Corona Virus: ಕೇಂದ್ರ ಸರ್ಕಾರದ ನಿರ್ಲಕ್ಷ್ಯದಿಂದ ಕೊರೋನಾಗೆ 40 ಲಕ್ಷ ಭಾರತೀಯರ ಸಾವು: ರಾಹುಲ್ ಗಾಂಧಿ ಗಂಭೀರ ಆರೋಪ

ಮೋದಿ ಸತ್ಯವನ್ನು ಮಾತನಾಡುವುದಿಲ್ಲ ಅಥವಾ ಇತರು ಸತ್ಯವನ್ನು ಮಾತನಾಡಲು ಬಿಡುವುದಿಲ್ಲ. ದೇಶದಲ್ಲಿ ಆಮ್ಲಜನಕದ ಕೊರತೆಯಿಂದ ಯಾರೂ ಸತ್ತಿಲ್ಲ ಎಂದು ಮೋದಿ ಈಗಲೂ ಸುಳ್ಳು ಹೇಳುತ್ತಾರೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ರಾಹುಲ್ ಗಾಂಧಿ

ರಾಹುಲ್ ಗಾಂಧಿ

  • Share this:
ನವದೆಹಲಿ, ಏ. 17: ಮಹಾಮಾರಿ ಕೊರೋನಾ (Corona Pandemic) ದೇಶವನ್ನು ಪ್ರವೇಶ ಮಾಡಿದಾಗಿನಿಂದ ಎರಡನೇ ಅಲೆಯ (COVID Second Wave) ಪರಿಣಾಮ ಅಪಾರ ಪ್ರಮಾಣದ ಸಾವು ನೋವುಗಳನ್ನು ಸೃಷ್ಟಿಸುತ್ತದೆ ಎಂದು ನಿಖರವಾಗಿ ಮಾಹಿತಿ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Congress leader Rahul Gandhi) ಅವರು ಭಾನುವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ (Prime Minister Narendara Modi) ನೇತೃತ್ವದ ಕೇಂದ್ರ ಸರ್ಕಾರದ (Union Government) ನಿರ್ಲಕ್ಷ್ಯದಿಂದಾಗಿ 40 ಲಕ್ಷ ಭಾರತೀಯರು ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ. ಜೊತೆಗೆ ಕೊರೋನಾದಿಂದ ಸತ್ತವರ ಎಲ್ಲಾ ಕುಟುಂಬಗಳಿಗೆ ತಲಾ ನಾಲ್ಕು ಲಕ್ಷ ರೂಪಾಯಿ ಪರಿಹಾರವನ್ನು ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಸುಳ್ಳು ಹೇಳುವ ಮೋದಿ

ತಮ್ಮ ಟ್ವೀಟರ್ ಖಾತೆಯಲ್ಲಿ 'ನ್ಯೂಯಾರ್ಕ್ ಟೈಮ್ಸ್' ವರದಿಯ ಸ್ಕ್ರೀನ್‌ ಶಾಟ್ ಅನ್ನು ಹಂಚಿಕೊಂಡಿರುವ ರಾಹುಲ್ ಗಾಂಧಿ ಅವರು, 'ಇದು ಜಾಗತಿಕ ಕೋವಿಡ್ ಸಾವಿನ ಸಂಖ್ಯೆಯನ್ನು ಸಾರ್ವಜನಿಕಗೊಳಿಸಲು ವಿಶ್ವ ಆರೋಗ್ಯ ಸಂಸ್ಥೆ (WHO world health organisation) ಮಾಡುತ್ತಿರುವ ಪ್ರಯತ್ನಗಳನ್ನು ಭಾರತ ತಡೆಯುತ್ತಿದೆ ಎಂದು ಹೇಳಿದೆ.

ಮೋದಿ ಜೀ ಸತ್ಯವನ್ನು ಮಾತನಾಡುವುದಿಲ್ಲ ಅಥವಾ ಇತರು ಸತ್ಯವನ್ನು ಮಾತನಾಡಲು ಬಿಡುವುದಿಲ್ಲ. ದೇಶದಲ್ಲಿ ಆಮ್ಲಜನಕದ ಕೊರತೆಯಿಂದ ಯಾರೂ ಸತ್ತಿಲ್ಲ ಎಂದು ಮೋದಿ ಈಗಲೂ ಸುಳ್ಳು ಹೇಳುತ್ತಾರೆ" ಎಂದು ಬರೆದಿದ್ದಾರೆ.

ಇದನ್ನೂ ಓದಿ:  COVID 19: ಮತ್ತೆ ಮತ್ತೆ ಕೋವಿಡ್ ಸೋಂಕಿಗೆ ತುತ್ತಾಗ್ತಾ ಇದ್ದೀರಾ? ಇದೇ ಕಾರಣ ಅಂತೆ ನೋಡಿ, ಹುಷಾರಾಗಿರಿ!

ಸತ್ತವರ ಕುಟುಂಬಕ್ಕೆ ಪರಿಹಾರ ನೀಡಿ

ವರದಿಯ ಸ್ಕ್ರೀನ್‌ಶಾಟ್‌ನೊಂದಿಗೆ ಹಿಂದಿಯಲ್ಲಿ ಟ್ವೀಟ್‌ ಮಾಡಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. "ಕೋವಿಡ್ ಸಮಯದಲ್ಲಿ ಕೇಂದ್ರ ಸರ್ಕಾರದ ನಿರ್ಲಕ್ಷ್ಯದಿಂದ ಐದು ಲಕ್ಷ ಅಲ್ಲ, 40 ಲಕ್ಷ ಭಾರತೀಯರು ಸಾವನ್ನಪ್ಪಿದ್ದಾರೆ ಎಂದು ನಾನು ಮೊದಲೇ ಹೇಳಿದ್ದೆ" ಎಂಬುದನ್ನು ಕೂಡ ರಾಹುಲ್ ಗಾಂಧಿ ಉಲ್ಲೇಖ ಮಾಡಿದ್ದಾರೆ. 'ನಿಮ್ಮ ಜವಾಬ್ದಾರಿಯನ್ನು ಪೂರೈಸಿ, ಮೋದಿ ಜೀ ಪ್ರತಿ (ಕೋವಿಡ್) ಸಂತ್ರಸ್ತರ ಕುಟುಂಬಕ್ಕೆ ನಾಲ್ಕು ಲಕ್ಷ ರೂಪಾಯಿ ಪರಿಹಾರವನ್ನು ನೀಡಿ' ಎಂದು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.WHO ವಿಧಾನ ವಿರೋಧಿಸಿರುವ ಭಾರತ

ದೇಶದಲ್ಲಿ COVID-19 ಸಾವುಗಳನ್ನು ಅಂದಾಜು ಮಾಡಲು ವಿಶ್ವ ಆರೋಗ್ಯ ಸಂಸ್ಥೆಯ (WHO) ವಿಧಾನವನ್ನು ಭಾರತ ಶನಿವಾರ ಪ್ರಶ್ನಿಸಿದೆ. ಭೌಗೋಳಿಕ ಗಾತ್ರ ಮತ್ತು ಜನಸಂಖ್ಯೆಯ ಅಂತಹ ವಿಶಾಲ ರಾಷ್ಟ್ರದ ಸಾವಿನ ಅಂಕಿಅಂಶಗಳನ್ನು ಅಂದಾಜು ಮಾಡಲು ಇಂತಹ ಗಣಿತದ ಮಾದರಿಯನ್ನು ಬಳಸಬಾರದು ಎಂದು ಹೇಳಿದೆ.

ಏಪ್ರಿಲ್ 16ರಂದು 'ಗ್ಲೋಬಲ್ ಕೋವಿಡ್ ಡೆತ್ ಟೋಲ್  (Global covid death toll) ಪಬ್ಲಿಕ್ ಮಾಡಲು ಭಾರತವು ವಿಶ್ವ ಆರೋಗ್ಯ ಸಂಸ್ಥೆಯ ಪ್ರಯತ್ನಗಳನ್ನು ಸ್ಥಗಿತಗೊಳಿಸುತ್ತಿದೆ' ಎಂಬ ಶೀರ್ಷಿಕೆಯ ಲೇಖನಕ್ಕೆ ಪ್ರತಿಕ್ರಿಯೆಯಾಗಿ ಕೇಂದ್ರ ಆರೋಗ್ಯ ಸಚಿವಾಲಯ ಹೇಳಿಕೆ ನೀಡಿದೆ. ದೇಶವು ಹಲವಾರು ಸಂದರ್ಭಗಳಲ್ಲಿ ಬಳಸಿದ ವಿಧಾನದ ಬಗ್ಗೆ ಜಾಗತಿಕ ಆರೋಗ್ಯ ಸಂಸ್ಥೆಯೊಂದಿಗೆ ತನ್ನ ಕಳವಳಗಳನ್ನು ಹಂಚಿಕೊಂಡಿದೆ.

ಇದನ್ನೂ ಓದಿ: Delhiಯಲ್ಲಿ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರಲ್ಲಿ Covid ಸೋಂಕು; ಆತಂಕ ಮೂಡಿಸಿದ ಏರಿಕೆ ಪ್ರಕರಣ

ಅಂಕಿ ಅಂಶಗಳಲ್ಲಿ ಭಾರೀ ವ್ಯತ್ಯಾಸ

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಕೋವಿಡ್-19 ಸಾವಿನ ನಿಜವಾದ ಅಂಕಿಅಂಶಗಳನ್ನು ಬಿಡುಗಡೆ ಮಾಡಿಲ್ಲ ಎಂದು ಕಾಂಗ್ರೆಸ್ ಮೊದಲಿನಿಂದಲೂ ಅಂಕಿ ಅಂಶಗಳ ಸಮೇತ ಆರೋಪಿಸುತ್ತಿದೆ. ಜೊತೆಗೆ ಕೊರೋನಾದಿಂದ ಮೃತಪಟ್ಟವರ ಕುಟುಂಬ ಸದಸ್ಯರಿಗೆ ನಾಲ್ಕು ಲಕ್ಷ ರೂಪಾಯಿ ಪರಿಹಾರವನ್ನು ನೀಡಬೇಕೆಂದು ಒತ್ತಾಯಿಸುತ್ತಿದೆ. ಭಾನುವಾರ ನವೀಕರಿಸಿದ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ ನಾಲ್ಕು ಹೊಸ ಸಾವುಗಳನ್ನು ಸೇರಿದಂತೆ ಈವರೆಗೆ 5,21,751 ಜನ ಮಾತ್ರ ಕೊರೋನಾ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ.
Published by:Mahmadrafik K
First published: