• ಹೋಂ
  • »
  • ನ್ಯೂಸ್
  • »
  • ದೇಶ-ವಿದೇಶ
  • »
  • ಪ್ರಧಾನಿ ನರೇಂದ್ರ ಮೋದಿಯವರು ಯಾವತ್ತೂ ರೈತರು ಹಾಗೂ ಬಡವರ ಪರವಾಗಿಲ್ಲ: ಮಲ್ಲಿಕಾರ್ಜುನ ಖರ್ಗೆ

ಪ್ರಧಾನಿ ನರೇಂದ್ರ ಮೋದಿಯವರು ಯಾವತ್ತೂ ರೈತರು ಹಾಗೂ ಬಡವರ ಪರವಾಗಿಲ್ಲ: ಮಲ್ಲಿಕಾರ್ಜುನ ಖರ್ಗೆ

ಪ್ರತಿಭಟನೆ ನಡೆಸಿದ ಪ್ರತಿಪಕ್ಷಗಳ ಸದಸ್ಯರು

ಪ್ರತಿಭಟನೆ ನಡೆಸಿದ ಪ್ರತಿಪಕ್ಷಗಳ ಸದಸ್ಯರು

ಪ್ರಶ್ನೆ ಕೇಳಿದ ಸಂಸದರನ್ನು ಸದನದಿಂದ ಹೊರ ಹಾಕಲಾಗಿದೆ. ಮುಂದಿನ ದಿನಗಳಲ್ಲಿ ರೈತರೇ ಇದಕ್ಕೆ ತಕ್ಕ ಉತ್ತರ ನೀಡಲಿದ್ದಾರೆ. ರೈತರು ಈಗಾಗಲೇ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ಆ ಮೂಲಕ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಿದ್ದಾರೆ

  • Share this:

ನವದೆಹಲಿ(ಸೆ. 21): ಕೇಂದ್ರ ಸರ್ಕಾರ ತಂದಿರುವ ರೈತರ ಪಾಲಿಗೆ ಮರಣಶಾಸನವಾಗಿ ಪರಿಣಮಿಸಲಿರುವ ಕೃಷಿ ಮಸೂದೆಗಳನ್ನು ವಿರೋಧಿಸಿ ಪ್ರತಿಪಕ್ಷಗಳ ಸದಸ್ಯರು ಸೋಮವಾರ ಸಂಸತ್ ಭವನದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ವೇಳೆ ಮಾತನಾಡಿದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಹಾಗೂ ರಾಜ್ಯಸಭಾ ಸದಸ್ಯರೂ ಆದ ಮಲ್ಲಿಕಾರ್ಜುನ ಖರ್ಗೆ ಅವರು, ಕೇಂದ್ರ ಸರ್ಕಾರ ರೈತ ವಿರೋಧಿಯಾಗಿದೆ. ರೈತ ವಿರೋಧಿ ಮಸೂದೆಗಳನ್ನು ತಂದಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಯಾವತ್ತೂ ರೈತರ ಪರವಾಗಿಲ್ಲ. ಬಡವರು ಹಾಗೂ ಕೂಲಿ ಕಾರ್ಮಿಕರ ಪರವಾಗಿಲ್ಲ ಎಂದು ಕಿಡಿಕಾರಿದರು. ಪ್ರಧಾನಿ ನರೇಂದ್ರ ಮೋದಿಯವರು ಸರ್ವಾಧಿಕಾರಿಯಂತೆ ಆಡಳಿತ ನಡೆಸುತ್ತಿದ್ದಾರೆ. ಕಾರ್ಪೋರೇಟ್ ಕಂಪನಿಗಳ ಪರ ಇದ್ದಾರೆ‌. ಕಾರ್ಪೊರೇಟ್ ಕಂಪನಿಗಳಿಗೆ ಅನುಕೂಲ ಮಾಡಿಕೊಡಲೆಂದೇ ರೈತರ ಪಾಲಿಗೆ ಮರಣಶಾಸನವಾಗಿ ಪರಿಣಮಿಸಲಿರುವ ಕೃಷಿ ಮಸೂದೆಗಳನ್ನು ತಂದಿದ್ದಾರೆ. ಇದನ್ನು ವಿರೋಧಿಸಿ ರೈತರ ಪರವಾಗಿ ನ್ಯಾಯಯುತ ಬೇಡಿಕೆ ಇಟ್ಟುಕೊಂಡು ಪ್ರತಿಭಟನೆ ಮಾಡಿದ ಸಂಸದರನ್ನು ಅಮಾನತ್ತು ಮಾಡಲಾಗಿದೆ.‌


ರೈತರ ಪರವಾಗಿ ನ್ಯಾಯಯುತವಾಗಿ ಹೋರಾಟ ಮಾಡಿದ ಸಂಸದರನ್ನು ಅಮಾನತ್ತುಗೊಳಿಸಿದ್ದು, ಇತಿಹಾಸದಲ್ಲೇ ಇದು ಮೊದಲು ಎಂದು ರಾಜ್ಯಸಭಾ ಸದಸ್ಯ  ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದರು.


ಪ್ರಶ್ನೆ ಕೇಳಿದ ಸಂಸದರನ್ನು ಸದನದಿಂದ ಹೊರ ಹಾಕಲಾಗಿದೆ. ಮುಂದಿನ ದಿನಗಳಲ್ಲಿ ರೈತರೇ ಇದಕ್ಕೆ ತಕ್ಕ ಉತ್ತರ ನೀಡಲಿದ್ದಾರೆ. ರೈತರು ಈಗಾಗಲೇ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ಆ ಮೂಲಕ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಿದ್ದಾರೆ. ಕೇಂದ್ರ ಸರ್ಕಾರ ಈಗಾಲಾದರೂ‌ ರೈತ ವಿರೋಧಿ ಮಸೂದೆಗಳನ್ನು ವಾಪಸ್ ಪಡೆಯಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಒತ್ತಾಯ ಮಾಡಿದರು.


ವಿರೋಧ ಪಕ್ಷಗಳ ಭಾರೀ ವಿರೋಧದ ನಡುವೆಯೂ ರಾಜ್ಯಸಭೆಯಲ್ಲಿ ವಿವಾದಿತ ಕೃಷಿ ಮಸೂದೆಗೆ ಅಂಗೀಕಾರ ಸಿಕ್ಕಿದೆ. ವಿರೋಧ ಪಕ್ಷಗಳು ಮಸೂದೆಯ ವಿರುದ್ಧ ದೊಡ್ಡ ಮಟ್ಟದಲ್ಲಿ ಪ್ರತಿರೋಧ ವ್ಯಕ್ತಪಡಿದ ಹೊರತಾಗಿಯೂ ಮಸೂದೆ ಮಂಡನೆ ಮಾಡಿದ್ದ ಕೇಂದ್ರ, ಅಂಗೀಕಾರವನ್ನು ಪಡೆದಿದೆ. ಮಸೂದೆಗಳು ರೈತಾಪಿ ವರ್ಗದ ವಿರೋಧಿಯಾಗಿವೆ, ಜತೆಗೆ ಕಾರ್ಪೊರೇಟ್​ ಸಂಸ್ಥೆಗಳಿಗಷ್ಟೇ ಇದರಿಂದ ಉಪಯೋಗವಾಗಲಿದೆ ಎಂಬ ಕೂಗು ರಾಷ್ಟ್ರಾದ್ಯಂತ ಕೇಳಿ ಬಂದಿತ್ತು. ಪಂಜಾಬ್​ ಮತ್ತು ಹರಿಯಾಣದಲ್ಲಿ ಉಗ್ರ ಸ್ವರೂಪದ ಪ್ರತಿಭಟನೆ ಮಸೂದೆ ಸಂಸತ್ತಿನಲ್ಲಿ ಮಂಡನೆಯಾದ ದಿನದಿಂದ ಆರಂಭವಾಗಿದೆ. ಆಡಳಿತಾರೂಢ ಎನ್​ಡಿಎ ಮೈತ್ರಿಕೂಟದಲ್ಲೂ ಮಸೂದೆಗೆ ವಿರೋಧ ವ್ಯಕ್ತವಾಗಿತ್ತು. ಕೇಂದ್ರ ಸಚಿವೆ ಹರ್ಸಿಮ್ರತ್​ ಕೌರ್​ ಮಸೂದೆಯನ್ನು ವಿರೋಧಿಸಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.


ಇದನ್ನೂ ಓದಿ : ಚೀನಾ ಗಡಿಭಾಗದಲ್ಲಿ ಮೂರು ವಾರಗಳಲ್ಲಿ 6 ಪ್ರಮುಖ ಗುಡ್ಡಗಳು ಭಾರತದ ವಶಕ್ಕೆ


ರೈತರ ರಕ್ಷಾ ಕವಚ ಎಂಬ ಘೋಷಣೆಯೊಂದಿಗೆ ಕೇಂದ್ರ ಸರ್ಕಾರ ಮೂರು ಕೃಷಿ ಮಸೂದೆಗಳನ್ನು ಕಳೆದ ಗುರುವಾರ ಸಂಸತ್​ನಲ್ಲಿ ಮಂಡಿಸಿತ್ತು. ಆದರೆ, ಈ ಮಸೂದೆಗಳು ರೈತ ವಿರೋಧಿಗಳಾಗಿವೆ, ದೊಡ್ಡ ದೊಡ್ಡ ಕಂಪೆನಿಗಳಿಗಷ್ಟೆ ಇದರಿಂದ ಲಾಭವಾಗಲಿದೆ ಎಂಬ ಕೂಗು ವಿರೋಧ ಪಕ್ಷದಿಂದ ಕೇಳಿ ಬಂದಿತ್ತು. ಈ ವಿಚಾರ ಇಡೀ ರಾಷ್ಟ್ರಮಟ್ಟದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಆದರೆ ವಿರೋಧ ಪಕ್ಷಗಳು ಮಸೂದೆ ಜಾರಿಗೆ ಲೋಕಸಭೆಯಲ್ಲಿ ಅಂಗೀಕಾರವಾಗುವುದನ್ನು ತಡೆಯಲು ಸಾಧ್ಯವಿರಲಿಲ್ಲ. ಬಿಜೆಪಿ ಲೋಕಸಭೆಯಲ್ಲಿ ಬಹುಮತವಿದೆ. ಆದರೆ ರಾಜ್ಯಸಭೆಯಲ್ಲಿ ಇದನ್ನು ತಡೆಯಲು ವಿರೋಧ ಪಕ್ಷಗಳು ಒಕ್ಕೊರಲಿನಿಂದ ನಿರ್ಧರಿಸಿದ್ದವು. ಆದರೆ ಇಂದು ರಾಜ್ಯಸಭೆಯನ್ನೂ ಮಸೂದೆಗೆ ಹಸಿರು ನಿಶಾನೆ ಸಿಕ್ಕಿದೆ.


Published by:G Hareeshkumar
First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು