕುಟುಂಬದ ನಿಷ್ಠರಾಗಿರುವ ಮತ್ತೊಬ್ಬ ಹಿರಿಯ ನಾಯಕ ದಿಗ್ವಿಜಯ ಸಿಂಗ್ ಅವರು ಕಣದಿಂದ ಹೊರಗೆ ಉಳಿಯಲು ನಿರ್ಧರಿಸಿದ್ದಾರೆ. ಇದರಿಂದ ಖರ್ಗೆ ಅವರಿಗೆ ಎದುರಾಳಿಯಾಗಿ 'ಭಿನ್ನಮತೀಯ' ಜಿ-23 ಗುಂಪಿನ ಸದಸ್ಯರಾದ ಶಶಿ ತರೂರ್ ಮಾತ್ರ ಉಳಿಯಲಿದ್ದಾರೆ.


ತ್ರಿಪಾಠಿ ನಾಮಪತ್ರ ತಿರಸ್ಕೃತ
ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಶುಕ್ರವಾರ ಈ ಮೂವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಆದರೆ ಮಲ್ಲಿಕಾರ್ಜುನ ಖರ್ಗೆ ಹಾಗೂ ಶಶಿ ತರೂರ್ ನಾಮಪತ್ರ ಸ್ವೀಕೃತವಾಗಿದೆ. ಇನ್ನು ತ್ರಿಪಾಠಿ ಅವರ ನಾಮಪತ್ರ ತಿರಸ್ಕೃತಗೊಂಡಿದೆ.


“ಖರ್ಗೆ ಜೊತೆ ಯಾವುದೇ ವೈರತ್ವ ಇಲ್ಲ”
ಇನ್ನು ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಯಾವುದೇ ವೈರತ್ವ ಇಲ್ಲ ಎಂದು ಶಶಿ ತರೂರ್ ಹೇಳಿದ್ದಾರೆ. ಖರ್ಗೆ ಅವರನ್ನು ಕಾಂಗ್ರೆಸ್‌ನ 'ಭೀಷ್ಮ ಪಿತಾಮಹ' ಎಂದು ಬಣ್ಣಿಸಿರುವ ಸಂಸದ ಶಶಿ ತರೂರ್, "ನಾವು ಸಹೋದ್ಯೋಗಿಗಳೇ ವಿನಾ ಎದುರಾಳಿಗಳಲ್ಲ" ಎಂದಿದ್ದಾರೆ. ಆದರೆ ಸಂಸದ ಮಲ್ಲಿಕಾರ್ಜುನ ಖರ್ಗೆ ನಿರಂತರತೆಯ ಅಭ್ಯರ್ಥಿ ಎಂದಿರುವ ಅವರು, ಅಧ್ಯಕ್ಷರಾಗಿ ಆಯ್ಕೆಯಾದರೆ ಪಕ್ಷದ ಹೈಕಮಾಂಡ್ ಸಂಸ್ಕೃತಿಯನ್ನು ಬದಲಿಸುವುದಾಗಿ ಎಂದು ಕೇರಳ ಸಂಸದ ಶಶಿ ತರೂರ್ ಶಪಥ ಮಾಡಿದ್ದಾರೆ.

Published by:ಗುರುಗಣೇಶ ಡಬ್ಗುಳಿ
First published: