ವಿದೇಶಗಳು ಭಾರೀ ಪ್ರಮಾಣದಲ್ಲಿ ಲಸಿಕೆ ಸಂಗ್ರಹಿಸುತ್ತಿದ್ದರೆ ಪ್ರಧಾನಿ ಮೋದಿ ಪಿಆರ್ ಕೆಲಸದಲ್ಲಿ ತೊಡಗಿದ್ದಾರೆ; ಮಲ್ಲಿಕಾರ್ಜುನ ಖರ್ಗೆ ಕಿಡಿ

Covid-19 Crisis: ಕೊರೋನಾ ಅಲೆಯನ್ನು ಮನಗೊಂಡು ವಿದೇಶಗಳು ಭಾರೀ ಪ್ರಮಾಣದಲ್ಲಿ ಲಸಿಕೆ ಸಂಗ್ರಹಿಸುತ್ತಿವೆ. ಆದರೆ ನಮ್ಮ ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ವರ್ಚಸ್ಸು ಹೆಚ್ಚಿಸಿಕೊಳ್ಳುವ ಪಿಆರ್ ಕೆಲಸದಲ್ಲಿ ತೊಡಗಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಕಿಡಿ ಕಾರಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ.

ಮಲ್ಲಿಕಾರ್ಜುನ ಖರ್ಗೆ.

  • Share this:
ನವದೆಹಲಿ, ಮೇ 3: ದೇಶದಲ್ಲಿ ಎರಡನೇ ಸುತ್ತಿನಲ್ಲಿ ಮಾರಕ‌ ಕಾಯಿಲೆ ಕೊರೋನಾ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಪ್ರತಿ ದಿನ‌ ಮೂರೂವರೆ ಲಕ್ಷಕ್ಕೂ ಹೆಚ್ಚು ಜನರು ಕೊರೊನಾ ಸೋಂಕು ಪೀಡಿತರಾಗುತ್ತಿದ್ದಾರೆ. ಕೊರೋನಾ ಲಸಿಕೆ ಕೊರತೆ ಕೂಡ ವ್ಯಾಪಕವಾಗಿ ಕೇಳಿ ಬರುತ್ತಿದೆ. ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು, 'ಕೊರೋನಾ ಅಲೆಯನ್ನು ಮನಗೊಂಡು ವಿದೇಶಗಳು ಭಾರೀ ಪ್ರಮಾಣದಲ್ಲಿ ಲಸಿಕೆ ಸಂಗ್ರಹಿಸುತ್ತಿವೆ. ಆದರೆ ನಮ್ಮ ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ವರ್ಚಸ್ಸು ಹೆಚ್ಚಿಸಿಕೊಳ್ಳುವ ಪಿಆರ್ ಕೆಲಸದಲ್ಲಿ ತೊಡಗಿದ್ದಾರೆ ಎಂದು ಕಿಡಿ ಕಾರಿದ್ದಾರೆ.

ಭಾರತದಲ್ಲಿ ಇರುವ 136 ಕೋಟಿ ಜನರಿಗೆ ಕೇಂದ್ರ ಸರ್ಕಾರ ಕೇವಲ 1.65 ಕೋಟಿ ಕೊರೊನಾ ಲಸಿಕೆಗಳನ್ನು ಖರೀದಿ ಮಾಡಿದೆ. ದೇಶದ ಪ್ರತಿಯೊಬ್ಬರಿಗೂ ಉಚಿತಚಾಗಿ ಲಸಿಕೆಗಳನ್ನು ನೀಡಬೇಕಾಗಿತ್ತು. ಆದರೆ ಸರ್ಕಾರ ಪ್ರೈವೇಟ್ ಕಂಪನಿಗಳು ಲಾಭ ಮಾಡಿಕೊಳ್ಳಲು ಬಿಟ್ಟದೆ. ಇದರಿಂದ ದೇಶದ ಜನಕ್ಕೆ ಲಸಿಕೆ ಸಿಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇನ್ನೊಂದೆಡೆ ಕಾಂಗ್ರೆಸ್ ನಾಯಕರೂ ಆದ ಸಂಸದ ರಾಹುಲ್ ಗಾಂಧಿ ಅವರು 'ವ್ಯಾಪಕವಾಗಿ ಹರಡುತ್ತಿರುವ ಕೊರೋನಾವನ್ನು ನಿಯಂತ್ರಿಸಲು ಈಗ ಲಾಕ್ಡೌನ್ ಒಂದೇ ಪರಿಹಾರ' ಎಂದು ಹೇಳಿದ್ದಾರೆ. ಈ ಮೂಲಕ ರಾಹುಲ್ ಗಾಂಧಿ ಅವರು ಪರೋಕ್ಷವಾಗಿ ಕೇಂದ್ರ ಸರ್ಕಾರದ ಮೇಲೆ ಲಾಕ್ಡೌನ್ ಹೇರುವಂತೆ ಆಗ್ರಹಿಸಿದ್ದಾರೆ. ಟ್ಬೀಟ್ ಮೂಲಕ ಕೇಂದ್ರ ಸರ್ಕಾರವನ್ನು ಒತ್ತಾಯಿಸಿರುವ ರಾಹುಲ್ ಗಾಂಧಿ ಅವರು 'ಲಾಕ್ಡೌನ್ ಮಾಡುವುದರ ಜೊತೆಗೆ ಬಡವರ ಖಾತೆಗೆ ನೇರವಾಗಿ ಹಣ ನೀಡುವ 'ನ್ಯಾಯ್' (NYAY) ಯೋಜನೆಯನ್ನು ಜಾರಿಗೊಳಿಸಿ ಎಂದು ಕೂಡ ಹೇಳಿದ್ದಾರೆ.

ಲಾಕ್ಡೌನ್ ಮಾಡುವುದಾದರೆ ಬಡವರನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಅವರ ಖಾತೆಗಳಿಗೆ ನೇರವಾಗಿ ಹಣ ಹಾಕಿ ಎಂದು ಮೊದಲಿನಿಂದಲೂ ಒತ್ತಾಯ ಮಾಡುತ್ತಿರುವ ರಾಹುಲ್ ಗಾಂಧಿ ಅವರು ಈಗಲೂ 'ನ್ಯಾಯ್ ಯೋಜನೆ ಮೂಲಕ ಜನಕ್ಕೆ ಹಣ ಕೊಟ್ಟು ಲಾಕ್ಡೌನ್ ಮಾಡಿ. ಇದರಿಂದ ಅಮಾಯಕ ಜನರು ಸಾಯುವುದು ತಪ್ಪುತ್ತದೆ‌' ಎಂದು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಇಲ್ಲದೆ ಕೇಂದ್ರ ಸರ್ಕಾರದ ನಿಷ್ಕ್ರಿಯತೆಯು ಅಮಾಯಕ ಜನರನ್ನು ಕೊಲ್ಲುತ್ತಿದೆ ಎಂದು ಹೇಳಿದ್ದಾರೆ.‌ ನಿನ್ನೆ (ಮೇ 3ರಂದು  ಕರ್ನಾಟಕದ ಚಾಮರಾಜನಗರದಲ್ಲಿ 24 ಗಂಟೆಗಳ ಅವಧಿಯಲ್ಲಿ ಆಮ್ಲಜನಕ ಸಿಗದೆ 24 ಜನ ಸಾವನ್ನಪ್ಪಿದ ಘಟನೆ ಬಗ್ಗೆ 'ಇವು ಸಾವುಗಳೋ ಅಥವಾ ಕೊಲೆಗಳೋ' ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದರು.

ಕೊರೋನಾ ವಿಷಯದಲ್ಲಿ ಸಮಸ್ಯೆಗಳ ಸರಮಾಲೆಯೇ ಸೃಷ್ಟಿಯಾಗಿರುವ ಹಿನ್ನಲೆಯಲ್ಲಿ ಸ್ವಯಂ ದೂರು ದಾಖಲಿಸಿಕೊಂಡಿರುವ ಸುಪ್ರೀಂ ಕೋರ್ಟ್ ರಜಾದಿನವಾದ ಭಾನುವಾರ ವಿಚಾರಣೆ ನಡೆಸಿ 'ಕೊರೋನಾ ‌ನಿಯಂತ್ರಣಕ್ಕೆ ಲಾಕ್ಡೌನ್ ಆಯ್ಕೆಯನ್ನು ಗಂಭೀರವಾಗಿ ಪರಿಗಣಿಸಿ' ಎಂದು ಆದೇಶ ಹೊರಡಿಸಿದೆ.
Published by:Sushma Chakre
First published: