Congress Protest: ಪಬ್ಲಿಕ್​ನಲ್ಲೇ ಪೊಲೀಸ್ ಕಾಲರ್ ಹಿಡಿದೆಳೆದ ಕಾಂಗ್ರೆಸ್ ನಾಯಕಿ!

Congress Protest: ರಾಹುಲ್ ಗಾಂಧಿ ಇಡಿ ವಿಚಾರಣೆಯನ್ನು ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದು ಇದೀಗ ಕಾಂಗ್ರೆಸ್ ನಾಯಕಿಯೊಬ್ಬರು ಪಬ್ಲಿಕ್​ನಲ್ಲೇ ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಯ ಕಾಲರ್ ಹಿಡಿದೆಳೆದಿರುವ ವಿಡಿಯೋ ವೈರಲ್ ಆಗಿದೆ.

ರೇಣುಕಾ ಚೌಧರಿ

ರೇಣುಕಾ ಚೌಧರಿ

  • Share this:
ಕಳೆದ ಮೂರು ದಿನಗಳ ಕಾಲ ಜಾರಿ ನಿರ್ದೇಶನಾಲಯದಿಂದ (Enforcement Directorate) ವಿಚಾರಣೆಗಳಗಾದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ  (Rahul Gandhi) ಪರ ಕಾಂಗ್ರೆಸ್ (Congress) ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ತನಿಖಾ ಸಂಸ್ಥೆಗಳ ದುರುಪಯೋಗ ಎಂದು ಕೇಂದ್ರ ಸರ್ಕಾರವನ್ನು ಆರೋಪಿಸುತ್ತಿರುವ ಕಾಂಗ್ರೆಸ್ ಈಗ ದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆ (Protest) ನಡೆಸುತ್ತಿದೆ. ನ್ಯಾಷನಲ್ ಹೆರಾಲ್ಡ್ (National Herald) ಪತ್ರಿಕೆ ಸಂಬಂಧಿಸಿದ ಅಕ್ರಮ ಹಣದ ಕುರಿತು ರಾಹುಲ್ ಗಾಂಧಿ ವಿಚಾರಣೆ ನಡೆಯುತ್ತಿದ್ದು ಇಂದು ಮಾತ್ರ ಬಿಡುವುದು ಸಿಕ್ಕಿದೆ. ಜೂ. 13ರಿಂದ 15ರ ತನಕ ರಾಹುಲ್ ಗಾಂಧಿ ವಿಚಾರಣೆ ನಡೆದಿದೆ. ಈ ವಿಚಾರಣೆಯನ್ನು ವಿರೋಧಿಸಿ ಕಾಂಗ್ರೆಸ್ ಪ್ರತಿಭಟಿಸುತ್ತಿದ್ದ ಕೈ ಕಾರ್ಯಕರ್ತರು ರಸ್ತೆಗಳಿದಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಗೆ ಇಡಿ ಸಮನ್ಸ್‌ನ ವಿರುದ್ಧ ಕಾಂಗ್ರೆಸ್ ಪಕ್ಷ ಪ್ರತಿಭಟಿಸುತ್ತಿದೆ. ಈ ಸಂದರ್ಭ ಕಾಂಗ್ರೆಸ್ ನಾಯಕಿ ರೇಣುಕಾ ಚೌಧರಿ (Renuka Chaudhary) ಸಾರ್ವಜನಿಕವಾಗಿ ಉದ್ಧಟತನ ತೋರಿಸಿದ್ದಾರೆ.

ಕಾಲರ್ ಹಿಡಿದೆಳೆದ ಕಾಂಗ್ರೆಸ್ ನಾಯಕಿ

ಅವರು ಗುರುವಾರ ಹೈದರಾಬಾದ್‌ನಲ್ಲಿ ಪಕ್ಷದ ಪ್ರತಿಭಟನೆಯ ಸಂದರ್ಭದಲ್ಲಿ ಇತರ ಕಾರ್ಯಕರ್ತರನ್ನು ಪೊಲೀಸ್ ಸಿಬ್ಬಂದಿ ಕರೆದುಕೊಂಡು ಹೋಗುತ್ತಿದ್ದಾಗ ಪೊಲೀಸ್ ಒಬ್ಬರನ್ನು ಸಾರ್ವಜನಿಕವಾಗಿ ಕಾಲರ್‌ನಿಂದ ಹಿಡಿದುಕೊಂಡರು.

ಕಾಲರ್ ಹಿಡಿದು ತೀವ್ರ ವಾಗ್ವಾದ

ಹಿರಿಯ ಕಾಂಗ್ರೆಸ್ ನಾಯಕರಲ್ಲಿ ಒಬ್ಬರಾದ ಚೌಧರಿ ಅವರು ಪೊಲೀಸ್ ಅಧಿಕಾರಿಯ ಕಾಲರ್ ಹಿಡಿದುಕೊಂಡು ತೀವ್ರ ವಾಗ್ವಾದ ನಡೆಸಿದರು. ನಂತರ ಆಕೆಯನ್ನು ಮಹಿಳಾ ಪೊಲೀಸ್ ಅಧಿಕಾರಿಗಳು ಪೊಲೀಸ್ ವ್ಯಾನ್ ಕಡೆಗೆ ಎಳೆದೊಯ್ದರು.

ರಾಜಭವನ ಮುತ್ತಿಗೆ ಯತ್ನ

ಕಾಂಗ್ರೆಸ್‌ನ ತೆಲಂಗಾಣ ಘಟಕವು ನೀಡಿದ "ಚಲೋ ರಾಜಭವನ" ಕರೆಯ ಭಾಗವಾಗಿ ಕಟ್ಟಡಕ್ಕೆ ಮುತ್ತಿಗೆ ಹಾಕಲು ನಡೆಸಿದ ಪ್ರಯತ್ನವನ್ನು ಪೊಲೀಸರು ವಿಫಲಗೊಳಿಸಿದ್ದರಿಂದ ತೆಲಂಗಾಣದ ರಾಜಭವನದ ಬಳಿ ಸ್ವಲ್ಪ ಉದ್ವಿಗ್ನತೆ ಉಂಟಾಗಿದೆ.

ಇದನ್ನೂ ಓದಿ: Narendra Modi: ಪ್ರಧಾನಿ ಮೋದಿ ಜಾಗತಿಕ ನಾಯಕತ್ವಕ್ಕೂ ಗೋಧಿಗೂ ಏನು ಸಂಬಂಧ?

ಪರಿಸ್ಥಿತಿ ನಿಯಂತ್ರಣಕ್ಕೆ ಹಲವರನ್ನು ವಶಕ್ಕೆ ಪಡೆದ ಪೊಲೀಸರು

ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ (ಟಿಪಿಸಿಸಿ) ಅಧ್ಯಕ್ಷ ಮತ್ತು ಪಕ್ಷದ ಸಂಸದ ಎ ರೇವಂತ್ ರೆಡ್ಡಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಮಲ್ಲು ಭಟ್ಟಿ ವಿಕ್ರಮಾರ್ಕ ಮತ್ತು ಹಲವರನ್ನು ಪೊಲೀಸರು ರಾಜಭವನದತ್ತ ಸಾಗುತ್ತಿದ್ದಂತೆ ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ತೆಗೆದುಕೊಂಡರು.

ಟ್ರಾಫಿಕ್ ಜಾಮ್ ಸಮಸ್ಯೆ

ಪ್ರತಿಭಟನೆಯಿಂದಾಗಿ ಖೈರ್ತಾಬಾದ್ ವೃತ್ತ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ದ್ವಿಚಕ್ರ ವಾಹನಕ್ಕೆ ಬೆಂಕಿ ಹಚ್ಚಲಾಯಿತು. ಕೆಲವು ಪ್ರತಿಭಟನಾಕಾರರು ಸರ್ಕಾರಿ ಸಿಟಿ ಬಸ್‌ನ ಮೇಲೆ ಹತ್ತುತ್ತಿರುವುದು ಕಂಡುಬಂದಿತು. ಕೆಲವರು ಬಸ್‌ನ ಕಿಟಕಿ ಗಾಜುಗಳನ್ನು ಒಡೆದು ಹಾಕಿದರು.

ಇದನ್ನೂ ಓದಿ: National Herald Case: ಇಂದು ಇಡಿ ವಿಚಾರಣೆ ಇಲ್ಲ, ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ

ಪ್ರತಿಭಟನಾಕಾರರು ಪ್ರಧಾನಿ ನರೇಂದ್ರ ಮೋದಿ ಹಾಗೂ ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗಿದರು.

ರೇಣುಕಾರ ಇತರ ವಿವಾದ

2009 ರ ಮಂಗಳೂರು ಪಬ್ ದಾಳಿಯ ನಂತರ ಶ್ರೀರಾಮಸೇನೆ ಚೌಡಯ್ಯನವರು ಮಂಗಳೂರನ್ನು ತಾಲಿಬಾನೀಕರಣಗೊಳಿಸಿದ್ದಾರೆ ಎಂದು ರೇಣುಕಾ ಚೌಧರಿ ಪ್ರತಿಕ್ರಿಸಿದ್ದರು. ಇದು ನಗರದ ಮೇಯರ್ ಅವರ ವಿರುದ್ಧ ಪ್ರಕರಣವನ್ನು ದಾಖಲಿಸಿತ್ತು. ಅವರು ಪ್ರತ್ಯೇಕ ಘಟನೆಗಳನ್ನು ವೈಭವೀಕರಿಸುತ್ತಾರೆ. ಮಂಗಳೂರು ನಗರದ ಬಗ್ಗೆ ಆಕ್ಷೇಪಾರ್ಹ ಕಾಮೆಂಟ್‌ಗಳನ್ನು ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.

10 ಗಂಟೆಗೂ ಹೆಚ್ಚು ಕಾಲ  3 ದಿನ ವಿಚಾರಣೆ

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಐಆರ್ ದಾಖಲಾಗಿಲ್ಲದಿದ್ದರೂ‌ ಪ್ರತಿ ದಿನ 10 ಗಂಟೆಗೂ ಹೆಚ್ಚು ಕಾಲ  3 ದಿನ ವಿಚಾರಣೆ ಮಾಡಲಾಗಿದೆ. ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳಾದ ಜಾರಿ ನಿರ್ದೇಶನಾಲಯ, ಕೇಂದ್ರ ತನಿಖಾ ಸಂಸ್ಥೆ (CBI), ಆದಾಯ ತೆರಿಗೆ ಇಲಾಖೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಎಐಸಿಸಿ ಸುತ್ತಲಿನ ರಸ್ತೆಗಳು ಬಂದ್

ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಬಹುದು, ಅಥವಾ ಎಐಸಿಸಿ ಕಚೇರಿಯಿಂದ ಇಡಿ ಕಚೇರಿ, ರಾಷ್ಟ್ರಪತಿ ಭವನ ಅಥವಾ ಸಂಸತ್ ಭವನಕ್ಕೆ ಮೆರವಣಿಗೆ ಮಾಡಬಹುದು ಎಂಬ ಹಿನ್ನೆಲೆಯಲ್ಲಿ ಪೊಲೀಸರು ದೆಹಲಿಯ ಪ್ರಮುಖ ರಸ್ತೆಗಳ ಸಂಚಾರವನ್ನು ನಿಷೇಧಿಸಿದ್ದಾರೆ.  ಅದರಲ್ಲೂ ಎಐಸಿಸಿ ಕಚೇರಿಗೆ ಹೋಗುವ ಅಕ್ಬರ್ ರಸ್ತೆ, ಮೌಲಾನಾ ಆಜಾದ್ ರಸ್ತೆ, ಜನಪತ್ ರಸ್ತೆ, ಅಬ್ದುಲ್ ಕಲಾಂ ರಸ್ತೆ, ಮೋತಿಲಾಲ್ ಓರಾ ರಸ್ತೆಗಳ ಸಂಚಾರವನ್ನು ಕಟ್ಟುನಿಟ್ಟಾಗಿ ನಿಷೇಧ ಮಾಡಿದ್ದಾರೆ‌.
Published by:Divya D
First published: