Congress Target 2024 Election: ಕಾಂಗ್ರೆಸ್ ಮಾಸ್ಟರ್ ಪ್ಲಾನ್; ರಾಜಸ್ಥಾನದ ಚಿಂತನ ಶಿಬಿರದಲ್ಲಿ ಏನೆಲ್ಲಾ ನಡೆಯುತ್ತೆ?

ಇದಕ್ಕೂ ಮೊದಲು ಬರುವ ಗುಜರಾತ್, ಹಿಮಾಚಲ ಪ್ರದೇಶ, ಕರ್ನಾಟಕ, ಮಧ್ಯಪ್ರದೇಶ, ಛತ್ತೀಸ್ಗಢ ಹಾಗೂ ರಾಜಸ್ಥಾನಗಳ ವಿಧಾನಸಭಾ ಚುನಾವಣೆಗಳಿಗೆ ಯಾವ ರೀತಿಯ ಸನ್ನದ್ಧವಾಗಬೇಕು ಎಂಬ ಬಗ್ಗೆ ಕೂಡ ಚರ್ಚೆ ಆಗಲಿದೆ.

ಕಾಂಗ್ರೆಸ್ ನಾಯಕರೊಂದಿಗೆ ರಾಹುಲ್​ ಗಾಂಧಿ (ಸಂಗ್ರಹ ಚಿತ್ರ)

ಕಾಂಗ್ರೆಸ್ ನಾಯಕರೊಂದಿಗೆ ರಾಹುಲ್​ ಗಾಂಧಿ (ಸಂಗ್ರಹ ಚಿತ್ರ)

  • Share this:
ನವದೆಹಲಿ, ಏ. 19: ನಿರ್ಣಾಯಕವಾಗಿರುವ 2024ರ ಲೋಕಸಭಾ ಚುನಾವಣೆಗೆ (2024 Parliment Elections) ಈಗಿನಿಂದಲೇ ತಯಾರಿ ಆರಂಭಿಸುತ್ತಿರುವ ಕಾಂಗ್ರೆಸ್ ಪಕ್ಷವು (Congress Party) ಪಕ್ಷ ಸಂಘಟನೆ, ಸದಸ್ಯತ್ವ ನೊಂದಣಿ‌, ಅಭ್ಯರ್ಥಿಗಳ ಹುಡುಕಾಟದ ಬಗ್ಗೆ ನೀತಿ ನಿಲುವುಗಳನ್ನು ರೂಪಿಸಲು ಮುಂದಿನ ತಿಂಗಳು ರಾಜಸ್ಥಾನದಲ್ಲಿ (Rajasthan) ಚಿಂತನ ಶಿಬಿರ (Chinthana Shivir) ಆಯೋಜನೆ ಮಾಡುತ್ತಿದೆ. ಮೇ ತಿಂಗಳ ಎರಡನೇ ವಾರದಲ್ಲಿ ರಾಜಸ್ಥಾನದ ಉದಯಪುರದಲ್ಲಿ ಚಿಂತನ ಶಿಬಿರ ನಡೆಯಲಿದ್ದು  ದೇಶಾದ್ಯಂತ ಕಾಂಗ್ರೆಸ್ ಪಕ್ಷದ ಸುಮಾರು 700 ಪದಾಧಿಕಾರಿಗಳು ಮತ್ತು ಮುಖಂಡರು ಭಾಗಿ ಆಗಲಿದ್ದಾರೆ.

ಇದನ್ನೂ ಓದಿ:Rahul Gandhi ಆಗಮನಕ್ಕೆ ಶಬರಿಯಂತೆ ಕಾಯುತ್ತಿರುವ ವೃದ್ಧೆ: ₹50 ಲಕ್ಷ ಆಸ್ತಿ ಕೂಡ ರಾಹುಲ್ ಹೆಸರಿಗೆ!

ಟಾರ್ಗೆಟ್ 2022, 2023, 2024!
ಕಾಂಗ್ರೆಸ್ ಚಿಂತನ ಶಿಬಿರದಲ್ಲಿ ಎರಡು ಮುಖ್ಯ ವಿಷಯಗಳ ಬಗ್ಗೆ ಚರ್ಚೆ ಆಗುತ್ತದೆ ಎಂದು ತಿಳಿದುಬಂದಿದೆ. ಮೊದಲನೆಯದಾಗಿ 2024ರ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ಹೇಗೆ ಸಜ್ಜಾಗಬೇಕು ಎಂದು. ಎರಡನೇಯದಾಗಿ  2024ರ ಲೋಕಸಭಾ ಚುನಾವಣೆಗೂ ಮೊದಲು ಬರುವ ಗುಜರಾತ್, ಹಿಮಾಚಲ ಪ್ರದೇಶ, ಕರ್ನಾಟಕ, ಮಧ್ಯಪ್ರದೇಶ, ಛತ್ತೀಸ್ಗಢ ಹಾಗೂ ರಾಜಸ್ಥಾನಗಳ ವಿಧಾನಸಭಾ ಚುನಾವಣೆಗಳಿಗೆ ಯಾವ ರೀತಿಯ ಸನ್ನದ್ಧವಾಗಬೇಕು ಎಂದು. ವಿಧಾನಸಭಾ ಚುನಾವಣೆಗಳಲ್ಲಿ ಉತ್ತಮ ಪ್ರದರ್ಶನ ನೀಡಿ ಲೋಕಸಭಾ ಚುನಾವಣೆಗೆ ಪಕ್ಷದ ಪರ ವಾತಾವರಣ ನಿರ್ಮಿಸುವ ಬಗ್ಗೆಯೂ ಚಿಂತನ ಶಿಬಿರದಲ್ಲಿ ಚರ್ಚೆ ನಡೆಯಲಿದೆ ಎನ್ನಲಾಗುತ್ತಿದೆ.

ಪ್ರಶಾಂತ್ ಕಿಶೋರ್ ಜೊತೆ ಚರ್ಚೆ
2024ರ ಲೋಕಸಭಾ ಚುನಾವಣೆ ಹಾಗೂ ಅದಕ್ಕೂ ಮುನ್ನ ಬರುವ ಹಲವು ರಾಜ್ಯಗಳ ವಿಧಾನಸಭಾ ಚುನಾವಣೆಗಳಿಗೆ ಸಮರ್ಪಕವಾದ ಕಾರ್ಯತಂತ್ರ ರೂಪಿಸುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಈಗಾಗಲೇ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಜೊತೆ ಹಲವು ಸುತ್ತಿನ ಸಭೆ ನಡೆಸಿದ್ದಾರೆ. ಇದಲ್ಲದೆ ಕಾಂಗ್ರೆಸ್ ಹಿರಿಯ ನಾಯಕರ ಸಭೆಗೂ ಪ್ರಶಾಂತ್ ಕಿಶೋರ್ ಅವರನ್ನು ಆಹ್ವಾನಿಸಿದ್ದಾರೆ. ಏಪ್ರಿಲ್ 16, 18 ಮತ್ತು 19ರಂದು ಕಾಂಗ್ರೆಸ್ ಹಿರಿಯ ನಾಯಕರ ಸಭೆಯಲ್ಲಿ ಪಾಲ್ಗೊಂಡಿದ್ದ ಪ್ರಶಾಂತ್ ಕಿಶೋರ್ ಪಾಯಿಂಟ್ ಪ್ರೆಸೆಂಟೇಷನ್ ನೀಡಿದ್ದಾರೆ.

ಇದನ್ನೂ ಓದಿ: Congress ಸೇರುತ್ತಾರಾ 'ಚುನಾವಣಾ ತಂತ್ರಗಾರ'? ಸೋನಿಯಾ ಗಾಂಧಿ-ಪ್ರಶಾಂತ್ ಕಿಶೋರ್ ಭೇಟಿ ಹಿಂದಿದೆಯಾ ಲೆಕ್ಕಾಚಾರ?

370ರಿಂದ 400 ಕ್ಷೇತ್ರದಲ್ಲಿ ಸ್ಪರ್ಧೆಗೆ ಸಲಹೆ
ಹಿರಿಯ ನಾಯಕರ ಸಭೆಯಲ್ಲಿ ಪ್ರಶಾಂತ್ ಕಿಶೋರ್ 543 ಲೋಕಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಪಕ್ಷದ ನೆಲೆ ಪ್ರಬಲವಾಗಿರುವ 370ರಿಂದ 400 ಕಡೆ ಮಾತ್ರ ಸ್ಪರ್ಧೆ ಮಾಡಬೇಕು. ಕೆಲವು ಕಡೆ ಸಮಾನಮನಸ್ಕ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಳ್ಳಬೇಕು. ಹಾಗಾದರೆ ಮಾತ್ರ ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬಹುದು ಎಂದು ಹೇಳಿದ್ದರು. ಅಲ್ಲದೆ ರಾಜ್ಯವಾರು ಹೇಗೆ ಕಾರ್ಯತಂತ್ರ ರೂಪಿಸಬೇಕು ಎಂಬುದರ ಕುರಿತಾಗಿಯೂ ತಮ್ಮ ಪವರ್ ಪಾಯಿಂಟ್ ಪ್ರೆಸೆಂಟೇಷನ್ ನಲ್ಲಿ ಮಾಹಿತಿ ನೀಡಿದ್ದರು. ಅಲ್ಲದೆ ವಿಧಾನಸಭಾ ಚುನಾವಣೆ ಗೆಲ್ಲಲು ಪ್ರತ್ಯೇಕವಾದ ಕಾರ್ಯತಂತ್ರ ರೂಪಿಸುವ ಬಗ್ಗೆ ಚರ್ಚೆ ನಡೆಸಿದ್ದರು‌. ಉದಾಹರಣೆಗೆ ಇಂದು ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗೆ ರೂಪಿಸಬೇಕಾದ ಕಾರ್ಯತಂತ್ರದ ಕುರಿತು ಪವರ್ ಪಾಯಿಂಟ್ ಪ್ರೆಸೆಂಟೇಷನ್ ನೀಡಿದರು.

ಮುಂದಿನ‌ ಸಭೆಯಲ್ಲಿ ಕರ್ನಾಟಕದ ಬಗ್ಗೆ ಚರ್ಚೆ ಸಾಧ್ಯತೆ
ಮುಂದಿನ ಸಭೆಯ ವೇಳೆ ಮುಂದಿನ‌ ವರ್ಷ ನಡೆಯುವ ಕರ್ನಾಟಕ ವಿಧಾನಸಭಾ ಚುನಾವಣೆ ಬಗ್ಗೆ ಕೂಡ ಚರ್ಚೆ ಆಗುವ‌ ಸಾಧ್ಯತೆ ಇದೆ.‌ ಆಗ ಕರ್ನಾಟಕದವರೇಯಾದ   ಮುತ್ಸದಿ, ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಕರೆಯುವ ಸಾಧ್ಯತೆಯೂ ಇದೆ ಎಂದು ಹೇಳಲಾಗುತ್ತಿದೆ.
Published by:Kavya V
First published: