• Home
  • »
  • News
  • »
  • national-international
  • »
  • Congress: ಕಾಂಗ್ರೆಸ್​ ಅಧ್ಯಕ್ಷೀಯ ಕಣದಲ್ಲಿ ತರೂರ್​ ಬಲ ದುಪ್ಪಟ್ಟು: ಎದುರಾಳಿಗಳಿಲ್ಲದ ಕೈ ನಾಯಕನಿಗೆ ಗಾಂಧಿ ಕುಟುಂಬದ ಬೆಂಬಲ!

Congress: ಕಾಂಗ್ರೆಸ್​ ಅಧ್ಯಕ್ಷೀಯ ಕಣದಲ್ಲಿ ತರೂರ್​ ಬಲ ದುಪ್ಪಟ್ಟು: ಎದುರಾಳಿಗಳಿಲ್ಲದ ಕೈ ನಾಯಕನಿಗೆ ಗಾಂಧಿ ಕುಟುಂಬದ ಬೆಂಬಲ!

ಶಶಿ ತರೂರ್

ಶಶಿ ತರೂರ್

ರಾಜಸ್ಥಾನ ಕಾಂಗ್ರೆಸ್​ನಲ್ಲಿ ಉದ್ಭವಿಸಿರುವ ಬಿಕ್ಕಟ್ಟಿನ ನಂತರ ಇದೀಗ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ಶಶಿ ತರೂರ್ ಅವರ ಉತ್ಸಾಹ ಹೆಚ್ಚಿದೆ. ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಯಲ್ಲಿ ತನಗೆ ಗಾಂಧಿ ಕುಟುಂಬದ ಬೆಂಬಲವಿದೆ ಎಂದು ಕಾಂಗ್ರೆಸ್ ಲೋಕಸಭಾ ಸಂಸದ ಶಶಿ ತರೂರ್ ಹೇಳಿದ್ದಾರೆ.

ಮುಂದೆ ಓದಿ ...
  • Share this:

ಜೈಪುರ(ಸೆ.26):  ರಾಜಸ್ಥಾನ ಕಾಂಗ್ರೆಸ್​ನಲ್ಲಿ (Rajasthan Comgress) ಉದ್ಭವಿಸಿರುವ ಬಿಕ್ಕಟ್ಟಿನ ನಂತರ ಇದೀಗ ಕಾಂಗ್ರೆಸ್ ಅಧ್ಯಕ್ಷರ (Congress Presifdent) ಆಯ್ಕೆಗೆ ಸಂಬಂಧಿಸಿದಂತೆ ಶಶಿ ತರೂರ್ ಅವರ ಉತ್ಸಾಹ ಹೆಚ್ಚಿದೆ. ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗೆ ಗಾಂಧಿ ಕುಟುಂಬದ ಬೆಂಬಲವಿದೆ ಎಂದು ಕಾಂಗ್ರೆಸ್ ಲೋಕಸಭಾ ಸಂಸದ ಶಶಿ ತರೂರ್ (Shashi Tharoor) ಹೇಳಿದ್ದಾರೆ. ಕೇರಳ ಮತ್ತು ದೇಶದ ಇತರ ಕಾಂಗ್ರೆಸ್ ಪಕ್ಷದ ಬಹುತೇಕ ಕಾರ್ಯಕರ್ತರು ತನ್ನನ್ನು ಬೆಂಬಲಿಸುತ್ತಿದ್ದಾರೆ ಎಂದು ತರೂರ್ ಹೇಳಿದರು. ಅವರನ್ನು ವಿರೋಧಿಸುವವರಿಗೆ ಹೆಚ್ಚಿನ ಶಕ್ತಿ ಇಲ್ಲ. ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಅವರ ಮುಂದೆ ಸ್ಪರ್ಧಿಸಲು ಯಾರೂ ಇಲ್ಲ ಎಂದೂ ಅವರು ಹೇಳಿದ್ದಾರೆ.


ಇದನ್ನೂ ಓದಿ:  ನಿರ್ಭಯಾ ತಾಯಿ ಪಾತ್ರವನ್ನು ನನಗೆ ಕೊಡಿ ಎಂದ ಸ್ಯಾಂಡಲ್​ವುಡ್​ ನಟಿ!


ಅಕ್ಟೋಬರ್ 17 ರಂದು ನಡೆಯಲಿರುವ ಎಐಸಿಸಿ ಅಧ್ಯಕ್ಷರ ಚುನಾವಣೆಯಲ್ಲಿ ತಿರುವನಂತಪುರಂ ಸಂಸದ ತರೂರ್ ಅವರು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರನ್ನು ಎದುರಿಸುವ ಸಾಧ್ಯತೆಯಿದೆ. ನಾನು ನಾಮಪತ್ರ ಸಲ್ಲಿಸಿದಾಗ ನನಗೆ ಸಿಗುತ್ತಿರುವ ಬೆಂಬಲವನ್ನು ನೀವು ನೋಡುತ್ತೀರಿ ಎಂದು ತರೂರ್ ಹೇಳಿದ್ದಾರೆ. ಬಹುತೇಕ ರಾಜ್ಯಗಳಿಂದ ಪಕ್ಷದ ಕಾರ್ಯಕರ್ತರ ಬೆಂಬಲ ಸಿಕ್ಕರೆ ನಾನು ಕಣದಲ್ಲಿರುತ್ತೇನೆ. ದೇಶದ ವಿವಿಧ ಭಾಗಗಳಿಂದ ಅನೇಕ ಜನರು ಚುನಾವಣೆಯಲ್ಲಿ ಸ್ಪರ್ಧಿಸುವಂತೆ ನನಗೆ ಮನವಿ ಮಾಡಿದ್ದಾರೆ ಎಂದು ತರೂರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.


ಒಂದು ವಾರದಲ್ಲಿ ನಾಮಪತ್ರ ಸಲ್ಲಿಕೆ


ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಒಂದು ವಾರದೊಳಗೆ ನಾಮಪತ್ರ ಸಲ್ಲಿಸಲು ವ್ಯವಸ್ಥೆ ಮಾಡಲಾಗಿದೆ. ಈ ಪ್ರಕ್ರಿಯೆ ಪ್ರಾರಂಭವಾದ ಬೆನ್ನಲ್ಲೇ ತರೂರ್ ಶನಿವಾರ ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಗೆ ಸ್ಪರ್ಧಿಸಲು ನಾನು ಆಸಕ್ತಿ ಹೊಂದಿದ್ದೇನೆ ಆದರೆ ಸೆಪ್ಟೆಂಬರ್ 30 ರ ನಂತರವಷ್ಟೇ ನಿಜವಾದ ಚಿತ್ರಣ ಸ್ಪಷ್ಟವಾಗಲಿದೆ ಎಂದು ತರೂರ್ ಹೇಳಿದ್ದಾರೆ. ನಾಮಪತ್ರ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನಾಂಕ ಎಂಬುವುದು ಉಲ್ಲೇಖನೀಯ.


ಗೆಹ್ಲೋಟ್​ ಕಾಂಗ್ರೆಸ್​ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸೋದು ಡೌಟ್​!


ಅಶೋಕ್ ಗೆಹ್ಲೋಟ್ ಕಾಂಗ್ರೆಸ್​ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ ವಿಚಾರದಲ್ಲಿ ಅನುಮಾನ ಮೂಡಿದೆ. ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ ಮತ್ತು ರಾಜಸ್ಥಾನದಲ್ಲಿ ಸರ್ಕಾರದ ನಾಯಕತ್ವ ಬದಲಾವಣೆಯ ನಡುವೆ ಉದ್ಭವಿಸಿದ ಪರಿಸ್ಥಿತಿಯ ನಂತರ, ಈಗ ರಾಜಕೀಯ ಸಮೀಕರಣಗಳು ಬದಲಾಗಲಾರಂಭಿಸಿವೆ. ರಾಜಸ್ಥಾನದ ಅಧಿಕಾರಕ್ಕಾಗಿ ತಡರಾತ್ರಿಯ ಹೋರಾಟದ ನಂತರ, ಈಗ ಅಶೋಕ್ ಗೆಹ್ಲೋಟ್ ನಾಮಪತ್ರ ಸಲ್ಲಿಸುತ್ತಾರೋ ಇಲ್ಲವೋ ಎಂಬ ಅನುಮಾನ ಎದ್ದಿದೆ. ಗೆಹ್ಲೋಟ್ ಪರ ಶಾಸಕರು ಅಧ್ಯಕ್ಷ ನಾಮಪತ್ರ ಸಲ್ಲಿಸುವುದನ್ನು ವಿರೋಧಿಸಿದ್ದಾರೆ ಎಂದು ಹೇಳಲಾಗುತ್ತಿದೆ.


ಇದನ್ನೂ ಓದಿ: 7 ವರ್ಷ ಹಗ್ಗಜಗ್ಗಾಟದ ನಿರ್ಭಯಾ ಅತ್ಯಾಚಾರ ಪ್ರಕರಣ ನೇಣು ಶಿಕ್ಷೆಯೊಂದಿಗೆ ಸಮಾಪ್ತಿ; ಸೂರ್ಯೋದಯಕ್ಕೂ ಮುನ್ನವೇ ಕಣ್ಮುಚ್ಚಿದ ಅಪರಾಧಿಗಳು

 ಮೂಲಗಳನ್ನು ನಂಬುವುದಾದರೆ, ಭಾನುವಾರ ರಾತ್ರಿ ಸಂಪುಟ ಸಚಿವ ಶಾಂತಿ ಧರಿವಾಲ್ ಮತ್ತು ವಿಧಾನಸಭೆ ಸ್ಪೀಕರ್ ಡಾ.ಸಿ.ಪಿ.ಜೋಶಿ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ, ಗೆಹ್ಲೋಟ್ ಪರ ಶಾಸಕರು ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸುವ ಆಲೋಚನೆಯನ್ನು ಕೈಬಿಡುವಂತೆ ಸೂಚಿಸಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಚುನಾವಣೆ ಬಳಿಕ ಏನು ಬೇಕಾದರೂ ನಡೆಯಬಹುದು. ಹೀಗಾಗಿ ಈ ವಿಚಾರವಾಗಿ ಬಹಳಷ್ಟು ಯೋಚಿಸಿ ನಿರ್ಧಾರ ತೆಗೆದುಕೊಳ್ಳುವಂತೆ ಶಾಸಕರು ಗೆಹ್ಲೋಟ್​ಗೆ ಸೂಚಿಸಿದ್ದಾರೆ. ಅದೇ ಸಮಯದಲ್ಲಿ, ಭಾನುವಾರ ರಾತ್ರಿಯ ಬೆಳವಣಿಗೆಗಳ ನಂತರ, ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಸೃಷ್ಟಿಯಾಗಿದೆ.

Published by:Precilla Olivia Dias
First published: