ದೆಹಲಿ ವಿಧಾನಸಭಾ ಚುನಾವಣೆ: ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ

ಇನ್ನು ಕೇರಳದ ಕಾಂಗ್ರೆಸ್​ ಸಂಸದ ಶಶಿ ತರೂರ್, ಸಚಿನ್ ಪೈಲಟ್, ಜ್ಯೋತಿರಾದಿತ್ಯ ಸಿಂಧ್ಯಾ, ರಣದೀಪ್ ಸುರ್ಜೇವಾಲಾ, ಮಾಜಿ ರಾಷ್ಟ್ರಪತಿ ಪ್ರಣಬ್ ಮುರ್ಜಿ ಪುತ್ರಿ ಶರ್ಮಿಷ್ಟ ಮುಖರ್ಜಿ, ಸಿನಿಮಾ ನಟ ರಾಜ್ ಬಬ್ಬರ್, ಶತೃಘ್ನ ಸಿನ್ಹಾ, ಖುಷ್ಬು ಸುಂದರ್ ಮತ್ತು ನಗ್ಮಾ ಸ್ಟಾರ್ ಪ್ರಚಾರಕರಾಗಿದ್ದಾರೆ.

news18-kannada
Updated:January 22, 2020, 5:25 PM IST
ದೆಹಲಿ ವಿಧಾನಸಭಾ ಚುನಾವಣೆ: ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ
ರಾಹುಲ್​​ ಗಾಂಧಿ, ಸೋನಿಯಾ ಗಾಂಧಿ
  • Share this:
ನವದೆಹಲಿ(ಜ.22): ದೆಹಲಿಯ ಆರನೇ ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟವಾಗಿದೆ. ಫೆಬ್ರವರಿ 8ರಂದು ಏಕ ಹಂತದಲ್ಲಿ ಚುನಾವಣೆ ನಡೆಯಲಿದೆ. ಫೆ. 11ರಂದು ಮತ ಎಣಿಕೆ ಆಗಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರಾ ತಿಳಿಸಿದ್ದಾರೆ. ಈ ಮಧ್ಯೆ ಇಲ್ಲಿನ ವಿಧಾನಸಭೆ ಚುನಾವಣೆ ಗೆಲ್ಲಲು ಮುಖ್ಯಮಂತ್ರಿ ಅರವಿಂದ್​​​ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಮತ್ತು ಬಿಜೆಪಿಯಂತೆಯೇ ಕಾಂಗ್ರೆಸ್​​​ ಕೂಡ ಕಸರತ್ತು ನಡೆಸುತ್ತಿದೆ. ಹಾಗಾಗಿಯೇ ಇಂದು ಕಾಂಗ್ರೆಸ್ ತನ್ನ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆಗೊಳಿಸಿದ್ದು, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ವಾದ್ರಾ ಸೇರಿದಂತೆ 40 ಮಂದಿ ಅಗ್ರಗಣ್ಯ ನಾಯಕರು ಸ್ಥಾನ ಪಡೆದುಕೊಂಡಿದ್ದಾರೆ.

ಇತ್ತೀಚೆಗೆ ಸಕ್ರಿಯ ರಾಜಕಾರಣದಿಂದಲೇ ದೂರ ಉಳಿದುಕೊಂಡಿದ್ದ ಮಾಜಿ ಕ್ರಿಕೆಟಿಗ ಹಾಗೂ ಹಾಗೂ ರಾಜಕಾರಣಿ ನವಜೋತ್ ಸಿಂಗ್ ಸಿಧು ಕಾಂಗ್ರೆಸ್​​ ಸ್ಟಾರ್​​ ಪ್ರಚಾರಕರ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಅಲ್ಲದೇ ಕಾಂಗ್ರೆಸ್ ಆಡಳಿತವಿರುವ ಪಂಜಾಬ್​​ ಸಿಎಂ ಅಮರಿಂದರ್ ಸಿಂಗ್, ಮಧ್ಯಪ್ರದೇಶ ಸಿಎಂ ಕಮಲ್ ನಾಥ್,  ಚತ್ತೀಸ್​​ಗಡ ಸಿಎಂ ಭೂಪೇಶ್ ಬಘೇಲ್, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸೇರಿದಂತೆ ಹಲವರ ಹೆಸರು ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿದೆ.



ಇನ್ನು ಕೇರಳದ ಕಾಂಗ್ರೆಸ್​ ಸಂಸದ ಶಶಿ ತರೂರ್, ಸಚಿನ್ ಪೈಲಟ್, ಜ್ಯೋತಿರಾದಿತ್ಯ ಸಿಂಧ್ಯಾ, ರಣದೀಪ್ ಸುರ್ಜೇವಾಲಾ, ಮಾಜಿ ರಾಷ್ಟ್ರಪತಿ ಪ್ರಣಬ್ ಮುರ್ಜಿ ಪುತ್ರಿ ಶರ್ಮಿಷ್ಟ ಮುಖರ್ಜಿ, ಸಿನಿಮಾ ನಟ ರಾಜ್ ಬಬ್ಬರ್, ಶತೃಘ್ನ ಸಿನ್ಹಾ, ಖುಷ್ಬು ಸುಂದರ್ ಮತ್ತು ನಗ್ಮಾ ಸ್ಟಾರ್ ಪ್ರಚಾರಕರಾಗಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನಕ್ಕೆ ಸೀರೆ ತೆಗೆದುಕೊಂಡು ಹೋದ ಪ್ರಧಾನಿ ಯಾರು?: ಮೋದಿ ಪಾಕ್​​​ ಭೇಟಿ ಬಗ್ಗೆ ಬಿಜೆಪಿಗೆ ಎಚ್​​ಡಿಕೆ ಪ್ರಶ್ನೆ

ದೆಹಲಿಯ ವಿಧಾನಸಭೆ 70 ಸದಸ್ಯರ ಬಲ ಹೊಂದಿದೆ. 2015ರಲ್ಲಿ ನಡೆದ ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಆಮ್ ಆದ್ಮಿ ಪಕ್ಷ ಬರೋಬ್ಬರಿ 67 ಸ್ಥಾನಗಳನ್ನು ಗೆದ್ದು ಬಹುತೇಕ ಕ್ಲೀನ್ ಸ್ವೀಪ್ ಮಾಡಿತ್ತು. ಅದಕ್ಕೂ ಹಿಂದೆ 2013ರಲ್ಲಿ ನಡೆದ ಚುನಾವಣೆಯಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗಿತ್ತು. ಬಿಜೆಪಿ 31, ಆಪ್ ಪಕ್ಷ 28 ಹಾಗೂ ಕಾಂಗ್ರೆಸ್ 8 ಸ್ಥಾನ ಗಳಿಸಿದ್ದವು. ಬಿಜೆಪಿ ಸರ್ಕಾರ ರಚಿಸಲು ಮುಂದೆ ಬರಲಿಲ್ಲ. ರಾಷ್ಟ್ರಪತಿ ಆಳ್ವಿಕೆ ಸನ್ನಿಹಿತ ಎಂದನಿಸುತ್ತಿರುವಂತೆಯೇ ಕಾಂಗ್ರೆಸ್ ಪಕ್ಷದ ಬಾಹ್ಯ ಬೆಂಬಲದೊಂದಿಗೆ ಆಮ್ ಆದ್ಮಿ ಅಧಿಕಾರ ರಚಿಸಿತ್ತು. ಕೆಲವೇ ತಿಂಗಳ ಹಿಂದಷ್ಟೇ ಜನ್ಮತಾಳಿದ್ದ ಆಮ್ ಆದ್ಮಿ ಪಕ್ಷ ಒಂದೇ ವರ್ಷದ ಅಂತರದಲ್ಲಿ ರಾಜ್ಯವೊಂದರ ಅಧಿಕಾರ ಹಿಡಿದು ಹೊಸ ಇತಿಹಾಸ ಸೃಷ್ಟಿಸಿತು. ಅರವಿಂದ್ ಕೇಜ್ರಿವಾಲ್ ದಿಲ್ಲಿ ‘ದೊರೆ’ಯಾದರು.
First published:January 22, 2020
ಮತ್ತಷ್ಟು ಓದಿರಿ
ಮುಂದಿನ ಸುದ್ದಿ